ಪ್ರಜಾಸೌಧ ಸ್ಥಳಕ್ಕೆ ತೀವ್ರ ವಿರೋಧ: 34ನೇ ದಿನಕ್ಕೂ ಮುಂದುವರಿದ ಹೋರಾಟ ಬೋಳವಾಡ ಗ್ರಾಮಸ್ಥರಿಂದ ಭರ್ಜರಿ ಬೆಂಬಲ
Strong opposition to Praja Soudha site: Protest continues for 34th day, receives overwhelming suppor
ತಾಳಿಕೋಟೆ 29: ತಾಲೂಕಿನ ಮೇಲೆಶ್ವರ ಗ್ರಾಮದ ಸಮೀಪ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾದ ಸ್ಥಳವನ್ನು ತೀವ್ರವಾಗಿ ವಿರೋಧಿಸಿ, ಪ್ರಜಾಸೌಧವನ್ನು ತಾಳಿಕೋಟಿ ಪಟ್ಟಣದಲ್ಲಿಯೇ ನಿರ್ಮಿಸಬೇಕು ಎಂಬ ಒತ್ತಾಯದೊಂದಿಗೆ ಆರಂಭಗೊಂಡ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ 34ನೇ ದಿನಕ್ಕೂ ಮುಂದುವರಿದು ಹೋರಾಟಗಾರರ ಸಂಕಲ್ಪವನ್ನು ಮತ್ತಷ್ಟು ಗಟ್ಟಿಗೊಳಿಸಿದೆ.
ಪಟ್ಟಣದ ಹೃದಯ ಭಾಗವಾದ ಬಸವೇಶ್ವರ ವೃತ್ತದ ಬಳಿ ನಡೆಯುತ್ತಿರುವ ಈ ಧರಣಿ ದಿನೇ ದಿನೇ ಜನಮದ್ದತ್ತ ಪಡೆದುಕೊಳ್ಳುತ್ತಿದ್ದು, ವಿವಿಧ ಗ್ರಾಮಗಳಿಂದ ಸಾರ್ವಜನಿಕರು ಆಗಮಿಸಿ ತಮ್ಮ ಬೆಂಬಲವನ್ನು ವ್ಯಕ್ತಪಡಿಸುತ್ತಿದ್ದಾರೆ. ರವಿವಾರ ನಡೆದ 33ನೇ ದಿನದ ಸತ್ಯಾಗ್ರಹವು ವಿಶೇಷವಾಗಿ ಗಮನಸೆಳೆದಿದ್ದು, ತಾಲೂಕಿನ ಬೋಳವಾಡ ಗ್ರಾಮದ ಹಿರಿಯರು, ಯುವಕರು ಮತ್ತು ಎಲ್ಲಾ ಸಮುದಾಯದ ಜನರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ಶಕ್ತಿ ತುಂಬಿದರು.
“ನಿರ್ಜನ ಪ್ರದೇಶದಲ್ಲಿ ಪ್ರಜಾಸೌಧ ಬೇಡ” ಈ ಸಂದರ್ಭದಲ್ಲಿ ಮಾತನಾಡಿದ ಬೋಳವಾಡ ಗ್ರಾಮದ ಹಿರಿಯರಾದ ಪರ್ಪ ಹರಿಜನ ಮತ್ತು ಶಾಂತಗೌಡ ಪಾಟೀಲ, ಪ್ರಜಾಸೌಧ ನಿರ್ಮಾಣಕ್ಕೆ ಆಯ್ಕೆ ಮಾಡಿರುವ ಸ್ಥಳವು ಪಟ್ಟಣದಿಂದ ದೂರವಾಗಿದ್ದು, ನಿರ್ಜನ ಪ್ರದೇಶದಲ್ಲಿದೆ ಎಂದು ಆಕ್ಷೇಪಿಸಿದರು. ಇಂತಹ ಸ್ಥಳದಲ್ಲಿ ಸರ್ಕಾರಿ ಕಚೇರಿ ನಿರ್ಮಾಣವಾದರೆ ಮಹಿಳೆಯರು, ವಿದ್ಯಾರ್ಥಿನಿಯರು ಹಾಗೂ ಸಾರ್ವಜನಿಕರಿಗೆ ಭದ್ರತೆ ಮತ್ತು ಸೌಲಭ್ಯಗಳ ಕೊರತೆ ಎದುರಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
“ಪಟ್ಟಣದಲ್ಲೇ ನಿರ್ಮಾಣ ಅಗತ್ಯ”ಸಾರ್ವಜನಿಕರಿಗೆ ಸುಲಭವಾಗಿ ತಲುಪುವಂತಹ ಸ್ಥಳದಲ್ಲಿ, ಅಂದರೆ ತಾಳಿಕೋಟಿ ಪಟ್ಟಣದಲ್ಲಿಯೇ ಲಭ್ಯವಿರುವ ಸರ್ಕಾರಿ ಜಾಗದಲ್ಲಿ ಪ್ರಜಾಸೌಧ ನಿರ್ಮಿಸಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆ ಎಂದು ಅವರು ಒತ್ತಾಯಿಸಿದರು. ಈಗಾಗಲೇ ಗುರುತಿಸಲಾದ ಸ್ಥಳವನ್ನು ತಕ್ಷಣವೇ ರದ್ದುಪಡಿಸಬೇಕು ಹಾಗೂ ಹೊಸ ಸ್ಥಳವನ್ನು ಪಟ್ಟಣದೊಳಗೆ ಆಯ್ಕೆ ಮಾಡಬೇಕು ಎಂದು ಆಗ್ರಹಿಸಿದರು.
ಆಡಳಿತದ ನಿರ್ಲಕ್ಷ್ಯಕ್ಕೆ ಆಕ್ರೋಶಶಾಸಕರು ಹಾಗೂ ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳದಿರುವುದಕ್ಕೆ ಹೋರಾಟಗಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಜನಾಭಿಪ್ರಾಯವನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದ ಅವರು, ಜಾಗ ನೀಡಿದವರಲ್ಲಿ ಸ್ವಹಿತಾಸಕ್ತಿ ಅಡಗಿದೆ ಎಂಬ ಶಂಕೆಯನ್ನೂ ವ್ಯಕ್ತಪಡಿಸಿದರು.
ಸಮೂಹಿಕ ಬೆಂಬಲ ಹಿ ಹೋರಾಟ ಮತ್ತಷ್ಟು ತೀವ್ರವಾಗುವ ಸೂಚನೆಈ ಹೋರಾಟಕ್ಕೆ ಬೋಳವಾಡ ಗ್ರಾಮದ ಎಲ್ಲಾ ಸಮುದಾಯದ ಹಿರಿಯರು ಹಾಗೂ ಯುವಕರು ಏಕಮನಸ್ಸಿನಿಂದ ಬೆಂಬಲ ನೀಡುತ್ತಿರುವುದು ಗಮನಾರ್ಹವಾಗಿದೆ. ಜನರ ಒಗ್ಗಟ್ಟಿನಿಂದ ಹೋರಾಟ ಇನ್ನಷ್ಟು ತೀವ್ರಗೊಳ್ಳುವ ಲಕ್ಷಣಗಳು ಕಂಡುಬರುತ್ತಿದ್ದು, ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಪ್ರತಿಭಟನೆಗಳ ಸಾಧ್ಯತೆಯೂ ತಲೆದೋರಿದೆ.
ಅನೇಕ ಮುಖಂಡರ ಉಪಸ್ಥಿತಿ ಈ ಸಂದರ್ಭದಲ್ಲಿ ಬಸವರಾಜ ಅಮಲ್ಯಾಳ, ಪ್ರಶಾಂತ ಹಿರೇಮಠ, ಮಲಕಪ್ಪ ಹರಿಜನ, ಪರಶುರಾಮ ಹರಿಜನ, ನಂದನಗೌಡ ಪಾಟೀಲ, ಸಿದ್ದನಗೌಡ ಪಾಟೀಲ ಸೇರಿದಂತೆ ಅನೇಕರು ಭಾಗವಹಿಸಿದ್ದರು.ಹೋರಾಟ ಸಮಿತಿಯ ಅಧ್ಯಕ್ಷ ದಶರತಸಿಂಗ್ ಮನಗೂಳಿ, ಎಸ್.ಬಿ. ಕಟ್ಟಿಮನಿ, ಆರ್.ಎಸ್. ಪಾಟೀಲ (ಕುಚಬಾಳ), ಮುತ್ತಪ್ಪ ಚಮಲಾಪುರ, ಕಾಶೀನಾಥ ಮುರಾಳ, ದತ್ತು ಹೆಬಸೂರ ಸೇರಿದಂತೆ ಹಲವಾರು ಮುಖಂಡರು ಹಾಗೂ ಪಟ್ಟಣದ ಗಣ್ಯರು ಹಾಜರಿದ್ದು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 