ಗ್ಯಾಸ್ ಬೆಲೆ ಏರಿಕೆ, ಅಕ್ರಮ ದಾಸ್ತಾನು, ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ
Strict action against those responsible for gas price hike, illegal stockpiling, and creating artifi
ಲೋಕದರ್ಶನ ವರದಿ
ಬಳ್ಳಾರಿ 02: ಜಿಲ್ಲೆಯಲ್ಲಿ ಗೃಹಬಳಕೆ ಎಲ್‌ಪಿಜಿ, ಆಟೋ ಗ್ಯಾಸ್ ಬೆಲೆ ಏರಿಕೆ, ಕೃತಕ ಅಭಾವ ಸೃಷ್ಟಿಸುವ ಮಾರಾಟಗಾರರು ಹಾಗೂ ಅಕ್ರಮ ದಾಸ್ತಾನುದಾರರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಗುರುವಾರ, ನಗರದ ನೂತನ ಜಿಲ್ಲಾಡಳಿತ ಭವನದ ಕೆಸ್ವಾನ್ ವಿಡಿಯೋ ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲ್ಲೂಕು ತಹಶೀಲ್ದಾರರೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಇತ್ತೀಚೆಗೆ ನಗರದ ಗ್ಯಾಸ್ ಸ್ಟೇಷನ್‌ವೊಂದರಲ್ಲಿ ಆಟೋ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನಾ ದೂರಿನ ಹಿನ್ನೆಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು. ಗ್ಯಾಸ್ ಸ್ಟೇಷನ್‌ಗಳಲ್ಲಿ ದಾಸ್ತಾನು ಇದ್ದರೂ ‘ನೋ ಸ್ಟಾಕ್' ಬೋರ್ಡ್ ಹಾಕಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ದೂರುಗಳು ಬರದಂತೆ ನೋಡಿಕೊಳ್ಳಬೇಕು. ಅಧಿಕಾರಿಗಳು ಅಂತಹ ಸ್ಥಳಗಳಿಗೆ ಭೇಟಿ ನೀಡಿ ದಾಸ್ತಾನು ಪರೀಶೀಲಿಸಬೇಕು ಎಂದು ನಿರ್ದೇಶನ ನೀಡಿದರು.
ಸಾರ್ವಜನಿಕರು ಅಕ್ರಮ ದಾಸ್ತಾನು ಅಥವಾ ಬೆಲೆ ಏರಿಕೆಯಂತಹ ಪ್ರಕರಣಗಳು ಕಂಡುಬಂದಲ್ಲಿ ಕೂಡಲೇ ಉಚಿತ ಸಹಾಯವಾಣಿ ಸಂಖ್ಯೆ 1070 ಕರೆಮಾಡಿ ಮಾಹಿತಿ ನೀಡಬಹುದು. ಈ ಕುರಿತು ಅಧಿಕಾರಿಗಳು ನಿಗಾವಹಿಸಬೇಕು. ಕರೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದರು.
*ಏ.3 ರಿಂದ ತುಂಗಭದ್ರಾ ಎಚ್‌ಎಲ್‌ಸಿ ಕಾಲುವೆಗೆ ಕುಡಿಯಲು ನೀರು ಬಿಡುಗಡೆ:*
ಕುಡಿಯುವ ನೀರಿನ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ನಾಳೆಯಿಂದ ತುಂಗಭದ್ರಾ ಎಚ್‌ಎಲ್‌ಸಿ ಕಾಲುವೆಗೆ ಕುಡಿಯಲು ನೀರು ಹರಿಸಲಾಗುತ್ತದೆ. ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಕೆಯಾಗಬೇಕು. ಯಾವುದೇ ಕಾರಣಕ್ಕೂ ಅಕ್ರಮವಾಗಿ ನೀರು ವ್ಯರ್ಥವಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಕೃಷಿ, ಕೈಗಾರಿಕೆಗಳು ಅಥವಾ ವಾಣಿಜ್ಯ ಉದ್ದೇಶಗಳಿಗಾಗಿ ಕಾಲುವೆಯಿಂದ ಅಕ್ರಮವಾಗಿ ನೀರು ಎತ್ತುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಕಾಲುವೆ ಹಾದುಹೋಗುವ ಮಾರ್ಗದುದ್ದಕ್ಕೂ ಪೊಲೀಸ್, ನೀರಾವರಿ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ಮೂಲಕ ನಿರಂತರವಾಗಿ ಬೀಟ್ ವ್ಯವಸ್ಥೆ ಕೈಗೊಳ್ಳುವ ಮೂಲಕ ನಿಗಾವಹಿಸಬೇಕು ಎಂದು ತಿಳಿಸಿದರು.
ಕುಡಿಯುವ ನೀರಿನ ಸಮರ್ಕ ಪೂರೈಕೆಗಾಗಿ ಅಧಿಕಾರಿಗಳು ಪಂಪಿಂಗ್ ಶೆಡ್ಯೂಲ್ ಸಿದ್ಧಪಡಿಸಿಕೊಳ್ಳಬೇಕು. ನೀರು ಬಂದ ನಂತರ ಕೆರೆ ತುಂಬಿಸಿಕೊಳ್ಳಲು ಮೋಟಾರ್ ಮತ್ತು ಪಂಪ್‌ಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು. ಮುಂಬರುವ ಬೇಸಿಗೆಯ ದಿನಗಳಲ್ಲಿ ನೀರಿಗೆ ತೊಂದರೆಯಾಗದಂತೆ ಕೆರೆಗಳಲ್ಲಿ ಸಂಗ್ರಹಣಾ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 