ಚೆನ್ನೈ, ಜ 23: ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಬಾಶ್ ಚಂದ್ರ ಬೋಸ್ ಅವರ 124 ನೇ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಇಲ್ಲಿನ ರಾಜಭವನದಲ್ಲಿ ಗುರುವಾರ ಇಂಡಿಯನ್ ನ್ಯಾಷನಲ್ ಆರ್ಮಿ ನಾಯಕನ ಆಳೆತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು
ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್, ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವೆಂಕಯ್ಯ ನಾಯ್ಡು, ಬನ್ವರಿಲಾಲ್ ಪುರೋಹಿತ್, ಪಳನಿಸ್ವಾಮಿ ಮತ್ತು ಇತರ ಗಣ್ಯರು ನೇತಾಜಿಯವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.