ಬಾಲಕಿಯರ ಹಾಸ್ಟೆಲ್ ಆರಂಭಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
Students protest demanding the opening of a girls' hostel
ಶಿರಹಟ್ಟಿ ೨೪: ಪಟ್ಟಣದಲ್ಲಿ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ಗಾಗಿ ಸುಸಜ್ಜಿತ ಕಟ್ಟಡ ನಿರ್ಮಿಸಿ ಹಲವು ವರ್ಷಗಳು ಕಳೆದರೂ ಇದುವರೆಗೆ ಹಾಸ್ಟೆಲ್ ಆರಂಭಿಸದಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ತಾಲೂಕು ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ದೂರದ ಗ್ರಾಮಗಳಿಂದ ಶಿರಹಟ್ಟಿಗೆ ಬಂದು ಶಿಕ್ಷಣ ಪಡೆಯುವ ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಈಗಾಗಲೇ ಸುಸಜ್ಜಿತ ಕಟ್ಟಡ ನಿರ್ಮಿಸಿದೆ. ಆದರೆ ಹಲವು ವರ್ಷಗಳಿಂದ ಕಟ್ಟಡ ಬಳಕೆಯಾಗದೆ ಉಳಿದಿದ್ದು, ವಿದ್ಯಾರ್ಥಿನಿಯರು ವಸತಿ ಸೌಲಭ್ಯಕ್ಕಾಗಿ ಪರದಾಡುವಂತಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಹಾಸ್ಟೆಲ್ ಆರಂಭಿಸುವAತೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳೇ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿಗಳು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ವಿಷಯ ತಿಳಿದು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ರಾಘವೇಂದ್ರ ರಾವ್ ಅವರು ಪ್ರತಿಭಟನಾ ನಿರತ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿ ಮನವಿ ಸ್ವೀಕರಿಸಿದರು. ಸಮಸ್ಯೆಯನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಆದಷ್ಟು ಶೀಘ್ರದಲ್ಲಿ ಬಾಲಕಿಯರ ಹಾಸ್ಟೆಲ್ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಕಟ್ಟಡ ನಿರ್ಮಿಸಿ ವರ್ಷಗಳೇ ಕಳೆದರೂ ಹಾಸ್ಟೆಲ್ ಆರಂಭಿಸದಿರುವುದು ವಿದ್ಯಾರ್ಥಿಗಳು ಹಾಗೂ ಪಾಲಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಅಧಿಕಾರಿಗಳು ನೀಡಿರುವ ಭರವಸೆಯನ್ನು ಶೀಘ್ರ ಕಾರ್ಯರೂಪಕ್ಕೆ ತಂದು ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ವಿದ್ಯಾರ್ಥಿಗಳಾದ ಪರಶುರಾಮ ಕಳ್ಳಿಮನಿ, ಅಭಿಷೇಕ ಉಮಚಗಿ, ಸಂಜನಾ ಪಾಟೀಲ್, ಸವಿತಾ, ಅನು ಅಣ್ಣಿಗೇರಿ, ಪಾರ್ವತಿ ಬಳಿಗೆರ್, ರೇಖಾ ಪಾಟೀಲ್, ಶಶಾಂಕ ಪಲ್ಲೆದ, ಸೋಮಶೇಖರ ದೇಸಾಯಿ ಪಾಟೀಲ್, ಬಸವರಾಜ ಪೂಜಾರ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 