ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ
Students perform well in sports event
ದೇವರಹಿಪ್ಪರಗಿ 23: ತಾಲ್ಲೂಕಿನ ಆಲಗೂರ ಗ್ರಾಮದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಕಲಕೇರಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.
ಬಾಲಕರು ಕಬಡ್ಡಿಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡು,ಖೋ ಖೋ,ಥ್ರೋಬಾಲ್,ರಿಲೇಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.ವೈಯಕ್ತಿಕ ವಿಭಾಗದಲ್ಲಿ ರಹಿಮತ್ ಅಲಿ ಕಲಕೇರಿ 100 ಮೀಟರ್ ಓಟ ಹಾಗೂ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಉದ್ದಜಿಗಿತದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾನೆ.ಕಾರ್ತಿಕ ಮಾಕೊಂಡ 400 ಮೀ ಓಟದಲ್ಲಿ ಪ್ರಥಮ,ಕಾರ್ತಿಕ ಇಮ್ಲಾಪುರ 600 ಮೀ ಓಟದಲ್ಲಿ ಪ್ರಥಮ,ತಿಪ್ಪಣ್ಣ ತಮ್ಮಣ್ಣಗೋಳ 600 ಮೀ ಓಟದಲ್ಲಿ ದ್ವಿತೀಯ,ಮಲ್ಲಿಕಾರ್ಜುನ ಅಮ್ಮಾಗೋಳ 200 ಮೀ ಓಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.
ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಮುಖ್ಯಗುರು ಜಿ.ಎಮ್.ತಳವಾರ,ದೈಹಿಕ ಶಿಕ್ಷಕ ವಿ.ಎನ್.ಮದ್ದರಕಿ,ಸಹಶಿಕ್ಷಕರಾದ ಅಬ್ಬಾಸಲಿ ಪಾಂಡು,ಎಚ್.ಬಿ.ಪೂಜಾರಿ, ಎಸ್.ಬಿ.ಹಗಟಗಿ, ಆರಿ್ಜ.ಸುಸಲಾದಿ,ಎನ್.ಜಿ.ಬಿರಾದಾರ,ಎನ್.ಟಿ.ಅತ್ತಾರ,ಈರಣ್ಣ.ಹೂಗಾರ,ಪ್ರದೀಪ ಟಿ,ಬಿ. ಸುಧಾಕರ,ಐ.ಬಿ.ಮೋರಟಗಿ ಸೇರಿದಂತೆ ಗ್ರಾಮಸ್ಥರು,ಮಕ್ಕಳು,ಅಕ್ಷರ ದಾಸೋಹ ಸಿಬ್ಬಂದಿಯವರು ಸಂತಸವನ್ನು ವ್ಯಕ್ತಪಡಿಸಿರುತ್ತಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 