ಮಾನವೀಯ ಮೌಲ್ಯಗಳೊಂದಿಗೆ ಸೇವೆಗೆ ಮುಂದಾಗಿ: ಅರುಣ ಓರಸಂಗ
Step forward to serve with human values: Aruna Orasanga
ಕೊಲ್ಹಾರ 27 : ಫಾರ್ಮಸಿಸ್ಟ್ಗಳು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜದ ಆರೋಗ್ಯ ರಕ್ಷಣೆಗೆ ಬದ್ಧರಾಗಬೇಕು ಎಂದು ವಿಜಯಪುರ ಜಿಲ್ಲಾ ಓಷಧ ವ್ಯಾಪಾರಸ್ಥರ ಸಂಘದ ಕೊಲ್ಹಾರ ತಾಲೂಕು ಅಧ್ಯಕ್ಷ ಅರುಣ ಓರಸಂಗ ಹೇಳಿದರು. ಪಟ್ಟಣದ ದ್ಯಾಮವ್ವ ದೇವಿ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಬಿ.ಎಲ್.ಡಿ.ಇ ಸಂಸ್ಥೆಯ ಬಸವನ ಬಾಗೇವಾಡಿ ಓಷಧ ಮಹಾವಿದ್ಯಾಲಯ ಹಾಗೂ ವಿಜಯಪುರ ಜಿಲ್ಲಾ ಓಷಧ ವ್ಯಾಪಾರಸ್ಥರ ಸಂಘದ ಕೊಲ್ಹಾರ ತಾಲೂಕು ಘಟಕದ ವತಿಯಿಂದ ಆಯೋಜಿಸಿದ್ದ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಅಂಕಗಳಿಗೆ ಮಾತ್ರ ಸೀಮಿತವಾಗದೆ ಓಷಧ ವಿಜ್ಞಾನದ ಆಳವಾದ ಜ್ಞಾನ ಬೆಳೆಸಿಕೊಳ್ಳಬೇಕು.
ಸಂಶೋಧನೆ, ಓಷಧ ತಯಾರಿಕೆ ಸೇರಿದಂತೆ ಫಾರ್ಮಸಿ ಕ್ಷೇತ್ರದಲ್ಲಿರುವ ಅವಕಾಶಗಳನ್ನು ಬಳಸಿಕೊಂಡು ಉತ್ತಮ ವೃತ್ತಿಪರರಾಗಿ ಹೊರಹೊಮ್ಮಬೇಕು ಎಂದರು. ಡಾ. ಮಾರಾಪೂರ ಅವರು ಆರೋಗ್ಯ ಕ್ಷೇತ್ರದ ವಿವಿಧ ವಿಭಾಗಗಳಲ್ಲಿ ಫಾರ್ಮಸಿಸ್ಟ್ಗಳ ಸೇವೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು. ಇದಕ್ಕೂ ಮುನ್ನ ಫಾರ್ಮಸಿ ವಿದ್ಯಾರ್ಥಿಗಳು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಓಷಧಿ ಹಾಗೂ ಆರೋಗ್ಯ ಜಾಗೃತಿ ಜಾಥಾ ನಡೆಸಿದರುಇಜಾಜ್ ಜಮನಾ, ಪ್ರಶಾಂತ ಸಂಗಳದ, ಡಾ. ಆರಿ್ಬ. ಮಠ, ಡಾ. ಪೂಜಾ ಮಠ ಸೇರಿದಂತೆ ಓಷಧ ವ್ಯಾಪಾರಸ್ಥರು, ಫಾರ್ಮಸಿ ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು. ಕವಿತಾ ಅಜಯ ಮುದಕವಿ ಕಾರ್ಯಕ್ರಮ ನಿರ್ವಹಿಸಿದರು.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 