ರಾಜ್ಯಮಟ್ಟದ ಕ್ರೀಡಾಕೂಟ: ಆರ್‌ಟಿಇಎಸ್ ಕಾಲೇಜು ವಿದ್ಯಾರ್ಥಿಗಳ ಆಯ್ಕೆ
State-level sports meet: Selection of RTES College students
ರಾಣೇಬೆನ್ನೂರು: 26 ಹಾವೇರಿಯಲ್ಲಿ ನಡೆದ ಪ್ರಸಕ್ತ ಸಾಲಿನ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಸ್ಥಳೀಯ ಆರಿ್ಟ.ಇ. ಎಸ್ ಕಾಲೇಜಿನ 35 ವಿದ್ಯಾರ್ಥಿಗಳು ಆಯ್ಕೆಯಾಗಿ ಸಾಧನೆ ನ
ಮೆರೆದಿದ್ದಾರೆ. ಬಾಲಕಿಯರ ವಿಭಾಗದಲ್ಲಿ 800 ಮೀಟರ್ ಓಟ. 3000 ಮೀಟರ್ ಓಟ, ಗುಡ್ಡಗಾಡು ಓಟ, ಪೋಲೊ ವಾರ್ಡ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡರು.
ಜೊತೆಗೆ ಗುಂಪು ಆಟಗಳಾದ. ಹಾಕಿ, ಥ್ರೋಬಾಲ್ , ಹ್ಯಾಂಡ್ ಬಾಲ್ , ಖೋ ಖೋ, ಆಟಗಳಲ್ಲಿ ವಿಜೇತರಾಗಿ ಮತ್ತು ಬಾಲಕರ ವಿಭಾಗದಲ್ಲಿ ಗುಡ್ಡಗಾಡು ಓಟ, ಕುಸ್ತಿಯಲ್ಲಿ 5 ವಿದ್ಯಾರ್ಥಿಗಳು, ಥ್ರೋಬಾಲ್. ಹಾಕಿ, ಖೋಖೋ, ಆಟಗಳಲ್ಲೂ ಭಾಗವಹಿಸಿ ವಿಜೇತರಾಗಿದ್ದಾರೆ.
ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದು ಸುಮಾರು 35 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆಂದು ಕಾಲೇಜಿನ ದೈಹಿಕ ಉಪನ್ಯಾಸಕ ಹನುಮಂತ ಮಸ್ತಿ ತಿಳಿಸಿದ್ದಾರೆ.
ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಸುಭಾಷ್ ಸಾಹುಕಾರ್, ಅಧ್ಯಕ್ಷ ಡಾ. ಸಂಜಯ್ ಸಾಹುಕಾರ್, ಕಾರ್ಯಧ್ಯಕ್ಷೆ ಸೀತಾ ಕೋಟಿ, ಪ್ರಾಚಾರ್ಯ ಸುಮಾ ಹೊಸಮನಿ, ದೈಹಿಕ ಉಪನ್ಯಾಸಕ ಹನುಮಂತ ಮಸ್ತಿ, ಉಪನ್ಯಾಸಕರಾದ ಶಂಭು ಕಡೂರ್, ರಾಜು ಲಮಾಣಿ ಸೇರಿದಂತೆ ಬೋಧಕ ಬೋಧಕೇತರ ಸಿಬ್ಬಂದಿಗಳು ಸನ್ಮಾನಿಸಿ, ಶುಭ ಹಾರೈಸಿದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 