ಕಾಂಗ್ರೆಸ್ ರಸ್ತೆಯಲ್ಲಿ ಬೀದಿ ದೀಪಗಳು ಬಂದ್: ಸಾರ್ವಜನಿಕರ ಪರದಾಟ
Streetlights out on Congress Road: Public faces hardship
ಬೆಳಗಾವಿ, ಜು.31: ನಗರದ ಪ್ರಮುಖ ರಸ್ತೆಗಳಲ್ಲಿ ಒಂದಾದ ಕಾಂಗ್ರೆಸ್ ರಸ್ತೆ, ಕ್ಲಬ್ ರೋಡ್ ಹಾಗೂ ಖಾನಾಪುರ ಮುಖ್ಯ ರಸ್ತೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಅಳವಡಿಸಿರುವ ಬೀದಿ ದೀಪಗಳು ಕಳೆದ ನಾಲ್ಕೈದು ತಿಂಗಳಿಂದ ಕಾರ್ಯನಿರ್ವಹಿಸದಿರುವುದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಪ್ರತಿದಿನ ಸಂಜೆ 7 ಗಂಟೆಯ ನಂತರ ಈ ರಸ್ತೆಗಳು ಸಂಪೂರ್ಣ ಕತ್ತಲಿನಲ್ಲಿ ಮುಳುಗುತ್ತಿದ್ದು, ವಿದ್ಯಾರ್ಥಿಗಳು, ಉದ್ಯೋಗಿಗಳು, ಆಸ್ಪತ್ರೆಗೆ ತೆರಳುವ ರೋಗಿಗಳು ಹಾಗೂ ವಾಹನ ಸವಾರರು ಸಂಚರಿಸಲು ಪರದಾಡುವಂತಾಗಿದೆ. ಸಮರ್ಕ ಬೆಳಕಿನ ಕೊರತೆಯಿಂದ ರಸ್ತೆ ಅಪಘಾತಗಳ ಸಾಧ್ಯತೆ ಹೆಚ್ಚಾಗಿದ್ದು, ಪಾದಚಾರಿಗಳ ಸುರಕ್ಷತೆಯೂ ಪ್ರಶ್ನಾರ್ಥಕವಾಗಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಕತ್ತಲಿನ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಕಳ್ಳತನ ಹಾಗೂ ಇತರ ಅಸಾಮಾಜಿಕ ಚಟುವಟಿಕೆಗಳು ನಡೆಯುವ ಸಾಧ್ಯತೆ ಇದೆ ಎಂದು ನಾಗರಿಕರು ದೂರಿದ್ದಾರೆ. ತೆರಿಗೆ ಪಾವತಿಸುತ್ತಿದ್ದರೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಮಹಾನಗರ ಪಾಲಿಕೆ ವಿಫಲವಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಹಲವು ಬಾರಿ ಮಹಾನಗರ ಪಾಲಿಕೆಗೆ ಮೌಖಿಕ ಹಾಗೂ ಲಿಖಿತ ದೂರು ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸಮಸ್ಯೆ ಇದೇ ರೀತಿ ಮುಂದುವರಿದರೆ ಸಾರ್ವಜನಿಕರ ಸುರಕ್ಷತೆಗೆ ಧಕ್ಕೆಯಾಗುವುದರ ಜೊತೆಗೆ ಆಡಳಿತದ ಮೇಲಿನ ಜನರ ವಿಶ್ವಾಸಕ್ಕೂ ಧಕ್ಕೆ ಉಂಟಾಗಲಿದೆ. ಆದ್ದರಿಂದ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ ಕಾಂಗ್ರೆಸ್ ರಸ್ತೆ ಸೇರಿದಂತೆ ಸಂಬಂಧಿತ ಪ್ರದೇಶಗಳ ಎಲ್ಲಾ ಬೀದಿ ದೀಪಗಳನ್ನು ದುರಸ್ತಿಗೊಳಿಸಿ ಸಾರ್ವಜನಿಕರಿಗೆ ಸುರಕ್ಷಿತ ಸಂಚಾರದ ವ್ಯವಸ್ಥೆ ಕಲ್ಪಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 