ವಿದ್ಯಾರ್ಥಿ ಗಳು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿ: ವಿ.ಎಮ್ ಖ್ಯಾಡದ

ಗದಗ 27:    ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದೇ ಶಿಕ್ಷಣದ  ಕಡೆ ಹೆಚ್ಚು ಗಮನ ಹರಿಸಬೇಕು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೇ ಆರೋಗ್ಯದ ಕಡೆ ಗಮನಹರಿಸಬೇಕು ಎಂದು ಅರಿಷಿನಗೋಡಿ ಸ.ಹಿ.ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ವಿ.ಎಮ್ ಖ್ಯಾಡದ ತಿಳಿಸಿದರು. 

   ಗದಗ ಜಿಲ್ಲೆಯ ನರಗುಂದ ತಾಲೂಕಿನ  ಅರಿಷಿನಗೋಡಿ  ಸ.ಹಿ.ಪ್ರಾಥಮಿಕ ಶಾಲೆಯಲ್ಲಿ  ವಾರ್ತಾ  ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಗ್ರಾಮ ಸಂಪರ್ಕ ಯೋಜನೆಯಡಿಯಲ್ಲಿ ಜಾನಪದ ಸಂಗೀತ ಮತ್ತು ಬೀದಿ ನಾಟಕದ ಮೂಲಕ ಸರ್ಕಾರದ ಯೋಜನೆಯ ಕುರಿತು ಜನ ಜಾಗೃತಿ ಮೂಡಿಸಲು ಕ್ಷೇತ್ರ ಪ್ರಚಾರ ಕಾರ್ಯಕ್ರಮ ಜರುಗಿತು. 

     ಮಲಪ್ರಭಾ ಸಾಂಸ್ಕೃತಿಕ ಕಲಾ ತಂಡ ಕೊಣ್ಣೂರು ಬೀದಿ ನಾಟಕ ಮತ್ತು ಗಾನ ತರಂಗ ಸಾಂಸ್ಕೃತಿಕ ಹಾಗೂ ಗ್ರಾಮೀಣ ಅಭಿವೃದ್ಧಿ ಮಾದಿಗರ ಸಂಸ್ಥೆ ಅಸುಂಡಿ ಜಾನಪದ ಸಂಗೀತ ತಂಡದವರು ರಾಜ್ಯ ಸರ್ಕಾರದ ಯೋಜನೆಗಳ ಕುರಿತು ಸ್ವಚ್ಚತೆ ಆರೋಗ್ಯ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ಶಾಲೆಯ ಮುಖ್ಯ ಶಿಕ್ಷಕ ವಿ.ಜಿ ಮೊರಬ ಸಹ ಶಿಕ್ಷಕರಾದ ಕೆ.ಎಸ್. ಹಟ್ಟಿ, ವಿ. ವೈ. ನಾಯಕ್ ಹಾಗೂ  ವಾತರ್ಾ ಇಲಾಖೆ ಸಿಬ್ಬಂದಿಗಳು,  ವಿದ್ಯಾರ್ಥಿಗಳು ಹಾಜರಿದ್ದರು.