ಥ್ರೋ ಬಾಲ್ ಹಾಗೂ ಚೆಸ್ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳ ಪ್ರಥಮ ಸ್ಥಾನ: ಜಿಲ್ಲಾ ಮಟ್ಟಕ್ಕೆ ಆಯ್ಕೆ
Students place first in throw ball and chess competition: Selected for district level
ಗದಗ 23: ಇತ್ತಿಚೆಗೆ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ನಗರದ ಮೈಲಾರ್ಪ ಮೆಣಸಗಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ.
ಆದಿಯೋಗಿ ಎಜುಕೇಷನಲ್ ಟ್ರಸ್ಟ್ ನ ಸಹ ಸಂಸ್ಥೆಯಾದ ಇನ್ಸೈಟ್ ಅಕಾಡೆಮಿಯ ತರಬೇತಿಯಲ್ಲಿ ಮೈಲಾರ್ಪ ಮೆಣಸಗಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ಗದಗ ಬಿ ವಲಯದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕರ ಮತ್ತು ಬಾಲಕೀಯರ ಶೆಟಲ್ ಬ್ಯಾಟ್ ಮಿಟನ್ ಮತ್ತು ಬಾಲಕೀಯರ ಥ್ರೋ ಬಾಲ್ ಹಾಗೂ ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಯಾಗಿದ್ದಾರೆ.
ಮೈಲಾರ್ಪ ಮೆಣಸಗಿ ಮೆಮೋರಿಯಲ್ ಟ್ರಸ್ಟ್ನ ಕಾರ್ಯಾಧ್ಯಕ್ಷ ಡಾ. ಜಯದೇವ ಮೆಣಸಗಿ ಹಾಗೂ ಆಡಳಿತ ಮಂಡಳಿಯವರು ವಿದ್ಯಾರ್ಥಿಗಳಿಗೆ ಮತ್ತು ಉತ್ತಮ ತರಬೇತಿ ನೀಡಿದ ಇನ್ಸೈಟ್ ಅಕಾಡೆಮಿ ಸದಸ್ಯರಿಗೆ, ಕಾಲೇಜು ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಆದಿಯೋಗಿ ಎಜುಕೇಷನಲ್ ಟ್ರಸ್ಟ್ ನ ಅಧ್ಯಕ್ಷ ಶ್ರೀಕಾಂತಗೌಡ ಪಾಟೀಲ್, ಪವನ್ ಕುಮಾರ್ ಶೇಠ್, ಕುಮಾರ್ ರಾಥೋಡ್, ಎನ್.ಎಂ. ಮುಲ್ಲಾ, ಶರಣು ಮರಗುದ್ದಿ, ವಸೀಂ ರಾಜ್ ದೊಡ್ಡಮನಿ ಪ್ರಾಚಾರ್ಯ ಶರತ್ ಕುಮಾರ್ ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ ತೋರುವಂತೆ ಶುಭಕೋರಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 