ಕೃತಕ ಬುದ್ಧಿಮತ್ತೆ ಮೀರಿಸುವ ಕೌಶಲ್ಯ ವಿದ್ಯಾರ್ಥಿಗಳು ಹೊಂದಬೇಕು: ಎನ್. ನಿರಂಜನ ರಾಜ್ ಅರಸ್
Students must possess skills that surpass artificial intelligence: N. Niranjan Raj Urs
ಲೋಕದರ್ಶನ ವರದಿ
ಬೆಳಗಾವಿ 02 : ಕೃತಕ ಬುದ್ಧಿಮತ್ತೆ ಇಂದು ವಾರದ ಏಳು ದಿನವೂ, ದಿನದ 24 ಗಂಟೆಯೂ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದು, ಮಾನವನ ಸಹಜ ತಪ್ಪುಗಳನ್ನು ಕಡಿಮೆ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಉದ್ಯೋಗಾವಕಾಶ ಪಡೆಯಲು ಯುವಕರು ಕೃತಕ ಬುದ್ಧಿಮತ್ತೆಯನ್ನು ಮೀರಿಸುವ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಬೆಳಗಾವಿ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಎನ್. ನಿರಂಜನ ರಾಜ್ ಅರಸ್ ಹೇಳಿದರು.
ಶಿವಬಸವ ನಗರದ ಶಿವಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶಾಲಾ ಸಂಸತ್ ರಚನೆ ಹಾಗೂ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಜ್ಞಾನವನ್ನು ಶಾಲೆಯಿಂದ ಪಡೆದರೆ, ಉತ್ತಮ ಆರೋಗ್ಯವನ್ನು ಮೈದಾನದಿಂದ ಪಡೆಯಲು ಸಾಧ್ಯ. ಮೊಬೈಲ್ ಹಾಗೂ ಕಂಪ್ಯೂಟರ್ಗಳ ಬಳಕೆಯಷ್ಟೇ ಅಲ್ಲದೆ, ವಿದ್ಯಾರ್ಥಿಗಳು ಮೈದಾನದಲ್ಲಿ ಆಟವಾಡುವ ಮೂಲಕ ದೈಹಿಕ ಆರೋಗ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಸ್.ಪಿ. ಹಿರೇಮಠ ಮಾತನಾಡಿ, ವಿದ್ಯಾರ್ಥಿಗಳು ಕ್ರಿಕೆಟ್ ಹೊರತುಪಡಿಸಿ ಗ್ರಾಮೀಣ ಕ್ರೀಡೆಗಳಾದ ಮರಕೋತಿ, ಚಿನ್ನಿದಾಂಡು, ಗೋಲಿ ಸೇರಿದಂತೆ ವಿವಿಧ ಆಟಗಳ ಪರಿಚಯ ಹೊಂದಬೇಕು ಎಂದರು. ಮಕ್ಕಳನ್ನು ಆಟವಾಡಲು ಮೈದಾನಕ್ಕೆ ಕಳುಹಿಸ ದಿರುವುದರಿಂದ ಅವರ ದೈಹಿಕ ಸಾಮರ್ಥ್ಯ ಕುಗ್ಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಸಂಯೋಜಕ ರಾಜಶೇಖರ ಪಾಟೀಲ, ಪ್ರಾಚಾರ್ಯೆ ಪೂಜಾ ನಾಯ್ಕ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 