ಗವಿಸಿದ್ದೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ರಾಜ್ಯಮಟ್ಟದ ಕಾರ್ಯಗಾರ ಯಶಸ್ವಿ
State-level workshop at Gavisiddeshwar College of Education a success
ಕೊಪ್ಪಳ 24: ಲೇಖನಗಳ ಸಿದ್ಧತೆ ಹಾಗೂ ಬರವಣಿಗೆ ಒಂದು ಕಲೆ ಹಾಗೂ ಕೌಶಲ್ಯವಾಗಿದ್ದು ಅದನ್ನು ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ರೂಢಿಸಿಕೊಳ್ಳುವದು ಅತಿ ಅವಶ್ಯಕ ಎಂದು ಕಲಬುರಗಿ ವಿಶ್ವವಿದ್ಯಾಲಯದ ಗ್ರಂಥ ಪಾಲಕರು ಹಾಗೂ ನ್ಯಾಕ್ ಸಂಯೋಜಕರಾದ ಡಾ. ಸುರೇಶ ಜಂಗೆ ಅವರು ಹೇಳಿದರು.
ಅವರು ನಗರದ ಶ್ರೀಗವಿಸಿದ್ದೇಶ್ವರ ಶಿಕ್ಷಣ (ಬಿ.ಈಡಿ)ಮಹಾವಿದ್ಯಾಲಯದ ಐಕ್ಯೂಎಸಿ ಕೋಶದ ಅಡಿಯಲ್ಲಿ ಸಂಶೋಧನಾ ಪ್ರಕಟಣೆಗಳು ಮತ್ತು ಉಲ್ಲೇಖಗಳಿಗಾಗಿ ಅಂತರ್ಜಾಲ ವೇದಿಕೆಗಳು (ಆನ್ಲೈನ್ ಫ್ಲ್ಯಾಟ್ ಫಾರ್ಮ್ಸ್ ಫಾರ್ ರಿಸರ್ಚ್ ಪಬ್ಲಿಕೇಷನ್ ಅಂಡ್ ಸೈಟೇಶನ್) ಎಂಬ ವಿಷಯದ ಮೇಲೆ ಇಂದು ನಡೆದ ರಾಜ್ಯಮಟ್ಟದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಲೇಖನಗಳನ್ನು ಯಾವ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಪತ್ರಿಕೆಗಳಲ್ಲಿ ಪ್ರಕಟಿಸಬೇಕು ಮತ್ತು ಲೇಖನಗಳ ಸಿದ್ಧತೆ ಹೇಗೆ ಮಾಡಿಕೊಳ್ಳಬೇಕು ಎನ್ನುವದನ್ನು ತಿಳಿದುಕೊಳ್ಳಬೇಕು, ಈ ಕಾರ್ಯಾಗಾರದಲ್ಲಿ ಪಾಲ್ಗೋಳ್ಳುವುದರ ಮೂಲಕ ಸದುಪಯೋಗ ಪಡೆಯಿರಿ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಎಸ್.ಬಿ.ಕಂಬಾರ ಅವರು ವಹಿಸಿಕೊಂಡಿದ್ದರು. ಕಾರ್ಯಾಗಾರದ ಸಂಯೋಜಕರಾದ ಡಾ.ನೀಲಾಂಬಿಕೆ ಹುದ್ದಾರ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕಿ ಶೈಲಜಾ ಅರಳಲೇಮಠ ಅತಿಥಿ ಪರಿಚಯಿಸಿದರು. ಐಕ್ಯೂಎಸಿ ಸಂಯೋಜಕರಾದ ಡಾ.ಕವಿತಾ ವಂದಿಸಿದರು. ಸಾಯಂಕಾಲ ಕಾರ್ಯಕ್ರಮದ ಸಮಾರೋಪ ಸಮಾರಂಭ ಯಶಸ್ವಿಯಾಗಿ ಜರುಗಿತು ಕಾರ್ಯಗಾರದಲ್ಲಿ ರಾಜ್ಯದ ವಿವಿಧ ಜಿಲ್ಲೆಯ ಪ್ರತಿನಿಧಿಗಳು ಭಾಗವಹಿಸಿದ್ಧರು ಎಂದು ಶಿಕ್ಷಣ ಮಹಾ ವಿದ್ಯಾಲಯದ ಪ್ರಕಟಣೆಯಲ್ಲಿ ತಿಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 