ಕಾಲೇಜ್ ಸಮಯಕ್ಕೆ ಪ್ರತ್ಯೇಕ ಬಸ್ ಬಿಡುವಂತೆ ವಿದ್ಯಾರ್ಥಿಗಳ ಒತ್ತಾಯ
Students demand separate buses for college hours
ಲಕ್ಷ್ಮೇಶ್ವರ ೨೨: ಸಾರಿಗೆ ಘಟಕದಿಂದ ಪ್ರತಿದಿನ ಕಾಲೇಜ್ ಸಮಯಕ್ಕೆ ಸರಿಯಾಗಿ ಬಸ್ ಬಿಡುವಂತೆ ಶಿಗ್ಲಿ ರಸ್ತೆಯಲ್ಲಿ ಬರುವ ಸರ್ಕಾರಿ ಪದವಿ ಪೂರ್ವ ಕಾಲೇಜ್ ವಿದ್ಯಾರ್ಥಿಗಳು ಸಾರಿಗೆ ಘಟಕದ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಕಾಲೇಜ್ ಸಮಯಕ್ಕೆ ಸರಿಯಾಗಿ ಪ್ರತ್ಯೇಕ ಬಸ್ ಬಿಡುವಂತೆ ಮಾತನಾಡಿದ ವಿದ್ಯಾರ್ಥಿಗಳು ಪ್ರತಿದಿನ ಬೆಳಗ್ಗೆ ೯:೩೦ಕ್ಕೆ ಹಾಗೂ ಮಧ್ಯಾಹ್ನ ಕಾಲೇಜ್ ಬಿಡುವ ಸಮಯಕ್ಕೆ ಸಪರೇಟ್ ಬಸ್ ಬಿಡುವಂತೆ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಸಾರಿಗೆ ಘಟಕದ ಅಧಿಕಾರಿಗಳನ್ನು ಒತ್ತಾಯಿಸಿದರು. ಪ್ರತಿದಿನ ಕಾಲೇಜು ಸಮಯಕ್ಕೆ ಬಸ್ಗಾಗಿ ಪರದಾಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಗ್ಗೆ ೯:೪೫ಕ್ಕೆ ಲಕ್ಷ್ಮೇಶ್ವರ ಬಸ್ ನಿಲ್ದಾಣದಿಂದ ಗುತ್ತಲ ಮಾರ್ಗವಾಗಿ ಬಸ್ ಹೋಗುತ್ತದೆ. ಆ ಬಸ್ ನಲ್ಲಿ ಪ್ರಯಾಣಿಕರು ತುಂಬಿ ತುಳುಕುತ್ತಾರೆ ಅಂತದರಲ್ಲಿ ವಿದ್ಯಾರ್ಥಿಗಳು ನಿಂತುಕೊAಡು ಹೋಗಲು ಸಹ ಜಾಗ ಇರುವುದಿಲ್ಲ ಅಂತದರಲ್ಲಿಯೇ ವಿದ್ಯಾರ್ಥಿಗಳು ಜೋತು ಬಿದ್ದುಕೊಂಡು ಕಾಲೇಜಿಗೆ ಹೋಗುವಂತಾಗಿದೆ. ವಿದ್ಯಾರ್ಥಿಗಳು ಸ್ವಲ್ಪ ಯಾಮಾರಿದರು ಅನಾಹುತ ಕಟ್ಟಿಟ್ಟ ಬುತ್ತಿ.
ಅದಕ್ಕಾಗಿ ಸಾರಿಗೆ ಘಟಕದ ಅಧಿಕಾರಿಗಳು ಪ್ರತಿದಿನ ಬೆಳಗ್ಗೆ ೯:೩೦ಕ್ಕೆ ಮತ್ತು ಮಧ್ಯಾಹ್ನ ಕಾಲೇಜ್ ಬಿಡುವ ಸಮಯಕ್ಕೆ ವಿದ್ಯಾರ್ಥಿಗಳಿಗೆ ಸಪರೇಟ್ ಬಸ್ ಬಿಟ್ಟರೆ ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ಹಾಗೂ ಪಟ್ಟಣದಿಂದ ಹೋಗುವ ಎಲ್ಲಾ ಕಾಲೇಜ್ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲಕರವಾಗುತ್ತದೆ ಎಂದು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 