ಮಾದಕ ವಸ್ತುಗಳ ಸೇವನೆಯಿಂದ ದೂರವಿರಿ: ಪಿಎಸ್‌ಐ ಮಂಟೂರ

ಮಾದಕ ವಸ್ತುಗಳ ಸೇವನೆಯಿಂದ ದೂರವಿರಿ: ಪಿಎಸ್‌ಐ ಮಂಟೂರ  Stay away from drug use: PSI Mantoor

ತಾಳಿಕೋಟೆ 27: ಮಾದಕ ವಸ್ತುಗಳ ಸೇವನೆಗೆ ಒಂದು ಬಾರಿ ಅಂಟಿಕೊಂಡರೆ ಅದರಿಂದ ಸರಳವಾಗಿ ಹೊರಬರಲು ಸಾಧ್ಯವಿಲ್ಲ. ನಮ್ಮ ಯುವಕರು ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿಗಳು ಇದರಿಂದ ದೂರವಿರಬೇಕು ಎಂದು ಕಲಕೇರಿ ಪಿಎಸ್‌ಐ ಸುರೇಶ ಮಂಟೂರ ಹೇಳಿದರು.  

ಅವರು ತಾಲೂಕಿನ ಕಲಕೇರಿ ಗ್ರಾಮದಲ್ಲಿನ ಮಲ್ಲಿಕಾರ್ಜುನ ವಿದ್ಯಾವರ್ಧಕ ಸಂಘದ ಬಸವೇಶ್ವರ ಪದವಿ ಪೂರ್ವ ಕಾಲೇಜು ಹಾಗೂ ಕಲಕೇರಿ ಪೋಲಿಸ್ ಠಾಣೆಯ ಸಹಯೋಗದಲ್ಲಿ ಆಯೋಜಿಸಿದ್ದ ಮಾದಕ ವಸ್ತುಗಳ ನಿಷೇಧ ಮತ್ತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಗುರುವಾರ ಮಾತನಾಡಿದರು.  

ಜಾಗತಿಕ ಮಟ್ಟದಲ್ಲಿ ಪ್ರತಿವರ್ಷ ಜೂನ್ 26 ರಂದು ಮಾದಕ ವಸ್ತುಗಳ ದುರ್ಬಳಕೆ ಮತ್ತು ಅದರ ಅಕ್ರಮ ಕಳ್ಳಸಾಗಾಣಿಕೆಯನ್ನು ತಡೆಯಲು ಅಂತರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಕಳ್ಳಸಾಗಣೆ ವಿರೋಧಿ ದಿನವನ್ನು ಆಚರಿಸಲಾಗುತ್ತಿದ್ದು ಸುಂದರವಾದ ಬದುಕನ್ನು ಸರ್ವನಾಶ ಮಾಡುವ ಈ ದುಶ್ಚಟಗಳಿಂದ ಯುವ ಸಮೂಹ, ವಿದ್ಯಾವಂತರು, ಗ್ರಾಮೀಣ ಪ್ರದೇಶದ ಜನತೆಗೆ ಅರಿವು ಮೂಡಿಸುವ ಕಾರ್ಯದಲ್ಲಿ ಭಾಗಿಯಾಗಬೇಕು ಎಂದು ಸಲಹೆ ಮಾಡಿದರು.  

ದೈಹಿಕ ಶಿಕ್ಷಣ ಉಪನ್ಯಾಸಕ ಶಾಂತು ದುರ್ಗಿ, ಇಎಲ್ಸಿ ಕ್ಲಬ್ ಸಂಚಾಲಕ ಬಸವರಾಜ್ ಕುಂಬಾರ ಮಾತನಾಡಿದರು.  

ಕಲಕೇರಿ ಪೊಲೀಸ್ ಠಾಣೆಯ ವತಿಯಿಂದ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಕುರಿತು ಕಾಲೇಜು ವಿಭಾಗದ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಏರಿ​‍್ಡಸಲಾಗಿತ್ತು.  

ಪ್ರಾಚಾರ್ಯ ಸಿ.ಎಸ್‌.ಹಿರೇಮಠ, ರವಿಕುಮಾರ ಗುಮಶೆಟ್ಟಿ, ಬಿ.ಎಂ.ಕುಂಬಾರ, ಜಿ.ಜಿ.ಮೇಡೆದಾರ, ಗೌಡಪ್ಪಗೌಡ ಹದರಿ, ಶಿವಾನಂದ ಹರಿಜನ ಕಲಕೇರಿ ಪೊಲೀಸ್ ಠಾಣೆಯ ಸಿಬ್ಬಂದಿ ಹಾಜರಿದ್ದರು.