ಸಂವಿಧಾನ ದಿನಾಚರಣೆಯನ್ನು ಜಿಲ್ಲೆಯ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲದಲ್ಲಿ ನವೆಂಬರ್ 26 ರಂದು ಅರ್ಥ ಪೂರ್ಣವಾಗಿ ಆಚರಿಸಲು ಕ್ರಮ
Steps have been taken to celebrate Constitution Day in a meaningful manner on November 26th at the a
ಗದಗ 21 : ಸಂವಿಧಾನ ದಿನಾಚರಣೆಯನ್ನು ಜಿಲ್ಲೆಯ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲದಲ್ಲಿ ನವೆಂಬರ್ 26 ರಂದು ಅರ್ಥ ಪೂರ್ಣವಾಗಿ ಆಚರಿಸಲು ಕ್ರಮಹಿಸಬೆಂದು ಅಪರ ಜಿಲ್ಲಾಧಿಕಾರಿ ಡಾ.ದುರುಗೇಶ ಕೆ ಆರ್ ತಿಳಿಸಿದರು. ಜಿಲ್ಲಾಡಳಿತ ಭವನದ ವಿಡಿಯೋ ಕಾನ್‌ಫರೆನ್ಸ ಹಾಲನಲ್ಲಿ ಗುರುವಾರ ಜರುಗಿದ ಸಂವಿಧಾನ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು
ಸಂವಿಧಾನ ದಿನಾಚರಣೆ ನಿಮಿತ್ತ ಪ್ರೌಢಶಾಲೆ/ಕಾಲೇಜು ವಿದ್ಯಾರ್ಥಿಗಳಿಂದ ಜಿಲ್ಲಾ/ತಾಲೂಕು ಮಟ್ಟದಲ್ಲಿ ಜಾಥಾ ಕಾರ್ಯಕ್ರಮದಲ್ಲಿ 'ರಾಷ್ಟ್ರಧ್ವಜದ ಪ್ರದರ್ಶನದೊಂದಿಗೆ ಸಂವಿಧಾನ ಪುಸ್ತಕವನ್ನು ಪ್ರದರ್ಶಿಸುವುದು, ವಿವಿಧ ಕನ್ನಪರ ಸಂಘಟನೆಗಳು, ದಲಿತಪರ ಸಂಘಟನೆಗಳು ಮುಖಂಡರು, ಸಂಘ ಸಂಸ್ಥೆಯ ಪಧಾಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಯವರು, ಎನ್.ಸಿ.ಸಿ, ಎನ್.ಎಸ್.ಎಸ್ ವಿಧ್ಯಾರ್ಥಿಗಳ ಸಹಯೋಗದೊಂದಿಗೆ ಹೆಚ್ಚು ಜನರನ್ನು ಸೇರಿಸುವ ಮೂಲಕ ಅಚ್ಚುಕಟ್ಟಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಆಚರಿಸಲು ಅಧಿಕಾರಿಗಳಿಗೆ ಸೂಚಿಸಿದರು.
ದಿನಾಂಕ:26.11.2025 ಬುದುವಾರದಂದು ಜಿಲ್ಲೆಯ ವೀರರಾಣಿ ಕಿತ್ತೂರು ಚೆನ್ನಮ್ಮ ಸರ್ಕಲ್‌ನಿಂದ ಜಿಲ್ಲಾಡಳಿತ ಭವನದವರೆಗೂ ಜಾಥಾ ಕಾರ್ಯಕ್ರಮ ಹಮ್ಮಿಕೂಳ್ಳಲಾಗುವುದು. ಸಂವಿಧಾನ ದಿನಾಚರಣೆಯ ನಿಮಿತ್ತ ತಾಲೂಕು ಮಟ್ಟದಲ್ಲಿ 'ರಾಷ್ಟ್ರಧ್ವಜದ ಪ್ರದರ್ಶನದೊಂದಿಗೆ ಸಂವಿಧಾನ ಪುಸ್ತಕವನ್ನು ಪ್ರದರ್ಶಿಸುವುದರ ಮೂಲಕ ಜಾಥಾಗಳನ್ನು ಹಮ್ಮಿಕೊಳ್ಳುವುದು. ಸಂವಿಧಾನ ಪುಸ್ತಕಗಳನ್ನು ಡಾ.ಬಿ.ಆರ್. ಅಂಬೇಡ್ಕರ್ ವೇಷ ಭೂಷಣ ಪ್ರದರ್ಶನ ಮಾಡುವುದು, ಜಾಥಾದಲ್ಲಿ ಸಂವಿಧಾನದ ಕುರಿತು ಡಾ.ಬಿ.ಆರ್. ಅಂಬೇಡ್ಕರ್ ರವರ ಪ್ರಮುಖ ನುಡಿಮುತ್ತು (ಕಿಣಠ)ಗಳನ್ನು ಠಿಟಚಿಛಿಚಿಡಿಜನಲ್ಲಿ ಪ್ರದರ್ಶಿಸುವುದು.
ಜಿಲ್ಲಾ ತಾಲೂಕು ಕೇಂದ್ರದಲ್ಲಿನ ಅಂಬೇಡ್ಕರ್ ಭವನ ಇತರೇ ಸಭಾಭವನದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಸಂವಿಧಾನದ ಕುರಿತು ಉಪನ್ಯಾಸಗಳನ್ನು ನೀಡುವುದರ ಮೂಲಕ ಕಾ0ುರ್ಕ್ರಮಗಳನ್ನು ಆಯಾ ಜಿಲ್ಲಾ ಮತ್ತು ತಾಲೂಕ ಮಟ್ಟದ ಅಧಿಕಾರಿಗಳಿಗೆ ಆಸಕ್ತಿಯಿಂದ ಆಯೋಜಿಸಿ ಯಶಸ್ವಿಗೂಳಿಸಲು ಅಪರಜಿಲ್ಲಾಧಿಕಾರಿ ಡಾ. ದುರುಗೇಶ ಕೆ ಆರ್ ರವರು ಅರ್ಥ ಪೂರ್ಣವಾಗಿ ಆಚರಿಸಲು ಅಧಿಕಾರಿಗಳಿಗೆ ಸೂಚಿಸಿದರು.ಸಂವಿಧಾನ ದಿನಾಚರಣೆಯ ಸಂದರ್ಭದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಚರ್ಚಾ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಛಾಯಾಚಿತ್ರ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುವುದು ಎಂದರು.ಈ ಉಪವಿಭಾಗಾಧಿಕಾರಿ ಗಂಗಪ್ಪ ಎಮ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಬರಟ್ಟಿ, ಕ್ರಿಡಾಇಲಾಖೆಯ ಸಹಾಯಕ ನಿರ್ದೇಶಕ ಡಾ. ಶರಣು ಗೊಗೇರಿ, ಪ್ರವಾಸೊದ್ಯಮ ಅಧಿಕಾರಿ ಕೊಟ್ರೇಶ ವಿಬೂತಿ, ದಿಪಿಯು ಮಸನಾಯಕ, ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಮಟ್ಟದ ಆಧಿಕಾರಿಗಳು, ಎನ್.ಸಿ.ಸಿ, ಎನ್.ಎಸ್.ಎಸ್ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 