ಪೇಜಾವರ ಶ್ರೀಗಳ ಆರೋಗ್ಯ ಸ್ಥಿರ, ಚಿಕಿತ್ಸೆಗೆ ಸ್ಪಂದನೆ

ಉಡುಪಿ, ಡಿಸೆಂಬರ್ 25,ಕಳೆದ ಕೆಲ ದಿನಗಳಿಂದ ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳ ಆರೋಗ್ಯ ಸದ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ವೆಂಟಿಲೇಟರ್ನಲ್ಲೇ ಚಿಕಿತ್ಸೆ ಮುಂದುವರೆಸಲಾಗಿದೆ  ಎಂದು ಮಣಿಪಾಲ ಕೆಎಂಸಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಶ್ರೀಗಳನ್ನು ವೆಂಟಿಲೇಟರ್ನಲ್ಲಿ ಇಟ್ಟಿರುವುದರಿಂದ  ರಾಜಕೀಯ ನಾಯಕರು, ವಿಐಪಿಗಳು ಹಾಗೂ ಯಾವುದೆ ಭಕ್ತರ ಭೇಟಿಗೆ ಅವಕಾಶವಿಲ್ಲ  ಹೀಗಾಗಿ ಯಾರೂ ಸಹ ಆಸ್ಪತ್ರೆಗೆ ಬರಬಾರದು  ಎಂದು ವೈದ್ಯರು ಮನವಿ ಮಾಡಿದ್ದಾರೆ ಎನ್ನಲಾಗಿದೆ.ದೆಹಲಿ ಏಮ್ಸ್ ಆಸ್ಪತ್ರೆ ವೈದ್ಯರೊಂದಿಗೆ ಕೆಎಂಸಿ ಆಸ್ಪತ್ರೆ ವೈದ್ಯರು ನಿರಂತರವಾಗಿ ಸಂಪರ್ಕದಲ್ಲಿದ್ದಾರೆ. ಅಲ್ಲಿನ ವೈದ್ಯರ ಸಲಹೆ ಮತ್ತು ಮಾರ್ಗದರ್ಶನದಂತೆ ಚಿಕಿತ್ಸೆ ನೀಡುತ್ತಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಕೃಷ್ಣಮಠಕ್ಕೆ ಭೇಟಿ ನೀಡಿ  ನಂತರ  ಮತ್ತೆ  ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ತೆರಳುವ ಸಾಧ್ಯತೆಯೂ ಇದೆ ಎಂದೂ  ಮೂಲಗಳು ತಿಳಿಸಿವೆ.