ಇನ್ಫ್ಲುಯೆಂಜಾ ತಡೆಗೆ ರಾಜ್ಯಾದ್ಯಂತ ಮುನ್ನೆಚ್ಚರಿಕೆ: ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
Statewide precautions to prevent influenza: No need for the public to panic
ಲೋಕದರ್ಶನ ವರದಿ
ಬಳ್ಳಾರಿ, ಆ.27: ರಾಜ್ಯಾದ್ಯಂತ ಇನ್ಫ್ಲುಯೆಂಜಾ ಪ್ರಕರಣಗಳ ಹಿನ್ನೆಲೆಯಲ್ಲಿ ರೋಗ ಹರಡುವಿಕೆ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಸೋಮವಾರ ರಾಜ್ಯದ ಎಲ್ಲ ಜಿಲ್ಲೆಗಳ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿದ ಸಚಿವರು, ಇನ್ಫ್ಲುಯೆಂಜಾ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಪ್ರಗತಿ ಪರೀಶೀಲಿಸಿದರು.
ರಾಜ್ಯದಲ್ಲಿ ಇನ್ಫ್ಲುಯೆಂಜಾ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ರೋಗ ಹರಡುವಿಕೆ ತಡೆಗಟ್ಟಲು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನೆರೆಯ ರಾಜ್ಯಗಳಿಂದ ಆಗಮಿಸುವವರು ಹಾಗೂ ಸಾರ್ವಜನಿಕರಲ್ಲಿ ಇನ್ಫ್ಲುಯೆಂಜಾ ಲಕ್ಷಣಗಳು ಕಂಡುಬಂದರೆ ತಕ್ಷಣ ಪರೀಕ್ಷೆಗೆ ಒಳಪಡಿಸಿ, ಅಗತ್ಯ ಚಿಕಿತ್ಸೆ ನೀಡಬೇಕು. ಯಾವುದೇ ಸಾವು-ನೋವು ಸಂಭವಿಸದಂತೆ ಕಟ್ಟುನಿಟ್ಟಿನ ನಿಗಾವಹಿಸುವಂತೆ ಸಚಿವರು ಸೂಚಿಸಿದರು.
ಕೆಮ್ಮು ಮತ್ತು ಸೀನುವಿಕೆಯ ಮೂಲಕ ಈ ವೈರಸ್ ಇತರರಿಗೆ ಹರಡುವ ಸಾಧ್ಯತೆ ಇರುವುದರಿಂದ ಶೀತ, ತಲೆನೋವು, ಕೆಮ್ಮು, ಜ್ವರ, ಚಳಿ, ದೇಹದ ಬಳಲಿಕೆ, ವಾಂತಿ-ಭೇದಿ ಹಾಗೂ ಉಸಿರಾಟದ ತೊಂದರೆ ಇನ್ಫ್ಲುಯೆಂಜಾದ ಪ್ರಮುಖ ಲಕ್ಷಣಗಳಾಗಿವೆ.
ಲಕ್ಷಣಗಳು ಕಂಡುಬಂದ ತಕ್ಷಣ ಸಾರ್ವಜನಿಕರು ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯಬೇಕು ಎಂದು ಸಚಿವರು ತಿಳಿಸಿದರು. ಜಿಲ್ಲೆಗಳ ಎಲ್ಲ ವೈದ್ಯಾಧಿಕಾರಿಗಳು ಹಾಗೂ ಕ್ಷೇತ್ರಮಟ್ಟದ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಿ ರೋಗದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಸೂಚಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 