ವಿದ್ಯಾರ್ಥಿನಿ ಸಹನಾ ಕಾಖಂಡಕಿಗೆ ಸನ್ಮಾನ
Student Sahana Kakhandaki honored
ಕೊಲ್ಹಾರ 17: ಬೆಂಗಳೂರಿನಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನಾಚರಣೆ ಸಮಾರಂಭದಲ್ಲಿ ಪಟ್ಟಣದ ವಿದ್ಯಾರ್ಥಿನಿ ಪಿಯುಸಿ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ 590 ಅಂಕ ಗಳಿಸಿದ ಸಾಧನೆಗಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಸನ್ಮಾನಿಸಲಾಯಿತು.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಮೆನ್ನಬೆತ್ತು ಮೂರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡಿರುವ ಸ್ಥಳೀಯ ಕಲ್ಲಪ್ಪ ಗುರಲಿಂಗಪ್ಪ ಕಾಖಂಡಕಿ ಅವರ ಪುತ್ರಿ ಸಹನಾ ಅವರು, ರಾಜ್ಯದ ವಸತಿ ಶಿಕ್ಷಣ ಸಂಸ್ಥೆಗಳ ಪಿಯುಸಿ ಕಾಲೇಜುಗಳಲ್ಲಿಯೇ ಪ್ರಸಕ್ತ ಸಾಲಿನ ಪರೀಕ್ಷೆಯಲ್ಲಿ ಟಾಪ್ ಐದು ವಿದ್ಯಾರ್ಥಿಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.
ಈ ಸಾಧನೆಗಾಗಿ ಅವರಿಗೆ ಮೂರು ಲಕ್ಷ ರೂ. ನಗದು ಬಹುಮಾನ, ಪ್ರಶಸ್ತಿ ಪತ್ರ ಹಾಗೂ ಫಲಕ ನೀಡಿ ಗೌರವಿಸಲಾಯಿತು.ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಸಚಿವರಾದ ಎಚ್.ಸಿ. ಮಹಾದೇವಪ್ಪ, ಕೆ.ಹೆಚ್. ಮುನಿಯಪ್ಪ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. ಕೊಲ್ಹಾರ ಪಟ್ಟಣದ 1997-98 ನೇ ಸಾಲಿನ ಎಸ್ ಎಸ್ ಎಲ್ ಸಿ ಗೆಳೆಯರ ಬಳಗ ವಿಧ್ಯಾರ್ಥಿನಿ ಸಾಧನೆ ಕಂಡು ಹರ್ಷ ವ್ಯಕ್ತಪಡಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 