ರಾಯಬಾಗ 31: 2019ರ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಕಾರ್ಯಕರ್ತರು ಭೂತಮಟ್ಟದಿಂದ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಲು ಪ್ರಾಮಾಣಿಕ ಮತ್ತು ನಿಷ್ಠೆಯಿಂದ ಕೆಲಸ ಮಾಡಿ, ಮತ್ತೊಮ್ಮೆ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿರವರ ನೇತೃತ್ವದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ತರಲು ಎಲ್ಲರೂ ಕೈಜೋಡಿಸೋಣವೆಂದು ಶಾಸಕ ಡಿ.ಎಮ್.ಐಹೊಳೆ ಕಾರ್ಯಕರ್ತರಿಗೆ ಕರೆ ನೀಡಿದರು.
ರವಿವಾರ ಸಾಯಂಕಾಲ ಪಟ್ಟಣದ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ರಾಯಬಾಗ ಮಂಡಲ ಬಿಜೆಪಿ ಕಾರ್ಯಕರ್ತರ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಕಳೆದ ವಿಧಾನಸಭೆಯಲ್ಲಿ ರಾಯಬಾಗ ಮತಕ್ಷೇತ್ರದಿಂದ ಹೆಚ್ಚಿನ ಮತಪಡೆದು ನನ್ನನ್ನು ಆಯ್ಕೆಯಾಗಲು ಹೇಗೆ ಕಾರ್ಯ ಮಾಡಿದಿರಿ, ಅದೇ ರೀತಿ ಚಿಕ್ಕೋಡಿ ಲೋಕಸಭೆಗೆ ಬಿಜೆಪಿ ಅಭ್ಯಥರ್ಿಯನ್ನು ಗೆಲ್ಲಿಸಲು ಎಲ್ಲರೂ ಕೂಡಿಕೊಂಡು ಕೆಲಸ ಮಾಡೋಣ. ಇದರಿಂದ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಪಡೆದು, ಅಭಿವೃದ್ಧಿ ಮಾಡಲು ಸಹಕಾರಿಯಾಗುತ್ತದೆ ಎಂದರು.
ರಾಯಬಾಗ ಮಂಡಲ ಬಿಜೆಪಿ ಅಧ್ಯಕ್ಷ ಸದಾನಂದ ಹಳಿಂಗಳಿ ಮಾತನಾಡಿ, ರೈತರನ್ನು ಸ್ವಾಲಂಬನೆ ಮಾಡಲು ಪ್ರಧಾನಿ ಮೋದಿಯವರು ರೈತರಿಗೆ ನಿರಂತರ ವಿದ್ಯುತ್ ಮತ್ತು ನದಿಗಳ ಜೋಡನೆ ಮಾಡಲು ಸಂಕಲ್ಪ ಮಾಡಿದ್ದು, ಅದನ್ನು ನನಸು ಮಾಡಲು ನಾವೆಲ್ಲರೂ ನಿಷ್ಠೆಯಿಂದ ದುಡಿಯಬೇಕಾಗಿದೆ ಎಂದರು.
ಚಿಕ್ಕೋಡಿ ಜಿಲ್ಲಾ ಬಿಜೆಪಿ ಕಾರ್ಯದಶರ್ಿ ಅಪ್ಪಾಸಾಬ ಬ್ಯಾಕೂಡೆ ಮಾತನಾಡಿ, ಬರುವ ಲೋಕಸಭೆ ಚುನಾವಣೆ ಪಕ್ಷದ ಮತ್ತು ದೇಶದ ಹಿತದೃಷ್ಠಿಯಿಂದ ಅತ್ಯಂತ ಮಹತ್ವದಾಗಿದೆ. ಚಿಕ್ಕೋಡಿ ಲೋಕಸಭೆಯಲ್ಲಿ ಬಿಜೆಪಿ ಅಭ್ಯಥರ್ಿ ಗೆಲವು ಪಡೆಯಲು ಶಾಸಕರು ಮತ್ತು ಪ್ರಧಾನಿ ಮೋದಿಯವರು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಮತದಾರರಿಗೆ ಮುಟ್ಟಿಸುವ ಕೆಲಸ ಪ್ರತಿಯೊಬ್ಬ ಕಾರ್ಯಕರ್ತ ಮಾಡಬೇಕೆಂದು ತಿಳಿಸಿದರು.
ಸಭೆಯಲ್ಲಿ ಚಿಕ್ಕೋಡಿ ಜಿಲ್ಲಾ ಪ್ರಮುಖ ಫಕೀರಪ್ಪ ತಳವಾರ, ದಾನಪ್ಪ ಕೊಟಬಾಗಿ, ಅಣ್ಣಾಸಾಬ ಖೆಮಲಾಪೂರೆ, ಅಪ್ಪಾಸಾಬ ಬ್ಯಾಕೂಡೆ, ಸದಾನಂದ ಹಳಿಂಗಳಿ, ಸದಾಶಿವ ಘೋರ್ಪಡೆ, ಸುಖದೇವಿ ರಮಾಜೆ, ಅನೀಲ ಹಂಜೆ, ಸದಾಶಿವ ಹಂಜ್ಯಾಗೋಳ ಸೇರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.
ಸಭೆಯಲ್ಲಿ ಇತ್ತಿಚಿಗೆ ಅಪಘಾತದಲ್ಲಿ ನಿಧನಹೊಂದಿದ ಮಾಜಿ ಶಾಸಕ ದತ್ತು ಹಕ್ಯಾಗೋಳ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.