ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾರವಾರ 14:  ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಚಿತ್ರದುರ್ಗದಲ್ಲಿ ಆಯೋಜಿಸಲಾದ ಪ್ರೌಢಶಾಲಾ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ , ಕುಮಟಾ ತಾಲೂಕಿನ ಹೆಗಡೆ  ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸಚಿನ್ ಶಿವಾನಂದ ಗೌಡ ವಿಜೇತನಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಹಾಗೂ ಸಿಂಧು ಹರಿಶ್ಚಂದ್ರ ನಾಯ್ಕ 7 ನೇ ತರಗತಿ ವಿದ್ಯಾರ್ಥಿನಿ ಪ್ರಾಥಮಿಕ ವಿಭಾಗದಲ್ಲಿ ಜಿಲ್ಲಾ ಮಟ್ಟದಲ್ಲಿ 100 ಮೀ ಓಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಹಾಗೂ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕ ಸವಿತಾ ಗೌಡ ಇವರಿಗೆ ಉಪ ನಿರ್ದೇಶಕ ಉಮೇಶ ವೈ ಕೆ ಹಾಗೂ ಶಾಲಾ ಪ್ರಾಂಶುಪಾಲರು ರಾಜು ಬಿ ಗಾಂವಕರ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.