ಮುಂಗಾರು ಹಂಗಾಮು: ಬೀಜ, ರಸಗೊಬ್ಬರ ಕೊರತೆಗೆ ಅವಕಾಶ ಇಲ್ಲ
Strict action if artificial shortage is created: Deputy Commissioner Kavita S. Mannikeri
ಕೃತಕ ಕೊರತೆ ಸೃಷ್ಟಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ
ಹೊಸಪೇಟೆ ೩: ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳ ಕೊರತೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಕೃತಕ ಕೊರತೆ ಸೃಷ್ಟಿಸಿ ರೈತರನ್ನು ಶೋಷಿಸುವ ವ್ಯಾಪಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾಗಿದ್ದು, ಬಿತ್ತನೆ ಕಾರ್ಯ ವೇಗ ಪಡೆದಿದೆ. ಪ್ರಸಕ್ತ ಹಂಗಾಮಿನಲ್ಲಿ ಒಟ್ಟು ೨.೪೯ ಲಕ್ಷ ಎಕರೆ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದ್ದು, ಮಳೆ ಕೊರತೆಯಿಂದ ಇದುವರೆಗೆ ೭೬,೭೧೦ ಎಕರೆ ಪ್ರದೇಶದಲ್ಲಿ ಮಾತ್ರ ಬಿತ್ತನೆ ಪೂರ್ಣಗೊಂಡಿದ್ದು, ಇದು ಸುಮಾರು ಶೇ.೩೦ರಷ್ಟು ಪ್ರಗತಿಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ರಸಗೊಬ್ಬರ ಪೂರೈಕೆ ಸಮರ್ಪಕವಾಗಿರಲಿ
ಯೂರಿಯಾ, ಡಿಎಪಿ, ಪೊಟ್ಯಾಶ್ ಸೇರಿದಂತೆ ಅಗತ್ಯ ರಸಗೊಬ್ಬರಗಳನ್ನು ರೈತರಿಗೆ ಯಾವುದೇ ತೊಂದರೆಯಾಗದAತೆ ಪೂರೈಸಬೇಕು. ನಿಗದಿತ ದರಕ್ಕಿಂತ ಹೆಚ್ಚು ಬೆಲೆಗೆ ಮಾರಾಟ ಮಾಡುವುದು, ರಸಗೊಬ್ಬರದ ಜೊತೆಗೆ ಅನಗತ್ಯ ಉತ್ಪನ್ನಗಳನ್ನು ಕಡ್ಡಾಯವಾಗಿ ಖರೀದಿಸಲು ಒತ್ತಾಯಿಸುವ ವ್ಯಾಪಾರಿಗಳ ವಿರುದ್ಧ ಪರವಾನಗಿ ರದ್ದುಪಡಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.
ಪಿಒಎಸ್ ಮೂಲಕವೇ ರಸಗೊಬ್ಬರ ವಿತರಣೆ
ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿಯಮಾನುಸಾರ ರೈತರಿಗೆ ಪಿಒಎಸ್ ಯಂತ್ರದ ಮೂಲಕ ಆಧಾರ್ ದೃಢೀಕರಣದ ನಂತರವೇ ರಸಗೊಬ್ಬರ ವಿತರಿಸಬೇಕು. ಇದರಿಂದ ಅಕ್ರಮ ಸಾಗಣೆ ಹಾಗೂ ದುರ್ಬಳಕೆ ತಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ರೈತರು ಕೇವಲ ಯೂರಿಯಾ ಮತ್ತು ಡಿಎಪಿ ಬಳಕೆಗೆ ಸೀಮಿತರಾಗದೆ, ಮಣ್ಣಿನ ಫಲವತ್ತತೆ ಕಾಪಾಡಲು ನ್ಯಾನೋ ಯೂರಿಯಾ ಮತ್ತು ನ್ಯಾನೋ ಡಿಎಪಿ ಬಳಕೆಯನ್ನು ಹೆಚ್ಚಿಸಬೇಕು. ಈ ಕುರಿತು ತಾಲೂಕು ಹಾಗೂ ಗ್ರಾಮ ಮಟ್ಟದಲ್ಲಿ ಕೃಷಿ ಇಲಾಖೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.
ಬೆಳೆ ಸಮೀಕ್ಷೆ, ವಿಮೆಯಲ್ಲಿ ಪಾರದರ್ಶಕತೆ ಅಗತ್ಯ
ಬೆಳೆ ಸಮೀಕ್ಷೆ ಹಾಗೂ ಬೆಳೆ ವಿಮೆ ಪ್ರಕ್ರಿಯೆಯನ್ನು ಯಾವುದೇ ಲೋಪವಿಲ್ಲದೆ ಪಾರದರ್ಶಕವಾಗಿ ನಡೆಸಬೇಕು. ನಿರ್ಲಕ್ಷö್ಯ ಅಥವಾ ಅಕ್ರಮ ಕಂಡುಬAದರೆ ಸಂಬAಧಿಸಿದ ಅಧಿಕಾರಿಗಳು ಹಾಗೂ ವಿಮಾ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
೭೪ ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ
ಜಿಲ್ಲೆಯ ಅಗತ್ಯಕ್ಕೆ ಅನುಗುಣವಾಗಿ ೧,೩೩,೫೪೩ ಮೆಟ್ರಿಕ್ ಟನ್ ರಸಗೊಬ್ಬರದ ಬೇಡಿಕೆ ಇದ್ದು, ಇದುವರೆಗೆ ೭೪,೫೩೮ ಮೆಟ್ರಿಕ್ ಟನ್ ದಾಸ್ತಾನು ಲಭ್ಯವಾಗಿದೆ. ಈಗಾಗಲೇ ೪೯,೭೭೬ ಮೆಟ್ರಿಕ್ ಟನ್ ರೈತರಿಗೆ ವಿತರಿಸಲಾಗಿದ್ದು, ೨೪,೭೬೨ ಮೆಟ್ರಿಕ್ ಟನ್ ದಾಸ್ತಾನು ಉಳಿದಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದರು.
ಬೆಳೆ ವಿಮೆಗೆ ನೋಂದಣಿ ಗಡುವು ಪ್ರಕಟ
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆಗೆ ಜೋಳ, ತೊಗರಿ, ಸೂರ್ಯಕಾಂತಿ, ಹತ್ತಿ ಸೇರಿದಂತೆ ಕೆಲವು ಬೆಳೆಗಳಿಗೆ ಜುಲೈ ೩೧ ಹಾಗೂ ಭತ್ತ, ರಾಗಿ, ನವಣೆ, ಹುರುಳಿ, ಕಡಲೆ ಸೇರಿದಂತೆ ಇತರೆ ಬೆಳೆಗಳಿಗೆ ಆಗಸ್ಟ್ ೧೪ ಕೊನೆಯ ದಿನವಾಗಿದೆ ಎಂದು ತಿಳಿಸಲಾಯಿತು.
ಪಿಎಂ-ಕಿಸಾನ್ ಯೋಜನೆಯಡಿ ?೬೦೧.೮೦ ಕೋಟಿ ಪಾವತಿ
ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ೧,೨೯,೬೮೪ ಅರ್ಹ ರೈತರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಒಟ್ಟು ?೬೦೧.೮೦ ಕೋಟಿ (?೬೦,೧೮೦.೬೪ ಲಕ್ಷ) ನೆರವು ಜಮಾ ಮಾಡಲಾಗಿದೆ. ಇದೇ ವೇಳೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಗೆ ಸಂಬAಧಿಸಿದ ಕರಪತ್ರವನ್ನು ಜಿಲ್ಲಾಧಿಕಾರಿ ಬಿಡುಗಡೆ ಮಾಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ, ಕೃಷಿ, ತೋಟಗಾರಿಕೆ, ಆಹಾರ ಮತ್ತು ನಾಗರಿಕ ಸರಬರಾಜು, ಪಶುಸಂಗೋಪನೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 