ಲೋಕದರ್ಶನ ವರದಿ
ಗಜೇಂದ್ರಗಡ 03: ಸಮಾಜದಲ್ಲಿ ದಿನೇ ದಿನೆ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳನ್ನು ತಡೆಯಲು ವಿದ್ಯಾಥರ್ಿಗಳು ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯ ಠಾಣೆಯ ಪಿಎಸ್ಐ ಗುರುಶಾಂತ ದಾಶ್ಯಾಳ ಹೇಳಿದರು. ಗಜೇಂದ್ರಗಡ ಪೊಲೀಸ್ ಠಾಣೆ ವತಿಯಿಂದ ಪಟ್ಟಣದ ಅನ್ನದಾನೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು, ಸಮಾಜಘಾತುಕ ಚಟುವಟಿಕೆಯಲ್ಲಿ ಹೆಚ್ಚಾಗಿ ವಿದ್ಯಾಥರ್ಿಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಆದ ಕಾರಣ ವಿದ್ಯಾಥರ್ಿಗಳು ಎಚ್ಚರಿಕೆಯಿಂದ ಇರಬೇಕು ಎಂದರು.
ಯುವಕರು ಸಮಾಜ ವಿರೋಧಿ ಕೃತ್ಯಗಳಿಗೆ ಕೈ ಹಾಕಬಾರದು. ರಸ್ತೆ ನಿಯಮಗಳ ಪಾಲನೆ, ಅಧಿಕೃತ ಚಾಲನೆ ಪರವಾನಿಗೆ ಪಡೆದು ವಾಹನ ಚಾಲನೆ ಮಾಡಬೇಕು. ವಾಹನಗಳ ಎಲ್ಲ ರೀತಿ ದಾಖಲೆಗಳನ್ನು, ಇನ್ಸುರೆನ್ಸ್ ಇವೆಲ್ಲವೂ ಸುರಕ್ಷ ತೆ ದೃಷ್ಟಿಯಿಮದ ಹೊಂದಿರುವುದು ಅಗತ್ಯ ಎಂದು ಹೇಳಿದರು. ಪಟ್ಟಣದಲ್ಲಿ ಯಾವುದಾದರೂ ಸಮಸ್ಯೆಗಳು ಕಂಡು ಬಂದಲ್ಲಿ ಮುಕ್ತವಾಗಿ ಬಂದು ಪೊಲೀಸರಿಗೆ ತಿಳಿಸಿ ಅಪರಾಧ ತಡೆಗಟ್ಟಲು ಸಾರ್ವಜನಿಕರು ಹಾಗೂ ವಿದ್ಯಾಥರ್ಿಗಳು ಸಹಕರಿಸಬೇಕು ಎಂದರು. ಕಾಲೇಜು ವಿದ್ಯಾಥರ್ಿನಿಯರಿಗೆ ಪುಂಡರು ಚುಡಾಯಿಸುವ ಹಾಗೂ ಸತಾಯಿಸುವ ಘಟನೆಗಳು ನಡೆದರೆ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು ಎಂದರು.
ಪ್ರಾಚಾರ್ಯ ಬಸವರಾಜ ಸಿ. ಚಿನಿವಾಲರ, ಕಾಲೇಜು ಹಂತದಲ್ಲಿ ಮಕ್ಕಳು ಅನುಸರಿಸಬೇಕಾದ ಕಾನೂನು ನಿಯಮಗಳು ಮತ್ತು ರಸ್ತೆ ಸಂಚಾರದ ನಿಯಮಗಳ ಬಗ್ಗೆ ಪ್ರತಿಯೊಬ್ಬ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಉತ್ತಮವಾಗಿ ಅಧ್ಯಯನ ನಡೆಸಿ ತಮ್ಮ ಭವಿಷ್ಯ ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಯೋಚಿಸಬೇಕು. ಸಮಾಜ ವಿರೋಧಿ ಶಕ್ತಿಗಳಿಂದ ದೂರ ಇರಬೇಕು ಎಂದರು. ಪಿಎಸ್ಐ ಅವರಿಗೆ ಕಾಲೇಜು ಆರಂಭ ಹಾಗೂ ಮುಕ್ತಾಯದ ಸಮಯದಲ್ಲಿ ಕಾಲೇಜು ರಸ್ತೆ ಮಾರ್ಗದಲ್ಲಿ ಪೊಲೀಸ್ ಸಿಬ್ಬಂದಿಗಳು ಗಸ್ತು ಬಂದರೆ ಪುಂಡ ಯುವಕರ ಹಾವಳಿ ನಿಲ್ಲುತ್ತದೆ. ಇದರಿಂದ ಎಲ್ಲಾ ಶಾಲಾ ಕಾಲೇಜು ವಿದ್ಯಾಥರ್ಿನಿಯರಿಗೆ ಅನಕೂಲವಾಗುತ್ತದೆ ಎಂದು ಮನವಿ ಮಾಡಿದರು.