ವಿಶ್ವವಿದ್ಯಾಲಯದ ಉಳಿವಿಗಾಗಿ, ಅಭಿವೃದ್ಧಿಗಾಗಿ ವಿದ್ಯಾರ್ಥಿ ಚಳುವಳಿ ಅಗತ್ಯ - ಪರಿಮಳ ಜೈನ
Student movement is necessary for the survival and development of the university - Parima Jain
ಹಾವೇರಿ 18 : ವಿದ್ಯಾರ್ಥಿ ಚಳುವಳಿಗಳು ಗಟ್ಟಿಗೊಂಡಾಗ ವಿಶ್ವವಿದ್ಯಾಲಯದ ಉಳಿವಿಗಾಗಿ ಹೋರಾಡಲು ಸಾಧ್ಯವಾಗುತ್ತದೆ ಎಂದು ರಾಜ್ಯ ಅಲ್ಪಸಂಖ್ಯಾತ ಆಯೋಗದ ಸದಸ್ಯೆ ಪರಿಮಳ ಜೈನ ಹೇಳಿದರು. ತಾಲ್ಲೂಕಿನ ಕೆರಿಮತ್ತಿಹಳ್ಳಿ ಹತ್ತಿರದ ಹಾವೇರಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ ಹಾವೇರಿ ವಿಶ್ವವಿದ್ಯಾಲಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಪ್ರಥಮ ಘಟಕ ಸಮ್ಮೇಳನವನ್ನು ವಿವಿ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು.,, ವಿಶ್ವವಿದ್ಯಾಲಯದಲ್ಲಿ ಗುಣಮಟ್ಟ ಶಿಕ್ಷಣಕ್ಕೆ ತಕ್ಕಂತೆ ಗುಣಮಟ್ಟದ ಆಡಳಿತವು ಇರಬೇಕು.
ನಗರದಿಂದ ದೂರದಲ್ಲಿರುವ ಈ ವಿಶ್ವವಿದ್ಯಾಲಯದಲ್ಲಿ ಮೂಲಭೂತ ಸೌಕರ್ಯಗಳ ಒದಗಿಸುವುದು ಸರ್ಕಾರದ ಕರ್ತವ್ಯವಾಗಬೇಕು. ವಿದ್ಯಾರ್ಥಿನಿಯರ ಸುರಕ್ಷಿತೆಗಾಗಿ ಸಿಸಿ ಕ್ಯಾಮರಾಗಳು ಅವಶ್ಯಕತೆ ಇದೆ. ಸಮಾಜದಲ್ಲಿ ನಡೆಯುವ ಅನ್ಯಾಯದ ವಿರುದ್ಧ ಒಂದಾಗಬೇಕು. ಇಂತಹ ವ್ಯವಸ್ಥೆಯಲ್ಲಿ ಪ್ರಜ್ಞಾವಂತರಾಗಬೇಕಾಗಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಮ್ಮೇಳನದಲ್ಲಿ ಚರ್ಚೆ ನಡೆಸಿ ನಿಮ್ಮೊಂದಿಗೆ ಹಾವೇರಿ ಜಿಲ್ಲೆಯ ಜನಪರ ಚಳುವಳಿಗಳು ನಿಲ್ಲುತ್ತವೆ ಎಂದರು.
ಮುಖ್ಯಾತಿಥಿಗಳಾಗಿ ಆಗಮಿಸಿದ ಹಾವೇರಿ ವಿಶ್ವವಿದ್ಯಾಲಯ ಉಳಸಿ ಹೋರಾಟ ಸಮಿತಿ ಸಂಚಾಲಕರು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಮಾತನಾಡಿ, ವಿಶ್ವವಿದ್ಯಾಲಯ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ತೋಡಗಿಸಿಕೊಳ್ಳಬೇಕು. ಪ್ರತಿ ಬಜೆಟ್ ನಲ್ಲಿ ಶಿಕ್ಷಣಕ್ಕಾಗಿ ಅನುದಾನ ಮೀಸಲಿಡಬೇಕು. ವಿದ್ಯಾರ್ಥಿ ಯುವಜನರು ಓದಿನ ಜೊತೆಗೆ ಪ್ರಜಾಸತಾತ್ಮಕ ಹಕ್ಕುಗಳನ್ನು ಪಡೆಯಬೇಕು. ವಿಶ್ವವಿದ್ಯಾಲಯ ಬೌದ್ಧಿಕ ಸ್ವಾಲಂಬನೆ ಕೇಂದ್ರಗಳಾಗಿ ಹೊರಹೊಮ್ಮಬೇಕಾಗಿದೆ. ಪ್ರಜಾಸತಾತ್ಮಕ ಹಕ್ಕನ್ನು ದಮನ ಮೂಡಲು ಒಳಸಂಚನ್ನು ಮಾಡುತ್ತಲೇ ಇದ್ದಾರೆ. ನಾವು ಕೂಡ ನಮ್ಮ ಹಕ್ಕುಗಳಾಗಿ ಹೋರಾಟ ಬೇಕಾಗಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 