ಹಿಂದಿ ರಾಷ್ಟ್ರಬಾಷೆಯೆಂಬ ಸುಳ್ಳು ಪ್ರಚಾರ ನಿಲ್ಲಲಿ: ಸಿದ್ದರಾಮಯ್ಯ
ಬೆಂಗಳೂರು, ಸೆ 14 ಹಿಂದಿ ರಾಷ್ಟ್ರಭಾಷೆ ಎಂದು ಬಲವಾಗಿ ಪ್ರತಿಪಾದಿಸುತ್ತಿರುವ ಕೇಂದ್ರ ಸರ್ಕಾರದ ನಿಲುವನ್ನು ಮಾಜಿ ಮುಖ್ಯಮಂತ್ರಿಗಳಾದ ಸಿದ್ದ ರಾಮಯ್ಯ ಹಾಗೂ ಎಚ್ ಡಿ ಕುಮಾರ ಸ್ವಾಮಿ ವಿರೊಧಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ, " ಹಿಂದಿ ರಾಷ್ಟ್ರ ಭಾಷೆಯೆಂಬ ಸುಳ್ಳು ಪ್ರಚಾರ ನಿಲ್ಲಲಿ. ಅದು ಕನ್ನಡದಂತೆಯೇ 22 ಅಧಿಕೃತ ಭಾಷೆಗಳಲ್ಲಿ ಒಂದು ಎನ್ನುವುದು ತಿಳಿದಿರಲಿ. ಸುಳ್ಳು-ತಪ್ಪುಮಾಹಿತಿ ಮೂಲಕ ಭಾಷೆಯನ್ನು ಬೆಳೆಸಲಾಗದು. ಭಾಷೆ ಪರಸ್ಪರ ಪ್ರೀತಿ ಮತ್ತು ಕೊಡು-ಕೊಳ್ಳುವಿಕೆಯಿಂದ ಬೆಳೆಯುತ್ತದೆ" ಎಂದು ಹೇಳಿದ್ದಾರೆ. ಇದೇ ವಿಷಯಕ್ಕೆ ಸಿದ್ದರಾಮಯ್ಯ ಅವರ ಕೈ ಜೋಡಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ, "ಇಂದು ದೇಶದಾದ್ಯಂತ ಕೇಂದ್ರ ಸರ್ಕಾರ 'ಹಿಂದಿ ದಿವಸ್' ಆಚರಿಸುತ್ತಿದೆ. ಸಂವಿಧಾನದಲ್ಲಿ ಹಿಂದಿಯೊಂದಿಗೆ ಅಧಿಕೃತ ಭಾಷೆ ಎನಿಸಿಕೊಂಡಿರುವ ಕನ್ನಡದ ಭಾಷಾ ದಿವಸವನ್ನು ದೇಶಾದ್ಯಂತ ಯಾವಾಗ ಆಚರಿಸುತ್ತೀರಿ ನರೇಂದ್ರ ಮೋದಿಯವರೇ? ಕನ್ನಡಿಗರೂ ಈ ಒಕ್ಕೂಟ ವ್ಯವಸ್ಥೆಯ ಭಾಗವಾಗಿದ್ದಾರೆ ನೆನಪಿರಲಿ" ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. "ಕನ್ನಡಿಗರ ಹಲವಾರು ಬೇಡಿಕೆಗಳ ನಂತರವೂ ಕೇಂದ್ರ ಸರ್ಕಾರ ಐಬಿಪಿಎಸ್ ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ ನೀಡಿಲ್ಲ. ಜೊತೆಗೆ ಈ ಹಿಂದೆ ಇದ್ದ ನಿಯಮವನ್ನು ವಾಪಾಸ್ ತರಲಾಗಿಲ್ಲ. ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೇಂದ್ರ ಸರ್ಕಾರದ ಮಲತಾಯಿ ಧೋರಣೆಗೆ ಇದು ಸಾಕ್ಷಿ. ಇದನ್ನು ನಾನು ಖಡಾ-ಖಂಡಿತವಾಗಿ ವಿರೋಧಿಸುತ್ತೇನೆ" ಎಂದು ಶುಕ್ರವಾರವೂ ಎಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 