ಕಥೆ ಹೇಳೂಣು ಸ್ಪರ್ಧೆ: ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ
Storytelling competition: Prize distribution to students
ಲೋಕದರ್ಶನ ವರದಿ
ಕಥೆ ಹೇಳೂಣು ಸ್ಪರ್ಧೆ: ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ
ಬೆಳಗಾವಿ: ಅಥಣಿಯ ಜೆ. ಇ. ಸಂಸ್ಥೆಯ ಕೆ. ಎ. ಲೋಕಾಪುರ ಪದವಿ ಮಹಾವಿದ್ಯಾಲಯ ಹಾಗೂ ಬಸವರಾಜ ಕಟ್ಟೀಮನಿ ಪ್ರತಿಷ್ಠಾನದಿಂದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಬೆಳಗಾವಿಯಿಂದ ಕಥೆ ಹೇಳೂಣು ಎಂಬ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಡಾ. ಜೆ. ಪಿ. ದೊಡ್ಡಮನಿ ಅವರು ಮಾತನಾಡಿ, ಬಸವರಾಜ ಕಟ್ಟಿಮನಿ ಅವರ ಕಥೆ, ಕಾದಂಬರಿಗಳು ಸಾಮಾಜಿಕ, ರಾಜಕೀಯ ಹಾಗೂ ರಾಷ್ಟ್ರೀಯತೆಗೆ ಸಂಬಂಧಿಸಿದ ವಿಷಯ ವಸ್ತುವಿನೊಂದಿಗೆ ಮುಂದಿನ ಜನಾಂಗಕ್ಕೆ ಸಂದೇಶವನ್ನು ನೀಡಿದ್ದಾರೆ. ಬಸವರಾಜ ಕಟ್ಟೀಮನಿಯವರು ತಮ್ಮ ಸಾಹಿತ್ಯದ ಮೂಲಕ ಸಮಾಜದ ಉದ್ಧಾರಕ್ಕಾಗಿ ಶ್ರಮಿಸಿದವರು. ಕಟ್ಟೀಮನಿ ನೇರ ನುಡಿಯ ಸಾಹಿತಿ ಮತ್ತು ಪತ್ರಕರ್ತರಾಗಿದ್ದರು. ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು.
ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳು: ಭವಾನಿ ಪಾಟೀಲ ಅವರಿಗೆ ಪ್ರಥಮ , ಪೂಜಾ ಸಾಂಗ್ಲಿ ಅವರಿಗೆ ದ್ವಿತೀಯ ,
ಸಕ್ಕುಬಾಯಿ ನಿಂಗನೂರ್ ತೃತೀಯ ಬಹುಮಾನಗಳನ್ನು ವಿತರಿಸಲಾಯಿತು.
ಅಧ್ಯಕ್ಷತೆಯನ್ನು ಜಿ. ಎಮ್. ಕುಲಕರ್ಣಿ ಅವರು ವಹಿಸಿದ್ದರು. ಬಿ. ಎ. ಬಮನಾಳೆ, ಎನ್. ಬಿ. ಝರೆ. ಡಾ. ಮಹಾವೀರ ಕಾಳೆ ಅವರು ಸ್ವಾಗತಿಸಿದರು. ಭಾರತಿ ಅಗಸರ ನಿರೂಪಿಸಿದರು. ಮನೋಜಕುಮಾರ ಆಕಾಶ ಅವರು ವಂದಿಸಿದರು. ಮಹಾವಿದ್ಯಾಲಯದಿಂದ ವಿದ್ಯಾರ್ಥಿಗಳು ಕಥೆ ಸ್ಪರ್ಧೆಯಲ್ಲಿ ಭಾಗವಹಿಸಿದರು. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 