ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡಬೇಕು: ಗುರುಸ್ವಾಮಿ

ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡಬೇಕು: ಗುರುಸ್ವಾಮಿ  Students must work hard: Guruswamy


ಇಂಡಿ 25 : ವಿದ್ಯಾರ್ಥಿಗಳು ಪದವಿ ಪಡೆಯುವುದರ ಜೊತೆಗೆ ಸಂವಹನ ಕೌಶಲ್ಯ, ತಾಂತ್ರಿಕ ಜ್ಞಾನ, ಸೃಜನಶೀಲತೆ, ನಾಯಕತ್ವ ಹಾಗೂ ಸಮಸ್ಯೆಗಳನ್ನು ಎದುರಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಹೇಳಿದರು. ನಗರದ ಜಿಆರ್ಜಿ ಕಲಾ, ವೈ.ಎ. ಪಾಟೀಲ ವಾಣಿಜ್ಯ ಹಾಗೂ ಎಂ.ಪಿ. ದೋಶಿ ವಿಜ್ಞಾನ ಪದವಿ ಕಾಲೇಜಿನ 2026-27ನೇ ಸಾಲಿನ ವಿದ್ಯಾರ್ಥಿಗಳ ಸ್ವಾಗತ ಹಾಗೂ ‘ನವಯಾನ 2026’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೃತಕ ಬುದ್ಧಿಮತ್ತೆಯ ಬೆಳವಣಿಗೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹೊಸ ಸವಾಲುಗಳಿಗೆ ಸಿದ್ಧರಾಗಬೇಕು ಎಂದರು.