ವಿದ್ಯಾರ್ಥಿಗಳು ಗಿಡ ನೆಟ್ಟು ಪ್ರಕೃತಿಯ ಋಣ ತೀರಿಸಿ
Students pay their debt to nature by planting trees
ವಿದ್ಯಾರ್ಥಿಗಳು ಗಿಡ ನೆಟ್ಟು ಪ್ರಕೃತಿಯ ಋಣ ತೀರಿಸಿ
ಮುಂಡಗೋಡ, 05 : ಪ್ರಕೃತಿಯಿಂದ ಹಲವು ರೀತಿಯ ಪ್ರಯೋಜನಗಳನ್ನು ಪಡೆಯುವ ನಾವು ಗಿಡಗಳನ್ನು ನೆಟ್ಟು ಬೆಳೆಸುವುದರ ಮೂಲಕ ಪ್ರಕೃತಿಯ ಋಣವನ್ನು ತೀರಿಸಬೇಕಿದೆ. ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ ಮುಂಡಗೋಡದಲ್ಲಿ ವೃಕ್ಷ ಬಂಧನ ಕಾರ್ಯಕ್ರಮವನ್ನು ಹಾಗೂ ಸಸಿಯನ್ನು ದತ್ತು ನೀಡುವ ಮತ್ತು ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವೃಕ್ಷ ಬಂಧನ ಕಾರ್ಯಕ್ರಮದ ಮೂಲಕ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ ಮುಂಡಗೋಡದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಗಿಡಗಳನ್ನು ದತ್ತು ನೀಡುವ ಮೂಲಕ ಅವರಿಗೆ ಆ ಗಿಡದ ಜವಾಬ್ದಾರಿಯನ್ನು ನೀಡಲಾಯಿತು.
ಈ ಕಾರ್ಯವನ್ನು ಅತ್ಯಂತ ವಿಶಿಷ್ಟವಾಗಿ ಪ್ರತಿ ವರ್ಷದಂತೆ ತೊಟ್ಟಿಲು ಶಾಸ್ತ್ರ ವಿಧಾನದಂತೆ ಪ್ರತಿ ವಿದ್ಯಾರ್ಥಿಗಳಿಗೆ ಮಗುವನ್ನು ತೊಟ್ಟಿನಲ್ಲಿ ತೂಗುವಂತೆ ಸಸಿಯನ್ನು ತೊಟ್ಟಿಲಲ್ಲಿಟ್ಟು ತೂಗಿ ಅದನ್ನು ವಿದ್ಯಾರ್ಥಿಗಳಿಗೆ ದತ್ತು ನೀಡಿದರು ಅಂತಿಮ ವರ್ಷ ಮುಗಿಯುವವರೆಗೆ ಆ ವಿದ್ಯಾರ್ಥಿಗಳು ಆ ಗಿಡದ ಜವಾಬ್ದಾರಿಯನ್ನು ವಹಿಸಬೇಕು. ಇವರ ಸಹಯೋಗದೊಂದಿಗೆ ಮಹಾವಿದ್ಯಾಲಯದ ಘಟಕಗಳಾದ ರಾಷ್ಟ್ರೀಯ ಸೇವಾ ಯೋಜನೆ, ಮತ್ತು ರೋವರ್ಸ್ ರೆಂಜರ್ಸ್ ಘಟಕಗಳು ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿ ಎಲ್ಲಾ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳ ಜೊತೆ ಸೇರಿ ಮಹಾವಿದ್ಯಾಲಯದ ಆವರಣದಲ್ಲಿ ಗಿಡಗಳನ್ನು ನೀಡಲಾಯಿತು.
ಈ ವೇಳೆಯ್ಲಲಿ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಟಿವೈ ದಾಸನಕೊಪ್ಪ, ತೋಟಗಾರಿಕಾ ಇಲಾಖೆ ರಮೇಶ್, ಪಟ್ಟಣ ಪಂಚಾಯತ್ ಮುಂಡಗೋಡ ಅಧಿಕಾರಿಗಳಾದ ಕುಮಾರ ನಾಯಕ್, ಮುಂಡಗೋಡ್ ಪಿಎಸ್‌ಐ ಪರಶುರಾಮ್ ಮಿರ್ಜಗಿ ಮತ್ತು ಅರಣ್ಯ ಇಲಾಖೆ ಹುಲಕೋಟಿ. ಖಈಓ. ವಾಗಿಶ್, ಅಜ್ಜಪ್ಪ ಮತ್ತು ಅರಣ್ಯಾಧಿಕಾರಿಗಳು ಹಾಗೂ ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 