ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು
Student dies after falling into a well
ಜಮಖಂಡಿ 07: ಮುಧೋಳ ತಾಲೂಕಿನ ಮೆಳ್ಳಿಗೇರಿ ಗ್ರಾಮದ ಸುಹಾಸ ಲಕ್ಷ್ಮಣ ಕುಳಲಿ (17) ಎಂಬ ವಿದ್ಯಾರ್ಥಿ ಬಾವಿಗೆ ಬಿದ್ದು ಮೃತಪಟ್ಟಿದ್ದಾನೆ. ಜಮಖಂಡಿಯ ಬಿ.ಎಲ್.ಡಿ.ಇ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ಕಲಿಯುತ್ತಿದ್ದ ಸುಹಾಸ, ಕಾಲೇಜಿನ ವಸತಿ ನಿಲಯದಲ್ಲಿ ವಾಸವಾಗಿದ್ದನು. ನಗರದ ಹೈದರ್ ಎಂಬುವರಿಗೆ ಸೇರಿದ ಬಾವಿಯಲ್ಲಿ ಘಟನೆ ಸಂಭವಿಸಿದೆ. ಮಾಹಿತಿ ತಿಳಿದು ಗ್ರಾಮೀಣ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಶೋಧ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದರು. ಬಳಿಕ ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 