ಮೂಲಭೂತ ಸೌಲಭ್ಯಗಳ ಕೊರತೆ ಆರೋಪಿಸಿ ಬೀದಿಬದಿ ವ್ಯಾಪಾರಿಗಳ ಪ್ರತಿಭಟನೆ
Street vendors protest alleging lack of basic amenities
ಲೋಕದರ್ಶನ ವರದಿ
ಜಮಖಂಡಿ 5: ನಗರದ ಬೀದಿಬದಿ ವ್ಯಾಪಾರಿಗಳು ಮೂಲಭೂತ ಸೌಲಭ್ಯಗಳ ಕೊರತೆಯನ್ನು ಆರೋಪಿಸಿ ನಗರಸಭೆ ಪೌರಾಯುಕ್ತ ಜ್ಯೋತಿಗೀರೀಶ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಬಳಿಕ ನಗರಸಭೆ ಪೌರಾಯುಕ್ತರು ಹಾಗೂ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಅವರಿಗೆ ಪ್ರತ್ಯೇಕ ಮನವಿ ಸಲ್ಲಿಸಿದರು. ಪ್ರತಿಭಟನಾಕಾರರು ಮಾತನಾಡಿ ತಿಂಗಳ ಹಿಂದೆ ಹಳೆ ಜೈಲು ಆವರಣದಲ್ಲಿ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಲಾಗಿತ್ತು. ಅಲ್ಲಿಗೆ ಸ್ಥಳಾಂತರವಾದರೆ ಅಗತ್ಯವಿರುವ ಎಲ್ಲ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದಾಗಿ ನಗರಸಭೆ ಭರವಸೆ ನೀಡಿತ್ತು. ಆದರೆ ಇದುವರೆಗೆ ಯಾವುದೇ ಸೌಲಭ್ಯಗಳನ್ನು ಒದಗಿಸಿಲ್ಲ ಎಂದು ಆರೋಪಿಸಿದರು.
ಕಿರಾಣಿ ಅಂಗಡಿಗಳ ವಿರುದ್ಧ ಆಕ್ರೋಶ
ನಗರದ ಪ್ರಮುಖ ರಸ್ತೆಗಳಲ್ಲಿ ಕಿರಾಣಿ ಅಂಗಡಿಗಳು ಅತಿಕ್ರಮಣ ಮಾಡಿಕೊಂಡಿರುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಮೊದಲು ರಸ್ತೆ ಅತಿಕ್ರಮಿಸಿರುವ ಅಂಗಡಿಗಳ ವಿರುದ್ಧ ಕ್ರಮ ಕೈಗೊಂಡು, ಬಳಿಕ ಬೀದಿಬದಿ ವ್ಯಾಪಾರಿಗಳ ಮೇಲೆ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ತಮ್ಮಿಂದ ಸಂಚಾರ ಸಮಸ್ಯೆ ಉಂಟಾಗುತ್ತಿದೆ ಎಂಬ ಆರೋಪ ಸರಿಯಲ್ಲ. ರಸ್ತೆ ಅತಿಕ್ರಮಣ ತೆರವುಗೊಳಿಸಿದರೆ ಸಂಚಾರ ದಟ್ಟಣೆ ಸಹಜವಾಗಿಯೇ ಕಡಿಮೆಯಾಗುತ್ತದೆ ಎಂದು ವ್ಯಾಪಾರಿಗಳು ಹೇಳಿದರು.
ಪೊಲೀಸರ ಕಿರುಕುಳ ಆರೋಪ
ನಗರದ ವಿವಿಧ ಭಾಗಗಳಲ್ಲಿ ವ್ಯಾಪಾರ ನಡೆಸುತ್ತಿರುವ ವೇಳೆ ಪೊಲೀಸರು ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ. ವ್ಯಾಪಾರ ಮಾಡಲು ಅವಕಾಶ ನೀಡದೆ, ಪದೇಪದೆ ಸ್ಥಳಾಂತರಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಜೀವನೋಪಾಯಕ್ಕೆ ತೊಂದರೆಯಾಗುತ್ತಿದೆ ಎಂದು ಅವರು ದೂರಿದರು. ಪ್ರತಿಭಟನೆಯ ಬಳಿಕ ನಗರಸಭೆ ಪೌರಾಯುಕ್ತರು ಹಾಗೂ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬೀದಿಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ನಬೀಸಾಬ್ ಮುಲ್ಲಾ, ಯಮನಪ್ಪ ಘಾಟಗೆ, ಶಶಾಂಕ್ ನಲ್ಲವಡೆ, ಸಂಗಪ್ಪ ಗುಣ್ಣಾಪೂರ, ಮುತ್ತಪ್ಪ ಬಜಂತ್ರಿ, ಪರಸು ಮಾಳಿ, ಮಲ್ಲಪ್ಪ ಬಜಂತ್ರಿ, ರಶೀದ್ ನಾಗರಾಜ್, ಪಾರುಕ್ ಬಾಗವಾನ್, ಪಾರುಕ್ ಪೌಜಿ, ಸುಸಲವ್ವ ಪೂಜಾರಿ, ನಜುಪರವೀನ್ ಬಾಗವಾನ್, ಅಮೀನಾಬಿ ನಧಾಪ್ ಸೇರಿದಂತೆ ಅನೇಕ ಬೀದಿಬದಿ ವ್ಯಾಪಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 