ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಹೆಚ್ಚು ಶ್ರಮವಹಿಸಬೇಕಾಗಿದೆ: ಮನೋಹರ ಕುಟ್ರೆ
Students need to work harder for their future: Manohar Kutre
ಬೆಳಗಾವಿ 05: ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಹೆಚ್ಚು ಶ್ರಮವಹಿಸಬೇಕಾಗಿದೆ ಮತ್ತು ವಿದ್ಯಾರ್ಥಿ ಜೀವನದಲ್ಲಿ ಪದವಿ ಹಂತ ಪ್ರಮುಖ ಕಾಲಘಟ್ಟವಾಗಿದ್ದು ವೃಥಾ ಕಾಲಹರಣ ಮಾಡದೆ ಶಿಕ್ಷಣದ ಸದುಪಯೋಗ ಪಡೆದುಕೊಳ್ಳಬೇಕೆಂದು ಮುಖ್ಯ ಅತಿಥಿಗಳಾಗಿ ಆಗಮಿಸಿದ ಮೈಸ್ಟರ್ ಫ್ಲೂಡಟೆಕ್ ಮಾಲೀಕರಾದ ಮನೋಹರ ಕುಟ್ರೆ ಅವರು ವಿದ್ಯಾರ್ಥಿಗಳಿಗೆ ಇಂದು ನಡೆದ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಪ್ರೋತ್ಸಾಹ ನುಡಿಗಳನ್ನಾಡಿದರು.
ಈ ಸಂದರ್ಭದಲ್ಲಿ ವಿಭಾಗದಿಂದ ಹಮ್ಮಿಕೊಳ್ಳಲಾಗಿದ್ದ ಮಿನಿ ಪ್ರೋಜೆಕ್ಟ್ ಕಾರ್ಯಾಗಾರದಲ್ಲಿ ಯಶಸ್ವಿಯಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮವನ್ನುದ್ದೇಶಿಸಿ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಎಫ್. ವಿ. ಮಾನ್ವಿ ಅವರು ವಿದ್ಯಾರ್ಥಿಗಳಿಗೆ ಉದ್ಯೋಗಗಳನ್ನು ಅರಸಿ ಹೋಗುವುದರ ಬದಲಾಗಿ ಉದ್ಯಮಿಗಳಾಗುವ ಕಡೆಗೆ ನಿಮ್ಮ ಪ್ರಯತ್ನವಿರಲಿ ಎಂದು ಉತ್ತೇಜನ ನೀಡಿದರು. ಪ್ರಾಚಾರ್ಯರಾದ ಡಾ. ಬಿ.ಆರ್.ಪಟಗುಂದಿ ಅವರು ವಿದ್ಯಾರ್ಥಿಗಳಿಗೆ ನಿರ್ದಿಷ್ಟ ಗುರಿ ತಲುಪಲು ಕಠಿಣ ಪರಿಶ್ರಮ ಅವಶ್ಯಕವಾಗಿದ್ದು ಮುಂಬರುವ ಸವಾಲುಗಳನ್ನು ತಾಳ್ಮೆ ಮತ್ತು ಯುಕ್ತಿಯಿಂದ ಎದುರಿಸಬೇಕೆಂದು ಹಿತನುಡಿಗಳನ್ನಾಡಿದರು.
ವಿಭಾಗದ ಮುಖ್ಯಸ್ಥರಾದ ಡಾ. ರಾಜೇಂದ್ರ ಗಲಗಲಿ ಅವರು ಸ್ವಾಗತಿಸಿದರು. ಪ್ರೋ. ಎಸ್.ಸಿ.ಜಂಪಾ ವಂದಿಸಿದರು. ಭೂಮಿಕಾ ನಿರೂಪಣೆ ಮಾಡಿದರು. ಕಾರ್ಯಕ್ರಮದಲ್ಲಿ ವಿಭಾಗದ ಎಲ್ಲಾ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 