ಮಾದಕ ವಸ್ತುಗಳಿಂದ ದೂರವಿದ್ದು ಶಿಕ್ಷಣಕ್ಕೆ ಆದ್ಯತೆ ನೀಡಿ
Stay away from drugs and prioritize education
ಮುಂಡಗೋಡ 23 : ವಿದ್ಯಾರ್ಥಿಗಳು ಮಾದಕ ವಸ್ತುಗಳ ವ್ಯಸನದಿಂದ ದೂರವಿದ್ದು, ಶಿಕ್ಷಣದತ್ತ ಹೆಚ್ಚಿನ ಗಮನ ಹರಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಮುಂಡಗೋಡ ಜೆಎಂಎಫ್ಸಿ ನ್ಯಾಯಾಧೀಶ ಶಿವರಾಜು ಎಚ್.ಎಸ್. ಕರೆ ನೀಡಿದರು. ಕರಗಿನಕೊಪ್ಪ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಮಾದಕ ವಸ್ತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಾದಕ ವಸ್ತುಗಳ ಬಳಕೆಯಿಂದ ಆರೋಗ್ಯ, ಮಾನಸಿಕ ಸ್ಥಿತಿ, ಸಾಮಾಜಿಕ ಬದುಕು ಹಾಗೂ ಶಿಕ್ಷಣದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳ ಕುರಿತು ಮಾಹಿತಿ ನೀಡಿದ ಅವರು, ಅಕ್ರಮ ಚಟುವಟಿಕೆಗಳು ಅಥವಾ ಮಾದಕ ವಸ್ತುಗಳ ಬಳಕೆ ಮತ್ತು ಮಾರಾಟ ಕಂಡುಬಂದಲ್ಲಿ ಕಾನೂನು ಸೇವಾ ಸಮಿತಿಗೆ ಮಾಹಿತಿ ನೀಡುವಂತೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಅಶೋಕ್ ಪವಾರ್, ವಕೀಲರು, ಪೊಲೀಸ್ ಅಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ, ಶಾಲೆಯ ಪ್ರಾಂಶುಪಾಲರು, ಶಿಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 