ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು: ಕುರಬೇಟ
Students' role is important in maintaining the legal system: Kurabeta
ಲೋಕದರ್ಶನ ವರದಿ
ಯರಗಟ್ಟಿ 24: ವಿದ್ಯಾರ್ಥಿ ದೆಸೆಯಿಂದಲೇ ಸಮಾಜದಲ್ಲಿ ಶಾಂತಿ ನೆಲೆಸಲು ಅಗತ್ಯವಾದ ಕಾನೂನುಗಳ ಮಾಹಿತಿಯನ್ನು ಪಡೆದು ಸ್ವತಃ ಅನುಸರಿಸುವ ಮೂಲಕ ಇತರರಿಗೆ ಮಾದರಿಯಾಗಿ ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು ಎಂದು ರಾಮದುರ್ಗ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಮುಖ್ಯಪೇದೆ ಎಲ್.ಎಂ. ಕುರಬೇಟ ಹೇಳಿದರು.
ಪಟ್ಟಣದ ಸಿಎಂ ಮಾಮನಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ರೂಪಿಸಿರುವ ಅಕ್ಕ ಪಡೆಯ ಕಾರ್ಯ ಯೋಜನೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಮಾಜದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆ ಮಾಡುವಲ್ಲಿ ವಿದ್ಯಾರ್ಥಿಗಳು ಜವಾಬ್ದಾರಿಯುತ ವರ್ತನೆಯನ್ನು ನಿರ್ವಹಿಸಬೇಕಾದ ಅಗತ್ಯ ಇದೆ ಎಂದು ಪ್ರತಿಪಾದಿಸಿದರು.
ಸವದತ್ತಿ ಪೊಲೀಸ್ ಠಾಣೆಯ ಮಹಿಳಾ ಮುಖ್ಯಪೇದೆ ಎಸ್.ವಿ. ಹೊಸೂರ ಅವರು ಮಾತನಾಡಿ, ಸಮಾಜದಲ್ಲಿ ಮೌಲ್ಯಗಳು ಮರೆಯಾಗುತ್ತಿರುವುದರಿಂದ ಅಪರಾಧಗಳ ಸಂಖ್ಯೆ ಹೆಚ್ಚುತ್ತಿದೆ. ಆದ್ದರಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸದೊಂದಿಗೆ ಮೌಲ್ಯದ ಜೀವನವನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ಆರ್.ಎಸ್. ಮರಿಗೌಡರ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುರುಗೋಡ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ನೀರೀಕ್ಷಕರಾದ ವಿಜಯಾ ಸ್ವಾಮಿ, ಡಾ. ಸುನಂದಾ ಮಾದರ, ವಿಜಯಲಕ್ಷ್ಮಿ ಬದ್ದಿ, ಸಿದ್ದಲಿಂಗಪ್ಪ ಗಾಳಿ, ಶಂಕರ ಲಗಳಿ, ಡಾ. ರಾಜಶೇಖರ ಬಿರಾದಾರ ಸೇರಿದಂತೆ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ರಾಧಿಕಾ ಶಿದ್ದನ್ನವರ ನಿರೂಪಿಸಿದರು, ಡಾ. ಸುನೀತಾ ಸೊಪ್ಪಡ್ಲ ವಂದಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 