ವಿದ್ಯಾರ್ಥಿಗಳಿಗೆ ಇತಿಹಾಸ ಪ್ರಜ್ಞೆ ಅಗತ್ಯ: ಡಾ. ತೇಜಸ್ವಿನಿ ನಾರಾಯಣಕರ್
ಧಾರವಾಡ 16: ದೇಶದ ಉಜ್ವಲ ಭವಿಷ್ಯ ನಿರ್ಧರಿಸುವಲ್ಲಿ ವಿದ್ಯಾರ್ಥಿಗಳಿಗೆ ಇತಿಹಾಸ ಪ್ರಜ್ಞೆ ಅಗತ್ಯವಾಗಿದೆ. ಇತಿಹಾಸವು ನಮ್ಮ ಹೋರಾಟಗಳ ಅನುಭವದ ಕಥೆಯಾಗಿದೆ ಎಂದು ಪದವಿ ಪೂರ್ವ ಶಾಲಾ ಶಿಕ್ಷಣ ಉಪ ನಿರ್ದೇಶಕರಾದ ಡಾ. ತೇಜಸ್ವಿನಿ ನಾರಾಯಣಕರ್ ಅಭಿಪ್ರಾಯಪಟ್ಟರು.
ಕರ್ನಾಟಕ ವಿದ್ಯಾವರ್ಧಕ ಸಂಘವು ಆಯೋಜಿಸಿದ್ದ ಗ್ರಂಥ ಲೋಕಾರೆ್ಣ ಕಾರ್ಯಕ್ರಮದಲ್ಲಿ ‘ಅಖಂಡ ಧಾರವಾಡ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರು’ ಗ್ರಂಥ ಬಿಡುಗಡೆ ಮಾಡಿ, ಮಾತನಾಡುತ್ತಿದ್ದರು.
ಮುಂದುವರೆದು, ಮಾನ್ಯ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ನಮ್ಮ ಇಲಾಖೆ ಅಖಂಡ ಧಾರವಾಡ ಜಿಲ್ಲೆಯ ಆಯ್ದ 77 ಪದವಿ ಪೂರ್ವ ಮಹಾವಿದ್ಯಾಲಯಗಳಲ್ಲಿ 45 ಉಪನ್ಯಾಸಕರಿಂದ ಸ್ವಾತಂತ್ರ್ಯ ಹೋರಾಟಗಾರರ ಹೋರಾಟದ ಯಶೋಗಾಥೆಯನ್ನು ಸ್ಮರಿಸುವ ಉಪನ್ಯಾಸಗಳನ್ನು ಆಯೋಜಿಸಿತು. ವಿಶೇಷವಾಗಿ ವಿಜ್ಞಾನ ಓದುವ ವಿದ್ಯಾರ್ಥಿಗಳನ್ನು ಗಮನದಲ್ಲಿರಿಸಿಕೊಂಡು ಸ್ಥಳೀಯ ಹೋರಾಟಗಾರರ ಬಗ್ಗೆ, ಇತಿಹಾಸದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವದಾಗಿತ್ತು. ಈ ಗ್ರಂಥ ವಿದ್ಯಾರ್ಥಿಗಳಿಗೆ ಮಾತ್ರವಲ್ಲ ಸಾರ್ವಜನಿಕರಿಗೂ ಉಪಯುಕ್ತವಾಗಿದೆ. ಇಂಥ ಹಲವಾರು ಕಾರ್ಯಕ್ರಮಗಳಿಗೆ ಸಂಘವು ಮೊದಲಿನಿಂದಲೂ ಸಹಕಾರ ನೀಡುತ್ತಾ ಬಂದಿದೆ. ಅದಕ್ಕಾಗಿ ಕ.ವಿ.ವ. ಸಂಘವನ್ನು ಅಭಿನಂದಿಸುತ್ತೇನೆ ಎಂದರು.
ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಮಾತನಾಡಿ, ಕಳೆದ 136 ವರ್ಷಗಳಿಂದ ಸಂಘದಲ್ಲಿ ಶಿಕ್ಷಣ, ಸಾಹಿತ್ಯ, ಸಂಸ್ಕೃತಿ, ಶ್ರೇಯೋಭಿಲಾಷೆಗಾಗಿ ನಿರಂತರವಾಗಿ ಶ್ರಮಿಸುತ್ತಿದೆ. ದೇಶದ ಸ್ವಾತಂತ್ರ್ಯ ಹೋರಾಟ ಹಾಗೂ ಏಕೀಕರಣಕ್ಕಾಗಿ ಸಂಘದ ಸೇವೆ ಸ್ಮರಣೀಯವಾದದ್ದು. ಇಲಾಖೆಯ ರಚನಾತ್ಮಕ ಕಾರ್ಯಕ್ರಮಕ್ಕೆ ಸಂಘ ಸದಾಕಾಲ ಸಹಕಾರ ನೀಡುತ್ತಿದೆ ಎಂದರು.
ಗ್ರಂಥ ಸಂಪಾದಕ ಡಾ. ಪ್ರಕಾಶ ಸುಣಗಾರ ಮಾತನಾಡಿ, ಈ ಕೃತಿ ಸ್ಥಳೀಯ ಸ್ವಾತಂತ್ರ್ಯ ಹೋರಾಟಗಾರರು, ಹೋರಾಟದ ಗ್ರಾಮಗಳು ಹಾಗೂ ಸ್ಮಾರಕಗಳನ್ನು ಗಮನದಲ್ಲಿರಿಸಿ ರಚಿಸಲಾಗಿದೆ. ವಿದ್ಯಾರ್ಥಿಗಳಿಗೆ ಸ್ಥಳೀಯ ಹೋರಾಟಗಾರರ ಬಗ್ಗೆ ಅಭಿಮಾನ, ದೇಶಪ್ರೇಮ ಮೂಡಿಸುವುದಾಗಿದೆ ಎಂದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ಧಾರವಾಡ ಜಿಲ್ಲಾ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ಉದಯ ನಾಯಕ ಮಾತನಾಡಿದರು.
ವಿಶ್ರಾಂತ ಇತಿಹಾಸ ಪ್ರಾಧ್ಯಾಪಕ ಡಾ. ಬಸವರಾಜ ಅಕ್ಕಿ ಭಾರತದ ಸ್ವಾತಂತ್ರ್ಯ ಹೋರಾಟಗಾರರ ವಿವಿಧ ಹಂತಗಳು, ಸ್ಥಳೀಯ ಹೋರಾಟಗಳ ವಿವಿಧ ಹಂತಗಳು ಹಾಗೂ ಸ್ಥಳೀಯ ಹೋರಾಟಗಾರರ ಕುರಿತು ಮಾತನಾಡಿದರು
ಅಧ್ಯಕ್ಷತೆ ವಹಿಸಿದ್ದ ಡಾ. ಸಂಜೀವ ಕುಲಕರ್ಣಿ ಮಾತನಾಡಿ, ದೂರದ ವಿಷಯಗಳನ್ನು ಕ್ಷಣಾರ್ಧದಲ್ಲಿ ಜಾಲತಾಣಗಳ ಮೂಲಕ ತಿಳಿಯುವ ನಾವು ಸ್ಥಳೀಯ ವಿಷಯಗಳನ್ನು ತಿಳಿಯದಿರುವುದು ವಿಷಾದನೀಯ. ಸ್ಥಳೀಯ ಹೋರಾಟಗಾರರು ಏನೆಲ್ಲಾ ತ್ಯಾಗ ಮಾಡಿ ಹೋರಾಡಿದ್ದು ಸ್ಮರಣೀಯ ಎಂದರು.
ವೀರಣ್ಣ ಒಡ್ಡೀನ ಸ್ವಾಗತಿಸಿದರು, ಪ್ರೊ. ಹೇಮಂತ ಕರ್ಜಗಿ ನಿರೂಪಿಸಿದರು. ಬ್ಹಿ. ವಿ. ನದಾಫ ವಂದಿಸಿದರು.
ಕಾರ್ಯಕ್ರಮದಲ್ಲಿ ಸತೀಶ ತುರಮರಿ, ಪ್ರೊ. ಧನವಂತ ಹಾಜವಗೋಳ, ಡಾ. ಚಂದ್ರಶೇಖರ ರೊಟ್ಟಿಗವಾಡ, ವಿಜಯಕುಮಾರ ಮಾನೆ, ಉಮೇಶ ಮುನವಳ್ಳಿ, ಎಂ. ಪಿ. ಬಾರಕೇರ, ಲಕ್ಷ್ಮಿ ಕಣವಿ ಸೇರಿದಂತೆ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 