ಮಾದಕ ವ್ಯಸನದಿಂದ ದೂರವಿರಿ; ಆರೋಗ್ಯಕರ ಬದುಕು ಕಟ್ಟಿಕೊಳ್ಳಿ: ವಿದ್ಯಾರ್ಥಿಗಳಿಗೆ ಜಾಗೃತಿ

ಮಾದಕ ವ್ಯಸನದಿಂದ ದೂರವಿರಿ; ಆರೋಗ್ಯಕರ ಬದುಕು ಕಟ್ಟಿಕೊಳ್ಳಿ: ವಿದ್ಯಾರ್ಥಿಗಳಿಗೆ ಜಾಗೃತಿ  Stay away from drug addiction; build a healthy life: Awareness to students

ಲೋಕದರ್ಶನ ವರದಿ 

ಯಮಕನಮರಡಿ, ಜೂನ್ 30: ಅಂತರರಾಷ್ಟ್ರೀಯ ಮಾದಕ ವಸ್ತುಗಳ ದುರ್ಬಳಕೆ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಯಮಕನಮರಡಿಯ ಕರ್ನಾಟಕ ಪಬ್ಲಿಕ್ ಶಾಲೆಯ ಕಾಲೇಜು ವಿಭಾಗದಲ್ಲಿ ವಿದ್ಯಾರ್ಥಿಗಳಿಗಾಗಿ ಮಾದಕ ವ್ಯಸನ ವಿರೋಧಿ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಯಮಕನಮರಡಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಹಾವರೆಡ್ಡಿ ಭಾಗವಹಿಸಿ, ಮಾದಕ ವಸ್ತುಗಳ ದುಷ್ಪರಿಣಾಮಗಳು, ಅವುಗಳಿಂದ ಉಂಟಾಗುವ ಆರೋಗ್ಯ ಹಾಗೂ ಸಾಮಾಜಿಕ ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಯಾವುದೇ ರೀತಿಯ ಮಾದಕ ವ್ಯಸನಕ್ಕೆ ಒಳಗಾಗದೆ ಆರೋಗ್ಯಕರ, ಶಿಸ್ತುಬದ್ಧ ಜೀವನ ನಡೆಸುವಂತೆ ಕರೆ ನೀಡಿದರು.  

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಕಿರಣ್ ಚೌಗಲಾ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು ಎಂದು ತಿಳಿಸಿದರು. ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಮಲ್ಲಿಕಾರ್ಜುನ ನಂದಗಾವಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಉಪಪ್ರಾಂಶುಪಾಲೆ ಶ್ರೀಮತಿ ಎ.ಆರ್‌. ಮಠಪತಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.  ಈ ಸಂದರ್ಭದಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಕಿರುಚಿತ್ರ ಪ್ರದರ್ಶಿಸಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಯಿತು.  ಕಾರ್ಯಕ್ರಮದ ಆರಂಭದಲ್ಲಿ ಕನ್ನಡ ಉಪನ್ಯಾಸಕ ಲೋಕಪ್ಪ ಸ್ವಾಗತಿಸಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ಉಪನ್ಯಾಸಕಿ ಸುಪ್ರಿಯಾ ನಾಯಕ್ ವಂದಿಸಿದರು.