ರಾಜ್ಯದ ಎಲ್ಲ ಗ್ರಾಪಂಗಳಲ್ಲಿ ಹಂತಹಂತವಾಗಿ ಕೆಪಿಎಸ್ ಶಾಲೆಗಳು ಆರಂಭಿಸಲು ಕ್ರಮ
Steps to start KPS schools in all the gram panchayats of the state in a phased manner
ಬೆಳಗಾವಿ ಸುವರ್ಣಸೌಧ ಡಿ.08 (ಕ.ವಾ): 2025-26ನೇ ಸಾಲಿನಲ್ಲಿ 900 ಸರ್ಕಾರಿ ಶಾಲೆಗಳನ್ನು ಕೆ.ಪಿ.ಎಸ್. ಶಾಲೆಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಒಂದು ಕೆ.ಪಿ.ಎಸ್. ಶಾಲೆಯನ್ನು ಹಂತ ಹಂತವಾಗಿ ಪ್ರಾರಂಭಿಸಲು ಕ್ರಮವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್ ಮಧು ಬಂಗಾರ್ಪ ಅವರು ತಿಳಿಸಿದರು.
ಪರಿಷತನಲ್ಲಿ ಡಿ.8ರಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಚಿದಾನಂದ್ ಎಂ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಮ್ಮ ರಕ್ತದಲ್ಲಿ ಕನ್ನಡವಿದೆ. ಹಾಗಾಗಿ ಕನ್ನಡ ಮಾಧ್ಯಮದ ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ನಾವು ಬಜೆಟನಲ್ಲಿ 500 ಕೆಪಿಎಸ್ ಶಾಲೆಗಳನ್ನು ಆರಂಭಿಸುವ ಘೋಷಣೆ ಮಾಡಿದ್ದೇವೆ ಎಂದ ಸಚಿವರು, 2025-26ನೇ ಸಾಲಿನಲ್ಲಿ ಈಗಾಗಲೇ ಕಾರ್ಯಾಚರಣೆಯಲ್ಲಿರುವ 309 ಕೆಪಿಎಸ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ತರಗತಿವರೆಗೆ ಒಟ್ಟು 2,72,464 ವಿದ್ಯಾರ್ಥಿಗಳು ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈ ಕೆ.ಪಿ.ಎಸ್. ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಶಿಕ್ಷಕರ ಕೋರಿಕೆ ವರ್ಗಾವಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಪರಿಪೂರ್ಣವಾಗಿ ಹೆಚ್ಚುವರಿ ಶಿಕ್ಷಕರ ಮರುಹೊಂದಾಣಿಕೆ ಪ್ರಕ್ರಿಯೆಯನ್ನು ತರ್ಕಬದ್ದಗೊಳಿಸುವ ಮೂಲಕ ಕೆ.ಪಿ.ಎಸ್. ಶಾಲೆಗಳಲ್ಲಿರುವ ಖಾಲಿ ಹುದ್ದೆಗಳನ್ನು ಆದ್ಯತೆ ಮೇರೆಗೆ ಭರ್ತಿ ಮಾಡಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಉತ್ತಮ ಕಲಿಕೆ, ಉಜ್ವಲ ಭವಿಷ್ಯ ಎಂಬುದು ಕೆ.ಪಿ.ಎಸ್. ಶಾಲೆಗಳ ಧೈಯ ವಾಕ್ಯವಾಗಿದ್ದು, ಪ್ರತಿ ಮಗುವೂ ಶಾಲೆಯಲ್ಲಿರಬೇಕು ಮತ್ತು ಚೆನ್ನಾಗಿ ಕಲಿಯಬೇಕು ಎಂಬ ಮಹತ್ತರ ಉದ್ದೇಶದಿಂದ ರಾಜ್ಯದ ಎಲ್ಲಾ ಕರ್ನಾಟಕ ಪಬ್ಲಿಕ್ ಶಾಲೆಗಳು ಏಕರೂಪದ ನೀತಿಯನ್ನು ಪಾಲಿಸುವಂತೆ 'ಕರ್ನಾಟಕ ಪಬ್ಲಿಕ್ ಶಾಲಾ ಮಾನಕಗಳು ಕೈಪಿಡಿಯನ್ನು ಸಿದ್ಧಪಡಿಸಲಾಗಿದ್ದು, ಅದರಲ್ಲಿ ನಿಗದಿಪಡಿಸಿರುವ ಗುಣಮಟ್ಟದ ಮಾನದಂಡಗಳಂತೆ ಪ್ರತಿ ಶಾಲೆಯಲ್ಲಿ ಕನಿಷ್ಠ 1200 ವಿದ್ಯಾರ್ಥಿಗಳಿಗೆ ಅವಶ್ಯಕವಿರುವ ಸಮರ್ಕ ಶೈಕ್ಷಣಿಕ ಮತ್ತು ಭೌತಿಕ ಸೌಕರ್ಯಗಳನ್ನು ಒದಗಿಸಿ ಉನ್ನತೀಕರಿಸಲಾಗುವುದು ಎಂದು ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 