ಸವದತ್ತಿ ಬಸ್ ನಿಲ್ದಾಣದಲ್ಲಿ ಅತ್ಯಾಧುನಿಕ ಶುದ್ಧ ಕುಡಿಯುವ ನೀರಿನ ಘಟಕ ಲೋಕಾರೆ​‍್ಣ

ಸವದತ್ತಿ ಬಸ್ ನಿಲ್ದಾಣದಲ್ಲಿ ಅತ್ಯಾಧುನಿಕ ಶುದ್ಧ ಕುಡಿಯುವ ನೀರಿನ ಘಟಕ ಲೋಕಾರೆ​‍್ಣ  State-of-the-art pure drinking water unit inaugurated at Savadatti bus station


ಸವದತ್ತಿ 21 : ನಗರದ ಕೆಎಸ್‌ಆರ್ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ಸಾರ್ವಜನಿಕರು ಹಾಗೂ ಪ್ರಯಾಣಿಕರಿಗೆ ಅನುಕೂಲವಾಗುವಂತೆ ನಿರ್ಮಿಸಲಾಗಿರುವ ಅತ್ಯಾಧುನಿಕ ತಂತ್ರಜ್ಞಾನದ ಶುದ್ಧ ಕುಡಿಯುವ ನೀರಿನ ಘಟಕವನ್ನು ಲೋಕಾರೆ​‍್ಣಗೊಳಿಸಲಾಯಿತು. 2026-27ನೇ ಸಾಲಿನ ಸ್ಥಳೀಯ ಶಾಸಕ ವಿಶ್ವಾಸ ವೈದ್ಯ ಅವರ ಪ್ರದೇಶಾಭಿವೃದ್ಧಿ ಅನುದಾನದಡಿ ಈ ನೂತನ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಲಾಗಿದೆ.

ಕಾಂಗ್ರೆಸ್ ಮುಖಂಡ ಅಶ್ವಥ್ ವೈದ್ಯ ಅವರು ಘಟಕಕ್ಕೆ ಚಾಲನೆ ನೀಡಿ ಸಾರ್ವಜನಿಕರಿಗೆ ಸಮರ​‍್ಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಶ್ವಥ್ ವೈದ್ಯ ಅವರು, ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರು ಕುಡಿಯುವ ನೀರಿಗಾಗಿ ಪರದಾಡುವುದನ್ನು ತಪ್ಪಿಸುವುದು ಹಾಗೂ ಶುದ್ಧ ಕುಡಿಯುವ ನೀರನ್ನು ಸುಲಭವಾಗಿ ಲಭ್ಯವಾಗುವಂತೆ ಮಾಡುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಬೇಸಿಗೆಯ ತೀವ್ರ ಬಿಸಿಲಿನ ಹಿನ್ನೆಲೆಯಲ್ಲಿ ಪ್ರಯಾಣಿಕರ ಹಿತದೃಷ್ಟಿಯಿಂದ ಅತಿ ಕಡಿಮೆ ದರದಲ್ಲಿ ಶುದ್ಧ ಕುಡಿಯುವ ನೀರು ಲಭ್ಯವಾಗುವಂತೆ ಮಾಡಿರುವುದಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು. ಸಮಾರಂಭದಲ್ಲಿ ಘಟಕದ ವ್ಯವಸ್ಥಾಪಕ ಕಿಟಕಿ ಅರುಣ್, ಹನುಮಂತಪ್ಪ ಭೋವಿ, ಬಿ.ಎನ್‌. ಪ್ರಭುನವರ, ಸಂತೋಷ ನೊರೆಯವರ, ಗೀರೀಶ್ ಮುನವಳ್ಳಿ, ಸುರೇಶ ತುಪ್ಪದ ಸೇರಿದಂತೆ ಬಸ್ ನಿಲ್ದಾಣದ ಅಧಿಕಾರಿಗಳು, ಸ್ಥಳೀಯ ಹಿರಿಯರು, ಗಣ್ಯರು ಹಾಗೂ ನೂರಾರು ಸಾರ್ವಜನಿಕರು ಉಪಸ್ಥಿತರಿದ್ದರು.