ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ : ಸಚಿವ ರಹೀಂ ಖಾನ್

ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ : ಸಚಿವ ರಹೀಂ ಖಾನ್ Steps will be taken to fill vacant posts in urban local bodies after obtaining approval from the Fin
ಬೆಳಗಾವಿ ಸುವರ್ಣ ವಿಧಾನಸೌಧ ಡಿ.16: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ನೇರ ನೇಮಕಾತಿಯಡಿ ಖಾಲಿ ಇರುವ ಹುದ್ದೆಗಳನ್ನು ಆರ್ಥಿಕ ಇಲಾಖೆಯ ಅನುಮೋದನೆ ಪಡೆದ ನಂತರ ಕರ್ನಾಟಕ ಲೋಕ ಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಪೌರಾಡಳಿತ ಸಚಿವರಾದ ರಹೀಂ ಖಾನ್ ಹೇಳಿದರು.

ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆ ಸದಸ್ಯರಾದ ಹೇಮಲತಾ ನಾಯಕ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಸೇವಾ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸುವ ಕುರಿತು ಪೌರ ನೌಕರರ ಸಂಘಗಳ ವತಿಯಿಂದ ಮನವಿಗಳು ಸ್ವೀಕೃತವಾಗಿದ್ದು, ಪರಿಶೀಲನಾ ಹಂತದಲ್ಲಿರುತ್ತದೆ.

ನಗರ ಕೆ.ಜಿ.ಐ.ಡಿ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಸೇವಾ ನೌಕರರಿಗೆ ಹಾಗೂ ಜ್ಯೋತಿ ಸಂಜೀವಿನಿ ಸೌಲಭ್ಯಗಳನ್ನು ಒದಗಿಸಲು ನಿಯಮಗಳಲ್ಲಿ ಅವಕಾಶವಿರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಮುಂದುವರೆದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಕೌಂಟೆಂಡ್, ಜೂನಿಯರ್/ಸೀನಿಯರ್, ಪೆÇ್ರೀಗ್ರಾಮರ್ ವಾಹನ ಚಾಲಕರು, ಪ್ಲೆಂಬರ್ ಹಾಗೂ ಇತ್ಯಾದಿ ಹುದ್ದೆಗಳನ್ನು ಅವಶ್ಯಕತೆಗನುಗುಣವಾಗಿ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಮಟ್ಟದಲ್ಲಿ ನೇಮಕಾತಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ. ಅದರಂತೆ ಜಿಲ್ಲಾ ಮಟ್ಟದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ನೇಮಕಾತಿ ನಗರ ಮಾಡಿಕೊಳ್ಳಲು ಕ್ರಮವಹಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಎಲ್ಲ ಕಾಮಗಾರಿಗಳ ತ್ವರಿತಗತಿಗೆ ಕ್ರಮ: ಸಚಿವ ರಹೀಂ ಖಾನ್

ರಾಜ್ಯದ 91 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಪೆÇೀಸ್ಟ್ ಘಟಕ ನಿರ್ಮಾಣ, 310 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಟಿರಿಯಲ್ ರಿಕವರಿ ಫ್ಯಾಸಿಲಿಟಿ (Material Recovery facility) ನಿರ್ಮಾಣ ಮತ್ತು 226 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ಯಾನಿಟರಿ ಲ್ಯಾಂಡಫಿಲ್ ಫ್ಯಾಸಿಲಿಟಿ  (Sanitary Landfill Facility)) ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿರುತ್ತವೆ ಎಂದು ಪೌರಾಡಳಿತ ಸಚಿವರಾದ ರಹೀಂ ಖಾನ್ ಹೇಳಿದರು.

ಪರಿಷತ್ತಿನಲ್ಲಿ ಡಿ.16ರಂದು ಸದಸ್ಯರಾದ ಶರವಣ ಟಿ ಎ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪ್ರಸ್ತುತ ರಾಜ್ಯದ 320 ನಗರ ಸ್ಥಳೀಯ ಸಂಸ್ಥೆಗಳಲ್ಲಿ (ಬಿ.ಬಿ.ಎಂ.ಪಿ. ಹೂರತುಪಡಿಸಿ) ಪ್ರತಿ ದಿನ ಅಂದಾಜು 3988 ಗಳಷ್ಟು ಹಸಿ ಉತ್ಪಾದನೆಯಾಗುತ್ತಿದ್ದು, 3650 ಟನ್ ಗಳಷ್ಟು ತ್ಯಾಜ್ಯ ಸಂಸ್ಕರಣೆಯಾಗುತ್ತಿದೆ ಮತ್ತು 2651 ಟನ್ ಗಳಷ್ಟು ಒಣ ತ್ಯಾಜ್ಯ ಉತ್ಪಾದನೆಯಾಗುತ್ತಿದ್ದು ಅದರ ಪೈಕಿ, 1780 ಟನ್ ಗಳಷ್ಟು ಒಣ ತ್ಯಾಜ್ಯವನ್ನು ನಿರ್ವಹಣೆ ಮಾಡಲಾಗುತ್ತಿದೆ. ಮುಂದಿನ ಐದು ವರ್ಷಗಳಿಗೆ ಅಗತ್ಯವಿರುವ ಮೂಲಸೌಕರ್ಯ ಮತ್ತು ಪ್ರಸ್ತುತ ಇರುವ ಕೊರತೆಯನ್ನು ನಿವಾರಿಸಲು ಸ್ವಚ್ಚ ಭಾರತ ಮಿಷನ್ (ನಗರ) 2.0 ಯೋಜನೆಯಡಿಯಲ್ಲಿ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿರುತ್ತದೆ.

222 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಂಗ್ರಹವಾಗಿರುವ 78.26 ಲಕ್ಷ ಟನ್ ಗಳಷ್ಟು ಪಾರಂಪರಿಕ ತ್ಯಾಜ್ಯವನ್ನು ತೆರವುಗೊಳಿಸುವ ಸಲುವಾಗಿ ಬಯೋ ರಿಮಿಡಿಯೇಶನ್ ((Bio-remediation)  ಕಾರ್ಯ ನಡೆಯುತ್ತಿದ್ದು, ಇಲ್ಲಿಯವರೆಗೆ 22.7 ಲಕ್ಷ ಟನ್ ಗಳಷ್ಟು ತ್ಯಾಜ್ಯ ಬಯೋ ರಿಮಿಡಿಯೇಶನ್ ಮೂಲಕ ವಿಲೇವಾರಿ ಮಾಡಲಾಗಿರುತ್ತದೆ ಎಂದು ಸಚಿವರು ತಿಳಿಸಿದರು.

ಎಲ್ಲಾ ಕಾಮಗಾರಿಗಳನ್ನು ನಗರ ಸ್ಥಳೀಯ ಸಂಸ್ಥೆಗಳಲ್ಲಿ ತ್ಯರಿತಗತಿಯಲ್ಲಿ ಕೈಗೊಂಡು ಮೂಲಭೂತ ಸೌಲಭ್ಯಗಳನ್ನು ಸ್ಥಾಪಿಸಿ, ಸಂಸ್ಕರಣೆ ಮಾಡಿ ತ್ಯಾಜ್ಯ ವಸ್ತುಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದನ್ನು ಖಾತ್ರಿಪಡಿಸಿಕೊಳ್ಳಲು ಸರ್ಕಾರದ ವತಿಯಿಂದ ನಿಯಮಿತವಾಗಿ ಪ್ರಗತಿ ಪರಿಶೀಲನೆ ಸಭೆಗಳನ್ನು ನಡೆಸಲಾಗುತ್ತಿದೆ. ಪ್ರತಿ ಮಾಹೆ ಆಯಾ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ಸಾಧಿಸಿರುವ ಪ್ರಗತಿಯ ವರದಿ ನೀಡಿ ಜಿಲ್ಲಾ ಮಟ್ಟದಲ್ಲಿ ಪರಿಶೀಲಿಸಿ ನಿಗಧಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ಅಗತ್ಯವಿರುವ ಕ್ರಮಗಳನ್ನು ಸಮಾರೋಪಾದಿಯಲ್ಲಿ ಕೈಗೊಳ್ಳಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆಗಳನ್ನು ನಿಯಮಿತವಾಗಿ ನೀಡಲಾಗುತ್ತಿದೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು.