ರಾಯಚೂರಿನಲ್ಲಿ ದಲಿತರ ಮೇಲಿನ ನಡೆಯುತ್ತಿರುವ ಹಲ್ಲೆ ಅತ್ತೆಗಳನ್ನು ತಡೆಗಟ್ಟಿ : ಸುರೇಶ್ ಕುಮಾರ್ ಒತ್ತಾಯ
Stop the ongoing attacks on Dalits in Raichur: Suresh Kumar urges
ಬಳ್ಳಾರಿ, ಸೆ.1: ರಾಯಚೂರು ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯ, ಅತ್ಯಾಚಾರ ಹಾಗೂ ಸರಣಿ ಕೊಲೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಬಳ್ಳಾರಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.ನಗರದ ಮಾರ್ಚ್ಡ ಹೋಟೆಲ್‌ನಿಂದ ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದವರೆಗೆ ಪ್ರತಿಭಟನಾಕಾರರು ರ್ಯಾಲಿ ನಡೆಸಿ, ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಬಳ್ಳಾರಿ ಜಿಲ್ಲಾಧ್ಯಕ್ಷ ಸುರೇಶ್ ಕುಮಾರ್ ಆಗ್ರಹಿಸಿದರು.
ಕಳೆದ ಮೂರು ವರ್ಷಗಳಲ್ಲಿ ರಾಜ್ಯಾದ್ಯಂತ ಸುಮಾರು 8 ಸಾವಿರಕ್ಕೂ ಅಧಿಕ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 327 ದಲಿತ ಹತ್ಯೆ ಹಾಗೂ 620 ದಲಿತ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳು ನಡೆದಿವೆ ರಾಯಚೂರು ಜಿಲ್ಲೆಯಲ್ಲಿ ಭೂನಂದ, ಯುವತಿ ಆಶ್ವಿನಿ ಹಾಗೂ ರಾಣೆಮ್ಮ ಅವರ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ಉಲ್ಲೇಖಿಸಿದ ಪ್ರತಿಭಟನಾಕಾರರು, ಇಂತಹ ಘಟನೆಗಳು ರಾಜ್ಯದಲ್ಲಿ ದಲಿತ ಸಮುದಾಯದ ಸುರಕ್ಷತೆ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ ಎಂದು ಹೇಳಿದರು.
ದಲಿತರಿಗೆ ಸೂಕ್ತ ರಕ್ಷಣೆ ಮತ್ತು ಭದ್ರತೆ ಒದಗಿಸಬೇಕು. ಮೃತರ ಕುಟುಂಬಗಳಿಗೆ ಸರ್ಕಾರದಿಂದ ಅಗತ್ಯ ಆರ್ಥಿಕ ನೆರವು ನೀಡುವುದರ ಜೊತೆಗೆ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ಕಲ್ಪಿಸಬೇಕು ಎಂದು ಸಂಘಟನೆ ಆಗ್ರಹಿಸಿತು.ಪ್ರತಿಭಟನೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಬಳ್ಳಾರಿ ಜಿಲ್ಲಾ ಸಮಿತಿಯ ತಾಲೂಕ ಪದಾಧಿಕಾರಿಗಳು ಮುಖಂಡರು ಸೇರಿದಂತೆ ಹಲವಾರು ಜನ ಸಮಿತಿಯ ಸದಸ್ಯರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 