ಅಭ್ಯಥರ್ಿಗಳ ಗೆಲುವಿಗಾಗಿ ಶ್ರಮಿಸಿ: ಶಾಸಕ ವಿರೂಪಾಕ್ಷಪ್ಪ

ಲೋಕದರ್ಶನವರದಿ

ಬ್ಯಾಡಗಿ:ಪಟ್ಟಣದ ಸವರ್ಾಂಗೀಣ ಅಭಿವೃದ್ಧಿಗೆ ಬಿಜೆಪಿ ಬದ್ಧವಾಗಿದ್ದು ಪ್ರತಿಯೊಂದು ವಾರ್ಡಗಳಲ್ಲಿಯೂ ನಮ್ಮ ಅಭ್ಯಥರ್ಿಗಳ ಗೆಲುವಿಗಾಗಿ ಶ್ರಮಿಸಬೇಕು, ಬೂತ್ ಮಟ್ಟದ ಕಾರ್ಯಕರ್ತರು ಲೋಕಸಭೆ ಚುನಾವಣೆ ಮಾದರಿಯಲ್ಲಿ ಪುರಸಭೆ ಚುನಾವಣೆಯಲ್ಲಿಯೂ ಕೆಲಸ ನಿರ್ವಹಿಸಿದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ನಿಶ್ಚಿತವೆಂದು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.

 ಪುರಸಭೆ ಚುನಾವಣೆ ಹಿನ್ನಲೆಯಲ್ಲಿ 9ನೇ ವಾರ್ಡನ ಬಿಜೆಪಿ ಅಭ್ಯಥರ್ಿ ಬಸವರಾಜ ಛತ್ರದ ಅವರ ಪರ ಚುನಾವಣಾ ಪ್ರಚಾರದ ವೇಳೆ ಅವರು ಮಾತನಾಡಿದರು. ಪುರಸಭೆಯಲ್ಲಿ ಆಡಳಿತ ನಡೆಸಲು ದೊರೆತ ಅಲ್ಪಾವಧಿಯಲ್ಲಿಯೇ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇವೆ, ಇನ್ನೇನು ಕೆಲವೇ ದಿನಗಳಲ್ಲಿ ಯುಜಿಡಿ ಹಾಗೂ ನಿರಂತರ ಕುಡಿಯವ ನೀರಿನ ಕಾಮಗಾರಿ ಮುಕ್ತಾಯಗೊಳ್ಳಲಿದ್ದು ಬರುವ ದಿನಗಳಲ್ಲಿ ಅಂತರಾಷ್ಟ್ರೀಯ ಖ್ಯಾತಿಗೆ ತಕ್ಕಂತೆ ಬ್ಯಾಡಗಿ ಪಟ್ಟಣವನ್ನು ಅಭಿವೃದ್ಧಿಪಡಿಸಲು ಶ್ರಮಿಸುವುದಾಗಿ ತಿಳಿಸಿದರು.

 ಅಭ್ಯಥರ್ಿ ಬಸವರಾಜ ಛತ್ರದ ಮಾತನಾಡಿ, ದೇಶದಲ್ಲಿ ಮೋದಿ ಸುನಾಮಿಗೆ ವಿರೋಧ ಪಕ್ಷವೇ ಇಲ್ಲದಂತಾಗಿದೆ ಮುಂದಿನ 5 ವರ್ಷದಲ್ಲಿ ದೇಶ ಇನ್ನಷ್ಟು ಅಭಿವೃದ್ಧಿಯಾಗಲಿದೆ ಆದ್ದರಿಂದ ಪಟ್ಟಣದ ಅಭಿವೃದ್ಧಿಗೆ ಮತ್ತೊಮ್ಮೆ ಬಿಜೆಪಿ ಅಭ್ಯಥರ್ಿಗಳನ್ನು ಬೆಂಬಲಿಸಬೇಕು, ಮೊದಲ ಬಾರಿಗೆ ಅಧ್ಯಕ್ಷರಾಗಿ ಆಯ್ಕೆ ಯಾದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷಾತೀತವಾಗಿ ಪಟ್ಟಣದ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಎಂದರು. ಈ ಸಂದರ್ಭದಲ್ಲಿ ರವೀಂದ್ರ ಪಟ್ಟಣಶೆಟ್ಟಿ, ಸುರೇಶ ಯತ್ನಳ್ಳಿ, ವಿಶ್ವನಾಥ ಛತ್ರದ, ಬಾಬು ಹೂಲಿಹಳ್ಳಿ, ಗಣೇಶ ಅಚಲಕರ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.