5 ಕಿ.ಮೀ ಮ್ಯಾರಥಾನ್ ಓಟದಲ್ಲಿ ವಿದ್ಯಾರ್ಥಿನಿಯರ ಸಾಧನೆ
Student performance in the 5 km marathon
ಕೊಪ್ಪಳ 20: ಸೆಪ್ಟೆಂಬರ್ 2025:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು ಹಾಗೂ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಬೆಳಿಗ್ಗೆ 7.30 ಕ್ಕೆ ಜಿಲ್ಲಾಡಳಿತ ಭವನದಿಂದ ಜಿಲ್ಲಾ ಕ್ರೀಡಾಂಗಣದವರೆಗೆ 5 ಕಿ.ಮೀ ಮ್ಯಾರಥಾನ್ ಸ್ಪರ್ಧೆ ನಡೆಯಿತು.
ಈ ಸ್ಪರ್ಧೆಯಲ್ಲಿ ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಪಾರ್ವತಿ ಅವರು ದ್ವಿತೀಯ ಸ್ಥಾನ ಪಡೆದು ಪ್ರಮಾಣ ಪತ್ರ ಹಾಗೂ ?3,500/- ನಗದು ಬಹುಮಾನವನ್ನು ಪಡೆದರು. ಹಾಗೆಯೇ, ವಿದ್ಯಾರ್ಥಿನಿ ಸರಿತಾ ಚೌಹಾನ್ ಅವರು ತೃತೀಯ ಸ್ಥಾನ ಪಡೆದು ಪ್ರಮಾಣ ಪತ್ರದೊಂದಿಗೆ ?2,500/- ನಗದು ಬಹುಮಾನವನ್ನು ಗಳಿಸಿದರು. 4ನೇ ಸ್ಥಾನವನ್ನು ಭೂಮಿಕಾ ಇವರು ಪಡೆದರೆ 5ನೇ ಸ್ಥಾನವನ್ನು ಯಶೋಧ ಇವರು ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿನಿಯರ ಸಾಧನೆಯನ್ನು ಮೆಚ್ಚಿ, ಕಾಲೇಜಿನ ಪ್ರಾಂಶುಪಾಲರಾದ ಡಾ. ಗಣಪತಿ ಕೆ. ಲಮಾಣಿ, ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಪ್ರದೀಪ್ ಕುಮಾರ ಯು. ಹಾಗೂ ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾರ್ದಿಕ ಅಭಿನಂದನೆ ಸಲ್ಲಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 