ಚೆಸ್ ಸ್ಪರ್ಧೆಯಲ್ಲಿ ಮಾಮ್ಮೆಲೆ ದೇಶಾಯಿ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್ ಸ್ಪರ್ಧೆಯಲ್ಲಿ ಮಾಮ್ಮೆಲೆ ದೇಶಾಯಿ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ  Student Mammale Desai selected for state-level chess competition


ಶಿಗ್ಗಾವಿ, ಸೆ. 9: ಹಾವೇರಿಯಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಶಿಗ್ಗಾವಿ ಪಟ್ಟಣದ ಮಾಮ್ಮೆಲೆ ದೇಶಾಯಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಂಜೀವ್ ಇಂಗಳಗಿ ಗೆಲುವು ಸಾಧಿಸಿ ರಾಜ್ಯಮಟ್ಟದ ಚೆಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.  

ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿ ಸಂಜೀವ್ ಇಂಗಳಗಿ ಅವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು, ಉಪಪ್ರಾಚಾರ್ಯರು, ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.