ಒತ್ತಡ ಮುಕ್ತ ಶಿಕ್ಷಣ ಅವಶ್ಯಕ
ಲೋಕದರ್ಶನವರದಿ
ಬ್ಯಾಡಗಿ೦೩:ಪ್ರಸ್ತುತ ದಿನಗಳಲ್ಲಿ ಕ್ರೀಯಾಶೀಲತೆಯಿಂದ ಕೂಡಿದ ಒತ್ತಡ ಮುಕ್ತ ಶಿಕ್ಷಣದ ಅವಶ್ಯಕತೆಯಿದೆ, ಇದರಿಂದ ಮಾತ್ರ ಆಸಕ್ತಿದಾಯಕ ಶಿಕ್ಷಣವನ್ನು ಮಗು ಪಡೆದುಕೊಳ್ಳಲು ಸಾಧ್ಯವಾಗಲಿದೆ ಎಂದು ಪಟ್ಟಣದ ಶಾಸಕರ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಿದ ಕ್ಷೇತ್ರ ಸಮನ್ವಯಾಧಿಕಾರಿ ಎಂ.ಎಫ್ ಬಾಕರ್ಿ ಅಭಿಪ್ರಾಯ ವ್ಯಕ್ತಪಡಿಸಿದರು.
ಒತ್ತಡದ ಶಿಕ್ಷಣದಿಂದ ಯಾವುದೇ ಪ್ರಗತಿ ಕಾಣಲು ಸಾಧ್ಯವಿಲ್ಲ ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಶಿಕ್ಷಕರು ಹಾಗೂ ಪಾಲಕರು ತಮ್ಮ ಮಕ್ಕಳ ಸಾಮಥ್ರ್ಯವನ್ನು ಅರಿತುಕೊಳ್ಳುವ ಮೂಲಕ ಮುಂದಿನ ಶೈಕ್ಷಣಿಕ ನಿಧರ್ಾರವನ್ನು ಕೈಗೊಂಡಾಗ ಮಾತ್ರ ಸಮಗ್ರವಾದ ಬೌದ್ಧಿಕ ಮಟ್ಟವನ್ನು ಅವರಲ್ಲಿ ಕಾಣಲು ಸಾಧ್ಯವೆಂದರು.
ಉಚಿತ ಸೌಲಭ್ಯಗಳನ್ನು ತಿರಸ್ಕರಿಸುತ್ತಿರುವ ಪಾಲಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಕಳಿಸಲು ಹಿಂದೇಟು ಹಾಕುತ್ತಿರುವುದಕ್ಕೆ ವಿಷಾದ ವ್ಯಕ್ತಪಡಿಸಿದ ಅವರು, ಪಾಲಕರಲ್ಲಿರುವ ಹುದುಗಿರುವ ಖಾಸಗಿ ಶಾಲಾ ವ್ಯಾಮೋಹಕ್ಕೆ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆಯೂ ಸಹ ಕ್ರಮೇಣವಾಗಿ ಇಳಿಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಅಕ್ಷರ ದಾಸೋಧಿಕಾರಿ ತಿಮ್ಮಾರೆಡ್ಡಿ ಮಾತನಾಡಿ, ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಅಡಗಿರುವ ಸೂಪ್ತ ಪ್ರತಿಭೆಯನ್ನು ಹೊರತರುವಲ್ಲಿ ಪ್ರಮುಖ ಪಾತ್ರ ವಹಿಸಲಿವೆ.
ಓದಿನ ಜೊತೆಯಲ್ಲಿ ಸಂಗೀತ, ಜಾನಪದ, ಕರಕುಶಲ ಕಲೆ, ಗಾಯನ, ನೃತ್ಯ ಸೇರಿದಂತೆ ಮಕ್ಕಳ ಮನಸ್ಸನ್ನು ಸೆಳೆಯುವ ಹಲವಾರು ಆಸಕ್ತಿದಾಯಕ ವಿಷಯಗಳನ್ನು ಶಿಬಿರದಲ್ಲಿ ಭೋಧಿಸಲಾಗುತ್ತದೆ ಎಂದರು. ಈ ಸಂದರ್ಬದಲ್ಲಿ ಶಿಕ್ಷಣ ಸಂಯೋಜಕ ಬಸವರಾಜ ಸೋಮಕ್ಕಳವರ, ಮುಖ್ಯಶಿಕ್ಷಕಿ ರಾಜೇಶ್ವರಿ ಸಜ್ಜೇಶ್ವರ, ಎಂ.ವೈ.ಹೊಟ್ಟಿಗೌಡ್ರ ಸೇರಿದಂತೆ ಶಾಲೆಯ ಶಿಕ್ಷಕ ವೃಂದ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 