ಶಿರೂರು ಗ್ರಾಮದಲ್ಲಿ ದಿ. ಕೆ.ಎಚ್‌.ಪಾಟೀಲ್‌ರ ಮೂರ್ತಿ ಅನಾವರಣ

ಶಿರೂರು ಗ್ರಾಮದಲ್ಲಿ ದಿ. ಕೆ.ಎಚ್‌.ಪಾಟೀಲ್‌ರ ಮೂರ್ತಿ ಅನಾವರಣ Statue of K.H. Patil unveiled in Shiroor village

ಕುಕನೂರು 22: ರವಿವಾರ ಕುಕನೂರು ತಾಲ್ಲೂಕಿನ ಶಿರೂರ ಪುನರವಸತಿ ಗ್ರಾಮದಲ್ಲಿ ಕರ್ನಾಟಕ ನೀರಾವರಿ ನಿಗಮ ನಿಯಮಿತ ವತಿಯಿಂದ ಹಮ್ಮಿಕೊಂಡಿದ್ದ ಮಾಜಿ ಸಚಿವರಾಗಿದ್ದ ದಿ. ಕೆ.ಎಚ್‌. ಪಾಟೀಲ್ ಅವರ ಮೂರ್ತಿ ಅನಾವರಣ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು.  

ರಾಜಕಾರಣದಲ್ಲಿ ಬಹಳ ವರ್ಷಗಳ ಕಾಲ ಜನ ಸಮುದಾಯದಲ್ಲಿ ಉಳಿದ ಕೆ.ಎಚ್‌.ಪಾಟೀಲ್‌ಅವರ ಮೂರ್ತಿಯನ್ನುಇಂದು ಸಂತೋಷದಿಂದ ಅನಾವರಣಗೊಳಿಸಿದ್ದೆನೆ. ನಾನು ಮೊದಲ ಬಾರಿ ಶಾಸಕನಾಗಿದ್ದಾಗ ಕೆ.ಎಚ್‌.ಪಾಟೀಲ್ ಅವರು ಕಂದಾಯ ಸಚಿವರಾಗಿದ್ದರು.ಯುವ ಉತ್ಸಾಹದ ಹೊಸ ಶಾಸಕರನ್ನು ಅವರು ಪ್ರೀತಿಯಿಂದ ಮಾತನಾಡಿಸುವುದರ ಜೊತೆಗೆ ನಮಗೆ ಪ್ರೋತ್ಸಾಹಿಸುತ್ತಿದ್ದರು. ಜನರ ಕಷ್ಟಗಳನ್ನು ದೂರ ಮಾಡುವ ಸಲುವಾಗಿ ಅವರು ಸಹಕಾರಿಕ್ಷೇತ್ರ. ಸಾಮಾಜಿಕ. ಆರ್ಥಿಕ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಿದರು ಎಂದರು.  

ದಿ. ಕೆ.ಎಚ್‌.ಪಾಟೀಲ್ ಪುತ್ಥಳಿ ಅನಾವರಣ: ವೇದಿಕೆ ಕಾರ್ಯಕ್ರಮಕ್ಕೂ ಪೂರ್ವದಲ್ಲಿ ನಡೆದ ಮಾಜಿ ಮಂತ್ರಿಗಳಾದ ದಿ. ಕೆ.ಎಚ್‌.ಪಾಟೀಲ್‌ರವರ ಪುತ್ಥಳಿ ಅನಾವರಣ ಸಂದರ್ಭದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಯವರಾದ ಬಸವರಾಜ ಹೊರಟ್ಟಿ ಅವರು ಉಪಸ್ಥಿತರಿದ್ದರು. ಮೆರವಣಿಗೆಯಲ್ಲಿ ಕುಂಬ ಹೊತ್ತ ಮಹಿಳೆಯರು ಹಾಗೂ ಕಲಾವಿದರು ಭಾಗವಹಿಸಿದ್ದರು. ದಿ. ಕೆ.ಎಚ್‌.ಪಾಟೀಲ್‌ರವರ ಪುತ್ಥಳಿ ನಿರ್ಮಾಣ ಮಾಡಿದ ಸಿದ್ಧಾರ್ಥ ಪಾಟೀಲ್ ದಂಪತಿಗಳಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್‌. ತಂಗಡಗಿ, ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ, ಮುನಿರಾಬಾದ್ ತುಂಗಭದ್ರಾ ಯೋಜನೆಯ (ಕಾಡಾ) ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹಸನಸಾಬ ನಬಿಸಾಬ ದೋಟಿಹಾಳ, ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್‌ಎಲ್‌. ಅರಸಿದ್ದಿ, ಮಾಜಿ ಸಚಿವರಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಕೊಪ್ಪಳ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಕರ್ನಾಟಕ ನೀರಾವರಿ ನಿಗಮ ನಿಯಮಿತದ ನೀರಾವರಿ ಕೇಂದ್ರ ವಲಯ ಮುನಿರಾಬಾದನ ಮುಖ್ಯ ಇಂಜೀನಿಯರ್‌ಎಲ್‌.ಬಸವರಾಜ, ಕನೀನಿನಿ ಸಿಂಗಟಾಲೂರ ಏತ ನೀರಾವರಿ ಯೋಜನೆ ವಿಭಾಗ ನಂ.1 ಮುಂಡರಗಿಯ ಕಾರ್ಯ ನಿರ್ವಾಹಕ ಅಭಿಯಂತರರಾದ ಐ.ಪ್ರಕಾಶ, ಕನೀನಿನಿ ಸಿಂಗಟಾಲೂರ ಏತ ನೀರಾವರಿ ಯೋಜನೆ ಉಪ ವಿಭಾಗ ನಂ.3 ಅಳವಂಡಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ರಾಘವೇಂದ್ರಚಾರ್ಯ ಜೋಶಿ, ಮಾಜಿಜಿ.ಪಂ. ಉಪಾಧ್ಯಕ್ಷರಾದ ಯಂಕಣ್ಣ ಯರಾಶಿ ಹಾಗೂ ಹನಮಂತಗೌಡ ಪಾಟೀಲ್, ಕುಕನೂರಿನ ಸತ್ಯನಾರಾಯಣ ಹರಪನಹಳ್ಳಿ, ಮಾಜಿಜಿ.ಪಂ. ಸದಸ್ಯರಾದ ಅಶೋಕ ತೋಟದ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷರಾದ ಕಾಶಿಂಸಾಬ ತಳಕಲ್, ಕುಕನೂರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕ ಅಧ್ಯಕ್ಷರಾದ ಸಂಗಮೇಶ ಗುತ್ತಿ ಹಾಗೂ ಶಿರೂರು ಗ್ರಾಮ ಪಂಚಾಯತ್ ಸರ್ವ ಸದಸ್ಯರು, ಯೋಜನಾ ಅನುಷ್ಠಾನ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಮತ್ತು ಶಿರೂರು ಗ್ರಾಮಸ್ಥರು ಉಪಸ್ಥಿತರಿದ್ದರು.