ರೂ.56.15 ಕೋಟಿ ಪರಿಷ್ಕೃತ ವೆಚ್ಚದಲ್ಲಿ ಕುಂದಾಪುರ ಒಳಚರಂಡಿ ಕಾಗಮಾರಿ ಅನುಷ್ಠಾನ
Statement by Urban Development and Town Planning Minister B.S. Suresh
ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಹೇಳಿಕೆ
ಬೆಳಗಾವಿ ಸುವರ್ಣಸೌಧ ಡಿ.12: ಕೇಂದ್ರ ಸರ್ಕಾರ ಪುರಸ್ಕೃತ ಯು.ಐ.ಡಿ.ಎಸ್.ಎಸ್.ಎಂ.ಟಿ ಯೋಜನೆಯಡಿ ಕುಂದಾಪುರ ಪಟ್ಟಣಕ್ಕೆ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಈ ಹಿಂದೆ ರೂ.48.14 ಕೋಟಿ ಅಂದಾಜು ವೆಚ್ಚಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿತ್ತು. ಸದ್ಯ ರೂ.56.15 ಕೋಟಿ ವೆಚ್ಚದ ಪರಿಷ್ಕೃತ ಯೋಜನೆ ರೂಪಿಸಲಾಗಿದ್ದು, ಶೀಘ್ರವೇ ಕಾಮಗಾರಿಯನ್ನು ಅನುಷ್ಠಾನಗೊಳಿಸುವುದಾಗಿ ನಗರಾಭಿವೃದ್ದಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಶುಕ್ರವಾರದ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಕಿರಣ್ ಕುಮಾರ ಕೋಡ್ಗಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು.ಯೋಜನೆಯಡಿ 39.50 ಕಿ.ಮೀ ಉದ್ದದ ಆಂತರಿಕ ಒಳಚರಂಡಿ ಕೊಳವೆ ಮಾರ್ಗ, 1485 ಮೆಷಿನ್ ಹೋಲ್, 6000 ಗೃಹ ಸಂಪರ್ಕ 5 ವೆಟ್ ವೆಲ್, 5.40 ಕಿ.ಮೀ ಏರು ಕೊಳವೆ ಮಾರ್ಗ ಹಾಗೂ 3 ತ್ಯಾಜ್ಯ ನೀರು ಶುದ್ಧೀಕರಣ ಘಟಕಗಳನ್ನು ನಿರ್ಮಿಸಲು ಅನುವು ಮಾಡಿಕೊಡಲಾಗಿತ್ತು. ಈ ಪೈಕಿ 31.50 ಕಿ.ಮೀ ಆಂತರಿಕ ಒಳಚರಂಡಿ ಕೊಳವೆ ಮಾರ್ಗ, 1160 ಮೆಷಿನ್ ಹೋಲ್, 1650 ಗೃಹ ಸಂಪರ್ಕ ಹಾಗೂ 2.30 ಕಿ.ಮೀ ಏರು ಕೊಳವೆ ಮಾರ್ಗಗಳ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಇದಕ್ಕೆ ಸುಮಾರು ರೂ.27 ಕೋಟಿಯಷ್ಟು ವೆಚ್ಚವಾಗಿದೆ ಎಂದು ಸಚಿವ ಬಿ.ಎಸ್.ಸುರೇಶ್ ತಿಳಿಸಿದರು.ವೆಟ್ ವೆಲ್ ಹಾಗೂ ತ್ಯಾಜ್ಯ ನೀರು ಶುದ್ದೀಕರಣ ಘಟಕಗಳ ನಿರ್ಮಾಣಕ್ಕೆ 2024ರ ಅಂತ್ಯದವರೆಗೆ ಜಾಗ ನೀಡಿರಲಿಲ್ಲ. ಈ ಹಿನ್ನಲೆಯಲ್ಲಿ ಇವುಗಳ ನಿರ್ಮಾಣ ಕಾರ್ಯ ತಡವಾಗಿದೆ. ಸದ್ಯ ನಿರ್ಮಾಣಕ್ಕೆ ಜಾಗ ಹಸ್ತಾಂತರಿಸಲಾಗಿದೆ. ಈ ಕಾಮಗಾರಿಗಳಿಗೆ ರೂ.33.77 ಕೋಟಿ ಯೋಜನೆ ಸಿದ್ದಪಡಿಸಲಾಗಿದೆ. ರೂ.13 ಕೋಟಿ ಯೋಜನೆಯ ಹಣವಿದ್ದು, ಸ್ವಚ್ಛ ಭಾರತ ಯೋಜನೆಯಡಿ ರೂ.6 ಕೋಟಿ ಅನುದಾನ ಹೊಂದಾಣಿಕೆ ಮಾಡಿಕೊಳ್ಳಲಾಗುವುದು. ಇದರ ಹೊರತಾಗಿಯೂ ರೂ.14 ಕೋಟಿಯಷ್ಟು ಹಣ ಬೇಕಾಗುವುದು. ಆರ್ಥಿಕ ಇಲಾಖೆ ಒಪ್ಪಿಗೆ ಪಡೆದು ಕಾಮಗಾರಿಯನ್ನು ಶೀಘ್ರ ಆರಂಭಿಸುವುದಾಗಿ ಸಚಿವ ಬಿ.ಎಸ್.ಸುರೇಶ್ ಮಾಹಿತಿ ನೀಡಿದರು.ಸರ್ಕಾರದಿಂದ ಅನುಷ್ಠಾನಗೊಳಿಸಿದ ಒಳಚರಂಡಿ ವ್ಯವಸ್ಥೆಗಳ ನಿರ್ವಹಣೆ ಅವಧಿ ಮುಗಿದ ನಂತರ ಗುತ್ತಿಗೆದಾರರು ಸ್ಥಳೀಯ ಸಂಸ್ಥೆಗಳಿಗೆ ನಿರ್ವಹಣೆ ಹೊಣೆ ಹಸ್ತಾಂತರ ಮಾಡುತ್ತಾರೆ. ಆದರೆ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಹಾಗೂ ಪಾಲಿಕೆಗಳಲ್ಲಿ ನಿರ್ವಹಣೆ ವೆಚ್ಚ ಭರಿಸಲು ಅನುದಾನವಿರುವುದಿಲ್ಲ. ಈ ಹಿನ್ನಲೆಯಲ್ಲಿ ಸರ್ಕಾರ ಆಯವ್ಯಯದಲ್ಲಿ ಒಳಚರಂಡಿ ವ್ಯವಸ್ಥೆ ನಿರ್ವಹಣೆ ಹಣ ಮೀಸಲಿರಿಸಬೇಕು. ಈ ಮೂಲಕ ಕೋಟ್ಯಾಂತರ ರೂಪಾಯಿಗಳನ್ನು ವ್ಯಯಿಸಿ ಸರ್ಕಾರ ನಿರ್ಮಿಸಿದ ಕಾಮಗಾರಿಗಳು ಸದಾಕಾಲ ಸದ್ಬಳಕೆ ಬರುತ್ತವೆ ಎಂದು ಶಾಸಕ ಸುನೀಲ್ ಕುಮಾರ್ ತಿಳಿಸಿದರು.ರಾಜ್ಯದಲ್ಲಿ 350 ರಿಂದ 400 ಸ್ಥಳೀಯ ಸಂಸ್ಥೆಗಳಿವೆ. ಇವುಗಳಲ್ಲಿ ನಿರ್ಮಿಸಿದ ಒಳಚರಂಡಿ ವ್ಯವಸ್ಥೆಗೆ ನಿರ್ವಹಣೆ ರೂ.700 ರಿಂದ 800 ಕೋಟಿ ಅನುದಾನ ಒದಗಿಸಬೇಕಾಗುತ್ತಿದೆ. ಇದಕ್ಕೆ ಆರ್ಥಿಕ ಇಲಾಖೆ ಒಪ್ಪುವುದಿಲ್ಲ. ಸ್ಥಳೀಯ ಸಂಸ್ಥೆಗಳು ತಮ್ಮ ಆದಾಯ ಮೂಲಗಳಿಂದಲೇ ನಿರ್ವಹಣೆ ವೆಚ್ಚ ಭರಿಸಬೇಕು ಎಂದು ಸಚಿವ ಬಿ.ಎಸ್.ಸುರೇಶ್ ಸ್ಪಷ್ಟಪಡಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 