ಕೊಪ್ಪಳ 07: ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಸಮುದಾಯ ವೈದ್ಯಶಾಸ್ತ್ರ ವಿಭಾಗದ ನೇತೃತ್ವದಲ್ಲಿ ಏರ್ಪಡಿಸಿದ್ದ ಬೀದಿ ನಾಟಕ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು (ಫೆ.06) ಜಿಲ್ಲಾ ಆಸ್ಪತ್ರೆ ಮತ್ತು ನಗರ ಆರೋಗ್ಯ ಕೇಂದ್ರದ ಆವರಣದಲ್ಲಿ ಪ್ರತ್ಯೇಕವಾಗಿ ಬೀದಿ ನಾಟಕಗಳನ್ನು ಹಮ್ಮಿಕೊಂಡು "ಕೊರೊನಾ ವೈರಸ್ ಸೋಂಕು" ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
"ಕೊರೊನಾ ವೈರಸ್ ಸೋಂಕು" ಒಬ್ಬರಿಂದ ಮತ್ತೊಬ್ಬರಿಗೆ ಹೇಗೆ ಹರಡುತ್ತದೆ, ಅದರ ಚಿಕಿತ್ಸಾ ವಿಧಾನ ಮತ್ತು ವೈರಸ್ ಹರಡದಂತೆ ಯಾವ ರೀತಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಹಾಗೂ ಕೊರೋನಾ ವೈರಸ್ ಬಗ್ಗೆ ಜಾಗೃತಿ ಭಿತ್ತಿ ಪತ್ರಗಳನ್ನು ಸಹ ಹಂಚಲಾಯಿತು. ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಹಾಗೂ ಅವರ ಸಂಬಂಧಿಕರು ಬೀದಿನಾಟಕದ ಸದುಪಯೋಗ ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಕೊಪ್ಪಳ ಕಿಮ್ಸ್ ವಿಭಾಗದ ಮುಖ್ಯಸ್ಥರಾದ ಡಾ.ಮಲ್ಲಿಕಾಜರ್ುನ ಬಿರಾದಾರ, ಸಹ ಪ್ರಾಧ್ಯಾಪಕ ಡಾ. ರವೀಂದ್ರನಾಥ ಭೋವಿ, ಸಹಾಯಕ ಪ್ರಾಧ್ಯಾಪಕರುಗಳಾದ ಡಾ.ಸ್ಮಿತಾ ನಿಂಬಣ್ಣನವರ್, ಡಾ.ಶರಣಕುಮಾರ ಹೊಳಿಯಾಚಿ, ಡಾ. ವಿಜಯಕುಮಾರ್ ಮಾನೆ, ಡಾ.ಚೇತನಾ ಕೆ ವಿ, ಡಾ.ಅನಿಲ್ಕುಮಾರ್ ಎಲ್. ಮತ್ತು ಇತರೆ ಬೋಧಕರು, ಸಾಮಾಜಿಕ ಕಾರ್ಯಕರ್ತರು ಹಾಗೂ ಬೋಧಕೇತರ ಸಿಬ್ಬಂದಿ, ಜಿಲ್ಲಾ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುವ ಹಲವಾರು ವೈದ್ಯರು, ಶುಶ್ರೂಷಕರು ಉಪಸ್ಥಿತರಿದ್ದರು.