ಪರಿಶಿಷ್ಟ ಜಾತಿ ವರ್ಗಗಳ ಸಮಸ್ಯೆಗಳ ಪರಿಹಾರಕ್ಕೆ ಅನುಸೂಚಿತ ಬುಡಕಟ್ಟುಗಳ ಆಯೋಗದಿಂದ ಕಟ್ಟುನಿಟ್ಟಿನ ಕ್ರಮ
Strict action by the Scheduled Tribes Commission to resolve the problems of Scheduled Castes and Sch
ಲೋಕದರ್ಶನ ವರದಿ
ವಿಜಯಪುರ 29 : ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳಿಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಅನೇಕ ಸಮಸ್ಯೆಗಳಿದ್ದು ಅಂತಹ ಸಮಸ್ಯೆಗಳನ್ನು ಆಯೋಗವು ಗಂಭೀರವಾಗಿ ಆಲಿಸಿ ಅವುಗಳಿಗೆ ಪರಿಹಾರ ಒದಗಿಸಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ಡಾ.ಮೂರ್ತಿ.ಎಲ್ ಅವರು ಹೇಳಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಕುಂದು ಕೊರತೆಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಭೂವ್ಯಾಜ್ಯ, ಅಟ್ರಾಸಿಟಿ, ನಕಲಿ ಜಾತಿ ಪ್ರಮಾಣ ಪತ್ರ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಪರಿಗಣಿಸಲು ಅಧಿಕಾರಿಗಳು ಆಯೋಗದ ಜೊತೆಗೂಡಿ ಸರಿಪಡಿಸಬೇಕು. ಈ ಕಾರ್ಯವನ್ನು ರಾಜ್ಯಾದ್ಯಾಂತ ಚುರುಕುಗೊಳಿಸಲಾಗುವುದು ಎಂದರು. ಪ್ರಕರಣಗಳ ವಿಳಂಬಕ್ಕೆ ಕಾರಣ ಸಂಪೂರ್ಣ ಅವಲೋಕನ ಮಾಡಿಕೊಂಡು ಸಮತೋಲನ ವಹಿಸಿ ಫಲಾನುಭವಿಗಳಿಗೆ ನ್ಯಾಯ ಕಲ್ಪಿಸಬೇಕು ಎಂದರು. ಈಗಾಗಲೇ 3850 ಪ್ರಕರಣಗಳ ಕಾರ್ಯ ನಡೆದಿದೆ. 4500 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದ ಅವರು, ಕಳೆದ ಆರು ತಿಂಗಳಿಂದ ಪ್ರತಿ ಗುರುವಾರ ಹಾಗೂ ಶುಕ್ರವಾರ ಆಲಿಸಿ, 300 ಪ್ರಕರಣಗಳನ್ನು ನ್ಯಾಯಾಲಯದಲ್ಲಿ ಇತ್ಯರ್ಥಪಡಿಸಲಾಗಿದೆ ಎಂದರು.
ಒಟ್ಟಾರೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಮಸ್ಯೆಗಳನ್ನು ಆಲಿಸಿ ಆ ಸಮಸ್ಯೆಗಳನ್ನು ಶಾಶ್ವತ ಪರಿಹಾರ ಕಲ್ಪಿಸುವ ಕಾರ್ಯವನ್ನು ಆಯೋಗದಿಂದ ಮಾಡಲು ಪ್ರಯತ್ನಿಸಲಾಗುವುದು ಎಂದರು. ಸರ್ಕಾರದಿಂದ ಬರುವಂತಹ ಸೌಲಭ್ಯಗಳು ಈ ವರ್ಗದವರಿಗೆ ದೊರಕಿಸುವ ನಿಟ್ಟಿನಲ್ಲಿ ಆಯೋಗ ಕೆಲಸ ಮಾಡುತ್ತಿದೆ. ಆಯೋಗದ ಈ ಕಾರ್ಯಕ್ಕೆ ಆಯಾ ಜಿಲ್ಲೆಗಳ ಅಧಿಕಾರಿಗಳು ಕೈ ಜೋಡಿಸಬೇಕು ಎಂದರು. ಇಂದಿನ ಸಭೆಯಲ್ಲಿ ಸ್ವೀಕರಿಸಲಾದ ದೂರು, ನ್ಯೂನತೆಗಳನ್ನು ಆಯೋಗ ಗಂಭೀರವಾಗಿ ಪರಿಗಣಿಸಿ ಅವುಗಳಿಗೆ ತ್ವರಿತ ಪರಿಹಾರ ಕಲ್ಪಿಸಲಾಗುವುದು. ಅಲ್ಲದೇ ವಿವಿಧ ಜಿಲ್ಲೆಗಳಲ್ಲಿ ಆಲಿಸಿದ ಹಾಗೂ ಸ್ವೀಕರಿಸಲಾದ ಅಹವಾಲುಗಳ ಕುರಿತ ವರದಿಯನ್ನು ಮುಖ್ಯಮಂತ್ರಿಗಳಿಗೆ ಶೀಘ್ರದಲ್ಲಿಯೇ ಸಲ್ಲಿಸಲಾಗುವುದು ಎಂದು ಆಯೋಗದ ಅಧ್ಯಕ್ಷರಾದ ಡಾ.ಮೂರ್ತಿ.ಎಲ್. ತಿಳಿಸಿದರು. ಸಮಾಜ ಮುಖಂಡ ಅಭಿಷೇಕ ಚಕ್ರವರ್ತಿ ಮಾತನಾಡಿ, ಭೂ ಒಡೆತನ, ಹೆಚ್ಚುವರಿ ಜಮೀನು ಸಮಸ್ಯೆಗಳಿವೆ. ಮುಗ್ಧ ಜನರು ಜಮೀನು ಕಳೆದುಕೊಂಡ ಪ್ರಕರಣಗಳಿವೆ.
ಅಂತಹ ಪ್ರಕರಣಗಳನ್ನು ಆಯೋಗ ಗಂಭೀರವಾಗಿ ಪರಿಗಣಿಸಿ, ಆ ಪ್ರಕರಣಗಳಿಗೆ ನ್ಯಾಯ ಕಲ್ಪಿಸಬೇಕು ಎಂದು ಆಯೋಗದ ಅಧ್ಯಕ್ಷರನ್ನು ಕೋರಿದರು. ಅಸ್ಪ್ರಶ್ಯತೆ ನಿವಾರಣೆಗೆ ಸಾಕಷ್ಟು ಜಾಗೃತಿ ಮೂಡಿಸಬೇಕು. ಅದಕ್ಕೆ ವಿಶೇಷ ಮುತುವರ್ಜಿ ವಹಿಸಬೇಕು. ಈ ವರ್ಗದವರಿಗಿರುವ ಸೌಲಭ್ಯ ದೊರಕಿಸಿಕೊಡಬೇಕು. ಈ ಜನಾಂಗದ ಅಭಿವೃದ್ಧಿ ಹಾಗೂ ಸಮಸ್ಯೆಗಳನ್ನು ಕಾನೂನು ರೀತ್ಯ ಇತ್ಯರ್ಥಪಡಿಸಬೇಕು ಎಂದೂ ಆಗ್ರಹಿಸಿದರು. ಎಸ್ ಸಿಪಿಟಿ ಎಸ್ ಪಿ ಯೋಜನೆ ಸಮರ್ಕ ಅನುಷ್ಠಾನಗೊಳ್ಳಬೇಕು ಎಂದರು. ರಾಜಶೇಖರ ಕೂಚಬಾಳ ಮಾತನಾಡಿ,ಪೌರ ಕಾರ್ಮಿಕರಿಗೆ ಸಮರ್ಕ ವೇತನ ನೀಡಲು ಕ್ರಮ ವಹಿಸಬೇಕು. ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷರು,ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಭರವಸೆ ನೀಡಿದರು. ಸಂಜು ಕಂಬಾಗಿ ಮಾತನಾಡಿ, ಗಾಂವಠಾಣ ಜಾಗದಲ್ಲಿ ನಿರ್ಮಾಣ ಮಾಡಿಕೊಂಡಿದ್ದು, ಅನುಕೂಲ ಮಾಡಿಕೊಡಬೇಕು ಎಂಬ ಮನವಿಗೆ ಆಯೋಗದಿಂದ ನ್ಯಾಯ ಕೊಡಿಸುವ ಭರವಸೆಯನ್ನು ಅಧ್ಯಕ್ಷರು ನೀಡಿದರು. ರಾವುತ್ ತಳಕೇರಿ ಮಾತನಾಡಿ, ಸರ್ಕಾರದ ಯೋಜನೆಗಳನ್ನು ಅರ್ಹರಿಗೆ ತಲುಪುವಂತೆ ನೋಡಿಕೊಳ್ಳಬೇಕು. -
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 