ಒಂದು ವರ್ಷದ ಹಿಂದೆ ಕಾಣೆಯಾಗಿದ್ದ ವಿದ್ಯಾರ್ಥಿ ಪತ್ತೆ
Student who went missing a year ago found
ಮುಂಡಗೋಡ 30: ಒಂದು ವರ್ಷದ ಹಿಂದೆ ಕಾಣೆಯಾಗಿದ್ದ ಮುಂಡಗೋಡ ತಾಲೂಕಿನ ಅಂದಲಗಿ ಗ್ರಾಮದ ವಿದ್ಯಾರ್ಥಿ ಯನ್ನು ಮುಂಡಗೋಡ ಪೋಲಿಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ತಾಲೂಕಿನ ಅಂದಲಗಿ ಗ್ರಾಮದ ಪ್ರೀತಂ ಪ್ರಕಾಶ ಪವಾರ (18) ಎಂಬಾತನೇ ಕಾಣೆಯಾಗಿದ್ದ ವಿದ್ಯಾರ್ಥಿ. ಈತನು ಮೇ 21 2024ರಂದು ಒಂದು ವರ್ಷದ ಹಿಂದೆ ಮುಂಡಗೋಡ ಕಾಲೇಜಿನ ಅಡ್ಮಿಶನ್ ಮಾಡಸಲು ಹೋಗಿ ಬರುವುದಾಗಿ ಹೇಳಿ ಹೋದವನು ಬಂದೇ ಇರಲಿಲ್ಲ. ಒಂದು ವರ್ಷದ ನಂತರ ಪತ್ತೆಯಾಗಿದ್ದಾನೆ.ಇಲ್ಲಿನ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಉತ್ತರ ಕನ್ನಡ ಜಿಲ್ಲೆಯ ವರಿಷ್ಠಾಧಿಕಾರಿ ಎಂ ನಾರಾಯಣ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ, ಜಗದೀಶ್ ನಾಯ್ಕ್, ಶಿರಸಿ ಡಿ ವೈ ಎಸ್ಪಿ ಗೀತಾ ಪಾಟೀಲ್, ಮಾರ್ಗದರ್ಶನದಲ್ಲಿ ಸಿಪಿಐ ರಂಗನಾಥ್ ನಿಲಮ್ಮನವರ ನೇತೃತ್ವದಲ್ಲಿ ಪಿಎಸ್‌ಐ ಪರಶುರಾಮ ಮಿರ್ಜಿಗಿ, ಕ್ರೈಂ ಪಿಎಸ್‌ಐ ವಿನೋದ್ ಎಸ್ ಕೆ , ಹಾಗೂ ಸಿಬ್ಬಂದಿಗಳಾದ ಮಂಜಪ್ಪ ಚಿಂಚಲಿ ಬಸವರಾಜ ಲಂಬಾಣಿ ಸಂಜು ರಾಠೋಡ, ವಿದ್ಯಾರ್ಥಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 