ಮಾದಕ ವಸ್ತುಗಳ ಸೇವನೆಯಿಂದ ದೂರವಿರಿ: ಪಿಎಸ್‌ಐ ಸಂಕನಾಳ

ಮಾದಕ ವಸ್ತುಗಳ ಸೇವನೆಯಿಂದ ದೂರವಿರಿ: ಪಿಎಸ್‌ಐ ಸಂಕನಾಳ  Stay away from drug use: PSI Sankanala

ತಾಳಿಕೋಟಿ 25: ಮಾದಕ ವಸ್ತುಗಳ ಸೇವನೆಗೆ ಒಂದು ಬಾರಿ ಅಂಟಿಕೊಂಡರೆ ಅದರಿಂದ ಸರಳವಾಗಿ ಹೊರಬರಲು ಸಾಧ್ಯವಿಲ್ಲ ನಮ್ಮ ಯುವಕರು ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿಗಳು ಇದರಿಂದ ದೂರು ಇರಲು ಪ್ರಯತ್ನಿಸಬೇಕು ಎಂದು ಪಿಎಸ್‌ಐ ರಾಮನಗೌಡ ಸಂಕನಾಳ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.  

ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪೌಢಶಾಲೆ ಆವರಣದಲ್ಲಿ ಸ್ಥಳೀಯ ಪೊಲೀಸ್ ಠಾಣೆ ವತಿಯಿಂದ ಬುಧವಾರ ಏರಿ​‍್ಡಸಿದ ಮಾದಕ ವಸ್ತುಗಳ ನಿಷೇಧ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇತ್ತೀಚಿಗೆ ಸೈಬರ್ ವಂಚನೆ ಹೆಚ್ಚುತ್ತಿದೆ ಮಕ್ಕಳ ಶೋಷಣೆ ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕತೆಯಿಂದ ಮಕ್ಕಳನ್ನು ರಕ್ಷಿಸಿ ಅವರನ್ನು ವಿದ್ಯಾವಂತರನ್ನಾಗಿ ಮಾಡಬೇಕು. ವಾಹನ ಚಲಾಯಿಸುವಾಗ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು, ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಬಳಸಿ ಇದರಿಂದ ಅಪಘಾತಗಳಿಂದ ರಕ್ಷಿಸಿಕೊಳ್ಳುಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಎದುರಾದಲ್ಲಿ 1930 ಈ ಸಂಖ್ಯೆಗೆ ಕರೆ ಮಾಡಬೇಕು ಇಲಾಖೆ ನಿಮ್ಮ ಸೇವೆಗೆ ಸಿದ್ಧವಾಗಿರುತ್ತದೆ ಎಂದರು. ಯುವಕರು ಹಾಗೂ ಸಣ್ಣ ಸಣ್ಣ ಮಕ್ಕಳು ಮೊಬೈಲ್ ಗೀಳಿನಿಂದಾಗಿ ಹಲವಾರು ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ ಅತಿಯಾದ ಮೊಬೈಲ್ ಬಳಕೆ ಗಂಭೀರ ಸಮಸ್ಯೆಗಳನ್ನು ಸೃಷ್ಟಿಸುತ್ತದೆ ಪಾಲಕರು ಇದರ ಕುರಿತು ಹೆಚ್ಚು ಕಾಳಜಿ ವಹಿಸಬೇಕಾಗಿದೆ. ವಿದ್ಯಾರ್ಥಿಗಳು ಜಾಗೃತರಾಗಿದ್ದು ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ತಿಳಿಸಿದರು.  

ಸಂಸ್ಥೆಯ ಅಧ್ಯಕ್ಷ ಸಿದ್ದನಗೌಡ ಮಂಗಳೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಮಯದಲ್ಲಿ ಮುಖ್ಯೋಪಾಧ್ಯಾಯ ಸಂತೋಷ ಪವಾರ, ಪ್ರಾಥಮಿಕ ಹಾಗೂ ಪೌಢಶಾಲೆಯ ಶಿಕ್ಷಕ ವರ್ಗ, ಪೋಲಿಸ್ ಇಲಾಖೆಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.