ಬಂಕಾಪುರ: ಹಾವೇರಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 2019ಸಾಲಿನ ಪ್ರಾಥಮಿಕ ವಿಭಾಗದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪಟ್ಟಣದ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಯ ವಿದ್ಯಾರ್ಥಿಗಳು ಸತತ 7 ನೇ ಬಾರಿಗೆ ವಾಲಿಬಾಲ್ ಕ್ರೀಡೆಯಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಸಾಧನೆಮಾಡಿದವಿದ್ಯಾರ್ಥಿಗಳ ಶಾಲೆಯ ಮುಖ್ಯ ಶಿಕ್ಷಕ ಆರ್.ಎಚ್.ಭಜಂತ್ರಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ಮಂಜುನಾಥ ತಳವಾರ ಸೇರಿದಂತೆ ಸರ್ವ ಸದಸ್ಯರು ಶಿಕ್ಷಕ ವೃಂದದವರು ಪಾಲಕರು ಅಭಿನಂದನೆ ಸಲ್ಲಿಸಿದ್ದಾರೆ.