ಯೋಗ, ಧ್ಯಾನದಿಂದ ಒತ್ತಡ ನಿವಾರಣೆ ಸಾಧ್ಯ: ಡಾ. ಹಿರಿಶಾಂತವೀರ ಸ್ವಾಮೀಜಿ
Stress relief is possible through yoga and meditation: Dr. Hirishanthaveera Swamiji
ಹೂವಿನಹಡಗಲಿ, ಸೆ. 07: ಇಂದಿನ ಒತ್ತಡದ ಜೀವನಶೈಲಿಯಲ್ಲಿ ಮನಸ್ಸನ್ನು ಶಾಂತವಾಗಿರಿಸಿಕೊಳ್ಳಲು ನಿರಂತರ ಯೋಗ ಹಾಗೂ ಧ್ಯಾನಾಭ್ಯಾಸ ಮಾಡುವುದು ಅಗತ್ಯ. ಇದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಆರೋಗ್ಯವಾಗಿರಲು ಸಾಧ್ಯ ಎಂದು ಗವಿಮಠದ ಡಾ. ಹಿರಿಶಾಂತವೀರ ಸ್ವಾಮೀಜಿ ಹೇಳಿದರು.
ಪಟ್ಟಣದಲ್ಲಿ ಪತಂಜಲಿ ಯೋಗ ಸಮಿತಿ ಜಿಲ್ಲಾ ಘಟಕ, ಚಾರಿಟಬಲ್ ಟ್ರಸ್ಟ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಜೆಸಿಐ ರಾಯಲ್ಸ್, ವರ್ತಕರ ಸಂಘ ಹಾಗೂ ಇತರ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಸಕ್ಕರೆ ಕಾಯಿಲೆ ಮತ್ತು ಬೊಜ್ಜು ನಿವಾರಣೆಗಾಗಿ ಏಳು ದಿನಗಳ ವಿಶೇಷ ಯೋಗ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಒತ್ತಡದ ಜೀವನಶೈಲಿಯಿಂದಾಗಿ ಜನರಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿದ್ದು, ಸಕ್ಕರೆ ಕಾಯಿಲೆ ಹಾಗೂ ಬೊಜ್ಜಿನ ಸಮಸ್ಯೆ ಕೂಡ ವ್ಯಾಪಕವಾಗುತ್ತಿದೆ. ಇಂತಹ ಸಮಸ್ಯೆಗಳನ್ನು ನಿಯಂತ್ರಿಸುವಲ್ಲಿ ಯೋಗ ಮತ್ತು ಧ್ಯಾನ ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಜಿಬಿಆರ್ ಕಾಲೇಜಿನ ಪ್ರಾಚಾರ್ಯ ಎಸ್.ಎಸ್. ಪಾಟೀಲ ಮಾತನಾಡಿ, ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಯೋಗದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಹೆಚ್ಚಿನ ಸಂಖ್ಯೆಯಲ್ಲಿ ಯೋಗ ಶಿಬಿರಗಳನ್ನು ಆಯೋಜಿಸಬೇಕು. ವಿದ್ಯಾರ್ಥಿಗಳು ಬಾಲ್ಯದಿಂದಲೇ ಯೋಗಾಭ್ಯಾಸ ರೂಢಿಸಿಕೊಳ್ಳುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು.
ಟ್ರಸ್ಟ್ ಅಧ್ಯಕ್ಷ ಡಾ. ಲಕ್ಷ್ಮಣ ಲಮಾಣಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಕ್ಕರೆ ಕಾಯಿಲೆ ಹಾಗೂ ಬೊಜ್ಜಿನಂತಹ ಆರೋಗ್ಯ ಸಮಸ್ಯೆಗಳು ಸಾಕಷ್ಟು ಜನರನ್ನು ಬಾಧಿಸುತ್ತಿವೆ. ನಿಯಮಿತ ಯೋಗಾಭ್ಯಾಸ ಹಾಗೂ ಆರೋಗ್ಯಕರ ಜೀವನಶೈಲಿಯಿಂದ ಇವುಗಳನ್ನು ನಿಯಂತ್ರಿಸಲು ಸಾಧ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಭಾರಿ ಎಫ್. ಸತ್ಯಪ್ಪ, ರಾಜ್ಯ ಸಮಿತಿಯ ರಾಜೇಶ್, ಅನಂತ ಜೋಶಿ, ಮಲ್ಲಿಗೆ ಯೋಗ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಕೋಡಿಹಳ್ಳಿ ಕೋಟ್ರೇಶ್, ಗೌರವಾಧ್ಯಕ್ಷ ಭರತ್ ಕುಮಾರ್ ಚವಾಣ್, ಉಪಾಧ್ಯಕ್ಷ ಕೆ. ನಾಗರಾಜ್, ಕೆ.ಎಂ. ವಾಗೀಶ್, ಮಹಿಳಾ ಅಧ್ಯಕ್ಷೆ ಇಂದುಮತಿ ನಾಯಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ನಾಗರತ್ನ ಪ್ರಾರ್ಥಿಸಿದರು. ಖಜಾಂಚಿ ಕೆ. ಮಾಲತೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಾಲಚಂದ್ರ ಶರ್ಮಾ ಶಿಬಿರದ ಕುರಿತು ಪ್ರಾಥಮಿಕ ಮಾಹಿತಿ ನೀಡಿದರು. ಶಂಭುಲಿಂಗ ಸ್ವಾಗತಿಸಿದರು. ಡಾ. ಜೆ.ಡಿ. ಉಮೇಶ್ ಹಾಗೂ ರಫೀನಾ ಬೇಗಂ ನಿರೂಪಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 